< Hesekiel 41 >
1 Und er ließ mich in den Tempel eingehen, und er maß die Pfeiler, sechs Ellen Breite hier und sechs Ellen Breite dort, nach der Breite des Zeltes.
೧ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.
2 Und die Breite des Eingangs war zehn Ellen, und die Seiten des Eingangs fünf Ellen hier und fünf Ellen dort, und er maß seine Länge, vierzig Ellen und die Breite zwanzig Ellen.
೨ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು.
3 Und er ging in das Innere und maß den Pfeiler des Eingangs, zwei Ellen, und den Eingang, sechs Ellen, und die Breite des Eingangs sieben Ellen.
೩ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು.
4 Und er maß seine Länge, zwanzig Ellen, und die Breite, zwanzig Ellen vor dem Tempel; und er sprach zu mir: Dies ist das Heilige der Heiligen.
೪ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು.
5 Und er maß die Wand des Hauses, sechs Ellen, und die Breite des Seitengemachs vier Ellen, ringsum und rings um das Haus herum.
೫ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.
6 Und die Seitengemächer, Seitengemach an Seitengemach waren es dreiunddreißig, zweimal, und sie gingen herein in die Wand am Hause, die für die Seitengemächer ringsum, ringsum war zum Ergreifen, aber in die Wand des Hauses selbst griffen sie nicht ein.
೬ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಆದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ.
7 Und es ward breiter aufwärts und aufwärts, wie es umherlief; denn die Umgänge am Hause waren übereinander, ringsum, rings um das Haus. Darum nahm die Breite am Hause aufwärts zu, wie man von unteren durch das mittlere nach dem oberen aufstieg.
೭ಸುತ್ತಣ ಅಂತಸ್ತುಗಳು ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ತಬ್ಬಿಕೊಂಡಂತೆ ಕಟ್ಟಲ್ಪಟ್ಟಿತ್ತು. ಹೀಗೆ ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು. ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದರು.
8 Und ich sah am Hause die Höhe ringsum, ringsum von den Grundlagen der Seitengemächer, eine volle Rute, sechs Ellen bis an das Gelenk.
೮ದೇವಸ್ಥಾನದ ಸುತ್ತುಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು.
9 Die Breite der Mauer zum Seitengemach nach außen war fünf Ellen, und was gelassen wurde, war das Inwendige der Seitengemächer des Hauses.
೯ಕೊಠಡಿಗಳ ಹೊರ ಗೋಡೆಯ ದಪ್ಪವು ಐದು ಮೊಳವಿತ್ತು ಮತ್ತು ಉಳಿದದ್ದು, ಒಳಗಿನ ಪಕ್ಕದ ಕೊಠಡಿಗಳ ಸ್ಥಳವಾಗಿತ್ತು.
10 Und zwischen den Zellen war eine Breite von zwanzig Ellen, rings um das Haus, ringsum und ringsum.
೧೦ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ, ಪ್ರತ್ಯೇಕಿಸಿದ ಸ್ಥಳದ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.
11 Und der Eingang zum Seitengemach war nach dem Freigelassenen, ein Eingang des Weges gen Mitternacht, und ein Eingang gen Mittag, und die Breite des freigelassenen Raumes war fünf Ellen ringsum und um.
೧೧ಆ ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರಕ್ಕೊಂದು, ದಕ್ಷಿಣಕ್ಕೊಂದು. ಅವೆರಡೂ ಜಗಲಿಯ ಕಡೆಗಿದ್ದವು. ಆ ಜಗಲಿಗಳೂ ಎಲ್ಲಾ ಸುತ್ತಲಿನ ಅಗಲವು ಐದು ಮೊಳವಾಗಿತ್ತು.
12 Und der Bau auf der Fläche des Hofraumes an der Ecke des Weges nach dem Meere war siebzig Ellen die Breite, und die Wand des Baues hatte eine Breite von fünf Ellen ringsum und ringsum, und seine Länge neunzig Ellen.
೧೨ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು.
13 Und er maß das Haus, eine Länge von hundert Ellen, und den Hofraum, und den Bau und seine Wände, eine Länge von hundert Ellen;
೧೩ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.
14 Und die Breite der Vorderseite des Hauses und den Hofraum gegen Osten hundert Ellen.
೧೪ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು.
15 Und er maß die Länge des Baues vor dem Hofraum dahinter, und seine Galerien hier und dort hundert Ellen, und den inneren Tempel und des Vorhofs Hallen;
೧೫ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.
16 Die Schwellen und die verengten Fenster und die Galerien ringsum an den drei Seiten, gegenüber der Schwelle, war hölzernes Getäfel ringsum, ringsum, und von der Erde bis zu den Fenstern, und die Fenster waren bedeckt;
೧೬ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.
17 Über dem Eingang oben und bis in das innere Haus und außen und an der ganzen Wand ringsum, ringsum, im Inwendigen und im Auswendigen war es nach den Maßen.
೧೭ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿಗಿದ್ದವು.
18 Und waren gemacht Cherube und Palmen, und eine Palme zwischen Cherub und Cherub, und der Cherub hatte zwei Gesichter.
೧೮ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.
19 Und eines Menschen Angesicht der Palme zu hüben, und eines jungen Löwen Angesicht der Palme zu drüben. Das ward getan dem ganzen Haus ringsum, ringsum.
೧೯ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು.
20 Von der Erde bis oberhalb des Eingangs waren die Cherube und die Palmen gemacht, und an der Wand des Tempels.
೨೦ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.
21 Die Türpfosten des Tempels waren viereckig und am Vorderteil des Heiligtums war Ansehen wie Ansehen.
೨೧ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.
22 Der Altar von Holz war drei Ellen an Höhe und seine Länge zwei Ellen. Und die Ecken an ihm und seine Länge und seine Wände waren von Holz. Und er redete zu mir: Dies ist der Tisch, der vor Jehovah ist.
೨೨ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.
23 Und zwei Türflügel hatte der Tempel und das Heiligtum.
೨೩ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು.
24 Und zwei Türflügel hatten die Türen, zwei sich umwendende Türflügel; zwei für die eine Tür und zwei Türflügel für die andere.
೨೪ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.
25 Und an ihnen, an den Türflügeln des Tempels, waren Cherube und Palmen gemacht, so wie sie an den Wänden gemacht waren. Auch waren dicke Balken vorne außen an der Vorhalle.
೨೫ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.
26 Und die Fenster waren geschlitzt, und Palmen hüben und drüben an den Seiten der Vorhalle und an den Seitengemächern des Hauses und an den Balken.
೨೬ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.