< Joel 3 >
1 Denn siehe, in jenen Tagen und zu selbiger Zeit werde Ich zurückbringen die Gefangenschaft Jehudahs und Jerusalems.
೧ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,
2 Und alle Völkerschaften will Ich zusammenbringen und hinabführen in den Talgrund Jehoschaphat, und rechten allda mit ihnen über Mein Volk und Mein Erbe Israel, daß sie es versprengt haben unter die Völkerschaften und Mein Land geteilt;
೨ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.
3 Und um Mein Volk das Los geworfen, und gegeben den Knaben um eine Buhlerin, und das Mägdlein um Wein verkauft, den sie vertranken.
೩ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.
4 Und ihr auch, Zor und Zidon, und all ihr Kreise des Philisterlandes, was wollt ihr von Mir? Wollt ihr Mir mit Erwiderung vergelten? Und wollt ihr Mir erwidern? Schnell, eilends lasse Ich eure Erwiderung auf euer Haupt zurückfallen.
೪ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.
5 Die ihr Mein Silber und Mein Gold habt genommen, und Mein gutes Begehrtes in eure Tempel habt gebracht;
೫ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.
6 Und Jehudahs Söhne und die Söhne Jerusalems verkauft an Javans Söhne, um sie von ihrer Grenze zu entfernen;
೬ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.
7 Siehe, Ich erwecke sie auf aus dem Orte, dahin ihr sie verkauft, und bringe die Erwiderung zurück auf euer Haupt.
೭ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.
8 Und verkaufe eure Söhne und eure Töchter in die Hand der Söhne Jehudahs, und sie verkaufen sie an die Sabäer, an eine ferne Völkerschaft; denn Jehovah hat es geredet.
೮ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.
9 Rufet dies aus unter die Völkerschaften, heiligt den Streit, weckt auf die Helden, sie sollen herzutreten, heraufziehen alle Männer des Streites!
೯ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.
10 Eure Hacken schmiedet euch zu Schwertern um, zu Speeren eure Winzermesser! Es spreche der Schwache: Ich bin mächtig!
೧೦ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ.
11 Tut euch zusammen und kommt, all ihr Völkerschaften ringsumher, und kommt zusammen allda! Laß Deine Helden hinabziehen, Jehovah.
೧೧ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.
12 Die Völkerschaften werden auferweckt und kommen herauf in den Talgrund Jehoschaphat: denn allda werde Ich sitzen, zu richten alle Völkerschaften ringsumher.
೧೨ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.
13 Streckt aus die Sichel, denn die Ernte ist reif. Kommt, zieht hinab; denn voll ist die Kelter, die Kufen fließen über; denn viel ist ihrer Bosheit.
೧೩ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ.
14 Haufen über Haufen im Talgrund der Entscheidung; denn nahe ist der Tag Jehovahs im Talgrund der Entscheidung.
೧೪ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
15 Sonne und Mond verdunkeln sich und die Sterne ziehen ihren Glanz zusammen.
೧೫ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.
16 Und Jehovah brüllt aus Zijon, und aus Jerusalem gibt Er Seine Stimme hervor, und Himmel und Erde erbeben; aber Jehovah ist ein Verlaß Seinem Volk und die Stärke den Söhnen Israels.
೧೬ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
17 Und ihr werdet erkennen, daß Ich Jehovah bin, euer Gott, Der auf Zijon wohnt, dem Berge Meiner Heiligkeit; und Jerusalem wird Heiligkeit sein; und Fremde sollen nicht mehr hindurchgehen!
೧೭ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.
18 Und am selben Tage wird geschehen, daß von Most die Berge triefen und von Milch die Hügel fließen, und alle Flußbette Jehudahs mit Wasser flie-ßen, und vom Hause Jehovahs ein Quell ausgeht und tränkt das Bachtal von Schittim.
೧೮ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.
19 Ägypten wird zur Verwüstung werden, und Edom zur Wüste der Verwüstung ob der Gewalttat gegen Jehudahs Söhne, in deren Land sie haben unschuldig Blut vergossen.
೧೯ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
20 Jehudah aber wird sitzen ewiglich und Jerusalem zu Geschlecht und Geschlecht.
೨೦ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.
21 Und Ich werde unschuldig erklären ihr Blut, das Ich nicht unschuldig erklärt, und Jehovah wird wohnen in Zijon.
೨೧ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.