< Maka 1 >

1 Jesu kilisiti U Tienu bijua, ya laabaalihamo cilima.
ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
2 Nani lan diani maama o saawalipualo Esayi tili maama ki yedi: N soani a liiga n mawangikoa wan bogini a sanu.
ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
3 Li tie yua n kpaani mi fanpienma nni yaa nialu: Bogini mani o diedo sanu, ki piini ti sanbuodi.
“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
4 Jan den doagidi mi fanpienma nni ki batisi bi niba ki tua: lebidi mani yi yama ki ha yi tuonbiadi.
ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
5 Jude dogu nni yaaba leni yaaba n ye Jelusalema kuli den kpenda o kani ki doagidi bi tuonbiadi ki cedi ke o batisi ba Judana kpenu nni.
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
6 Jan den yie ti yuoyuokobidi ki luo ku gbanñagigu o den di i gbangbanli leni ti siadi.
ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
7 O den maadi ki tua: nitoa hua n puoli yua n pia u paalu ki cie nni mii pundi ba yua n ba lodi opo o cacaabaabu.
ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
8 Mini n batisi yi leni mi ñima ama wani o baa batisi yi leni U Tienu fuoma yua.
ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
9 Laa yogunu Jesu den ñani Nasaleti ki gedi Galile ke Jan batisi o Judana kpenu nni; wan den ña mi ñima yaa yogunu tanpoli den luodi ke
ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
10 U Tienu fuoma den jiidi opo nani ki kpaajiega
೧೦ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
11 ke u nialu ñani tanpoli ki yedi: fini n tie n bijabuadiga n pali n mani yua yaa po.
೧೧ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
12 Lanyogunu U Tienu fuoma yua den gedini Jesu mi fanpienma nni
೧೨ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
13 wan den tieni naani dana piina ke Sutaani den tulini o, o den ye leni ti fuayandi malekinba den tuuni opo.
೧೩ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
14 Ban den cuo jan Jesu den galile ki ban wangi U Tienu laabaalihamo.
೧೪ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
15 O den tua: u yogunu pundi U Tienu diema nagini lebidi mani yi pala ki daani o laabaalihamo.
೧೫“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
16 Nani Jesu n den pendi Galile kpenu kani, o den la Simono leni o waalo Andile ke bi lu bi taalu mi ñima nni kelima bi den tie jankpaanla,
೧೬ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
17 Jesu den yedi ba ŋoadi mani nni n baa teni moala liiga yin yaa ji lingi npo bi niba;
೧೭ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
18 lanyogunu bi den ŋa bi taali ki ŋoadi o.
೧೮ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
19 Wan den suagi liiga waamu o den la jaka leni sebede bijua leni o waalo jan ke bani moko ŋanbidi bi taalu.
೧೯ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
20 Lan yogunu Jesu den yini ba ke bi ŋa bi ba sebede leni bi naacenba ku ñinbiagu nni ki hoadi o.
೨೦ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
21 Bi den gedi kapenayuma U Tienu fuodima daali Jesu den kua li balimaama bangidieli nni ki bangi
೨೧ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
22 o bangima den cuo bi pala kelima o den bangi leni li bali kaa ta leni li balimaama bangikaaba.
೨೨ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
23 Li den sua ke li balimaama bangi dieli nni pia ya nilo n pia ki cicibiadiga ke o kpaani ki tua:
೨೩ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
24 be n ye tinba leni fini siiga Nasaleti yua Jesu n bani han tie yua a cua ki ba bolini ti a tie U Tienu n gandi yua.
೨೪ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
25 Jesu den funi leni ga ki yedi o: suo ki ña o joa ne niinni;
೨೫ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
26 ki den digibi leni u paalu leni ku fuciangu ki ñani o joa yeni niini.
೨೬ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
27 Ti jawaaciandi den cuo bi kuli hali ke bi buali bi yaba be mo n yeni bangi canme kelima o maadi leni a cicibiada leni li bali ke bi tuodi ki tiendi wan yedi yaala.
೨೭ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
28 Lanyogunu o laabaalo den pundi galile gaanilindima kuli.
೨೮ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
29 Ban den ñani U Tienu diegu nni wan leni Jaka leni Jan den gedi Simono leni Andile denpo.
೨೯ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
30 Simono cuadina den dua leni ti gbannanbiendi lanyogunu bi den maadi Jesu o maama
೩೦ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
31 o den nagini o kani ki cuo o buagu ki fiini o, lanyogunu o gbannanbiendi den gbeni ke o ga bi cangu.
೩೧ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
32 Ku yenjuagu ki yenga n den kua ya yagunu, bi den cuani Jesu kani a yiama leni o cicibiada n ye yaaba yaa niinni kuli.
೩೨ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
33 U dogu nni yaaba kuli den taani Simono buliñoabu kani.
೩೩ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
34 O den paagi bi niba boncianla yaaba n den pia yianbuolibuoli o go den deli a cicibiada ban ye yaaba ya niinni. waa den tuodi ke mu cicibiadimu maadi kelima mu den bani wan tie yua.
೩೪ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
35 Lan den goa a yenda po, lan da den biigi ya yogunu Jesu den ñani ki gedi mi fanpienma po wan den jaandi naani.
೩೫ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
36 Simono leni yaaba n den ye leni o kuli den cili ki lingi o.
೩೬ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
37 Ban den ban la o, bi den yedi o bi niba kuli lingi a.
೩೭ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
38 Jesu den yedi ba tin gedi mani i tinkundogi nni min ban waani bani moko o laabaali hamo kelima n ñani li yaa po yo.
೩೮ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
39 O den goadi Galile diema nni kuli, ki koa li balimaama bangi diena nni ki wangi U Tienu maama, ki go deli a cicibiada.
೩೯ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
40 O kpaado den cua Jesu kani ki gbaani ki mia o ki yedi o: a yaa bua a baa fidi ki hanbi nni.
೪೦ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
41 Mi niŋima den cuo Jesu opo ke o tandi o nu ki sii o ki yedi: N bua hanbi.
೪೧ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
42 Lanyogunu mi gbaadima den gbeni opo ke o ŋanbi.
೪೨ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
43 Jesu den maadi o leni li bali ki yedi: ŋan kubi a yuli ki da waani niloba yaala n tieni
೪೩ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
44 ama ŋan gedi o kopadiciamo po ki ban padi a ŋanbima po nani Musa n den diani maama lan tua bi po seedi.
೪೪ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
45 Ama laa joa n den gedi o den ban kpaani laa bonla ŋali maama ke Jesu kan den fidi ki kua laa dogu nni bi niba n nua o yaa yogunu. O den ye niini po mi fanpienma nni bi niba den ña i kaani kuli ki kpendi o kani.
೪೫ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.

< Maka 1 >