< 4 Mose 19 >
1 Und Jehovah redete zu Mose und zu Aharon und sprach:
೧ಯೆಹೋವನು ಮೋಶೆ ಮತ್ತು ಆರೋನರಿಗೆ ಹೀಗೆ ಆಜ್ಞಾಪಿಸಿದನು,
2 Dies ist die Satzung des Gesetzes, die Jehovah geboten hat und gesagt: Rede zu den Söhnen Israels, sie sollen dir eine rote Färse ohne Fehl, an der kein Makel ist, auf die noch kein Joch gekommen, nehmen,
೨“ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
3 Und sie dem Priester Eleasar geben; und er bringe sie hinaus außerhalb des Lagers und lasse sie vor ihm schlachten.
೩ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.
4 Und der Priester Eleasar nehme von ihrem Blut mit seinem Finger und spritze von ihrem Blut siebenmal gegenüber der Vorderseite des Versammlungszeltes.
೪ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
5 Und lasse die Färse vor seinen Augen verbrennen; ihre Haut und ihr Fleisch und ihr Blut samt ihrem Mist verbrenne man.
೫ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
6 Und der Priester nehme Zedernholz und Ysop und doppelt gefärbten Scharlach und werfe sie mitten in den Brand der Färse.
೬ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.
7 Und der Priester wasche seine Kleider und bade sein Fleisch im Wasser, und danach komme er herein in das Lager; aber der Priester ist unrein bis zum Abend.
೭ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
8 Und der sie verbrannt hat, soll seine Kleider im Wasser waschen, und sein Fleisch baden im Wasser und unrein sein bis zum Abend.
೮ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
9 Und ein reiner Mann sammle die Asche der Färse und lege sie an einen reinen Ort außerhalb des Lagers nieder; und sie bleibe in Verwahrung zum Wasser der Ausscheidung für die Gemeinde der Söhne Israels. Ein Sündopfer ist es.
೯“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
10 Der aber die Asche von der Färse gesammelt, wasche seine Kleider und ist unrein bis zum Abend. Und dies sei ewige Satzung für die Söhne Israels und für den Fremdling, der sich in ihrer Mitte aufhält.
೧೦ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
11 Wer einen Toten, die Leiche irgendeines Menschen anrührt, soll sieben Tage unrein sein.
೧೧“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
12 Der lasse sich damit entsündigen am dritten Tage und am siebenten Tage wird er rein. Und läßt er sich nicht entsündigen am dritten und am siebenten Tag, so wird er nicht rein.
೧೨ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.
13 Wer einen Toten, die Leiche eines Menschen anrührt, der gestorben ist, und sich nicht entsündigen läßt, der verunreinigt die Wohnung Jehovahs, und diese Seele werde ausgerottet aus Israel. Weil das Wasser der Ausscheidung nicht auf ihn gesprengt worden, ist er unrein; seine Unreinheit ist noch auf ihm.
೧೩ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
14 Dies ist das Gesetz: Wenn ein Mensch stirbt im Zelt, so ist jeder, der in das Zelt hineinkommt, und jeder, der im Zelte ist, sieben Tage unrein.
೧೪“ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.
15 Und alles Gerät, das offen ist, und auf das kein Deckel gebunden ist, ist unrein.
೧೫ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.
16 Und jeder, der auf dem Angesichte des Feldes einen vom Schwert Erschlagenen oder einen Toten oder Menschengebeine oder ein Grab anrührt, ist sieben Tage unrein.
೧೬ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
17 Und sie sollen nehmen für den Unreinen von dem Staube des verbrannten Sündopfers und frisches Wasser in ein Gefäß schütten;
೧೭“ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
18 Und ein reiner Mann nehme Ysop und tauche denselben in das Wasser und spritze auf das Zelt und auf alle Gefäße und auf die Seelen, die daselbst waren, und auf den, der ein Gebein oder einen Erschlagenen oder einen Toten oder ein Grab angerührt.
೧೮ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
19 Und der Reine sprenge auf den Unreinen am dritten Tag und am siebenten Tag und entsündige ihn am siebenten Tag. Und er soll seine Kleider waschen und baden im Wasser, und am Abend rein sein.
೧೯ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.
20 Und ein Mann, der unrein ist, und sich nicht entsündigen läßt, solche Seele soll ausgerottet werden aus der Mitte der Versammlung; denn er hat Jehovahs Heiligtum verunreinigt. Das Wasser der Ausscheidung ist nicht über ihn gesprengt worden: er ist unrein.
೨೦ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.
21 Und dies soll ihnen ewige Satzung sein. Und der da mit dem Ausscheidungswasser besprengt, soll seine Kleider waschen, und der das Ausscheidungswasser anrührt, sei unrein bis zum Abend.
೨೧“ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
22 Und alles, was der Unreine anrührt, wird unrein, und die Seele, die ihn anrührt, wird unrein bis zum Abend.
೨೨ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”