< Παραλειπομένων Αʹ 15 >
1 καὶ ἐποίησεν αὐτῷ οἰκίας ἐν πόλει Δαυιδ καὶ ἡτοίμασεν τὸν τόπον τῇ κιβωτῷ τοῦ θεοῦ καὶ ἐποίησεν αὐτῇ σκηνήν
೧ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.
2 τότε εἶπεν Δαυιδ οὐκ ἔστιν ἆραι τὴν κιβωτὸν τοῦ θεοῦ ἀλλ’ ἢ τοὺς Λευίτας ὅτι αὐτοὺς ἐξελέξατο κύριος αἴρειν τὴν κιβωτὸν κυρίου καὶ λειτουργεῖν αὐτῷ ἕως αἰῶνος
೨ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.
3 καὶ ἐξεκκλησίασεν Δαυιδ τὸν πάντα Ισραηλ εἰς Ιερουσαλημ τοῦ ἀνενέγκαι τὴν κιβωτὸν κυρίου εἰς τὸν τόπον ὃν ἡτοίμασεν αὐτῇ
೩ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
4 καὶ συνήγαγεν Δαυιδ τοὺς υἱοὺς Ααρων καὶ τοὺς Λευίτας
೪ದಾವೀದನು ಕರೆಯಿಸಿದ ಆರೋನನ ವಂಶದವರು, ಲೇವಿಯರು,
5 τῶν υἱῶν Κααθ Ουριηλ ὁ ἄρχων καὶ οἱ ἀδελφοὶ αὐτοῦ ἑκατὸν εἴκοσι
೫ಕೆಹಾತ್ಯರಲ್ಲಿ ಊರೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಿಪ್ಪತ್ತು ಜನರು,
6 τῶν υἱῶν Μεραρι Ασαια ὁ ἄρχων καὶ οἱ ἀδελφοὶ αὐτοῦ διακόσιοι πεντήκοντα
೬ಮೆರಾರೀಯರಲ್ಲಿ ಅಸಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರಿಪ್ಪತ್ತು ಜನರು,
7 τῶν υἱῶν Γηρσαμ Ιωηλ ὁ ἄρχων καὶ οἱ ἀδελφοὶ αὐτοῦ ἑκατὸν πεντήκοντα
೭ಗೇರ್ಷೋಮ್ಯರಲ್ಲಿ ಯೋವೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಮೂವತ್ತು ಜನರು,
8 τῶν υἱῶν Ελισαφαν Σαμαιας ὁ ἄρχων καὶ οἱ ἀδελφοὶ αὐτοῦ διακόσιοι
೮ಎಲೀಚಾಫಾನ್ಯರಲ್ಲಿ ಶೆಮಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರು ಜನರು,
9 τῶν υἱῶν Χεβρων Ελιηλ ὁ ἄρχων καὶ οἱ ἀδελφοὶ αὐτοῦ ὀγδοήκοντα
೯ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಎಂಭತ್ತು ಜನರು
10 τῶν υἱῶν Οζιηλ Αμιναδαβ ὁ ἄρχων καὶ οἱ ἀδελφοὶ αὐτοῦ ἑκατὸν δέκα δύο
೧೦ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.
11 καὶ ἐκάλεσεν Δαυιδ τὸν Σαδωκ καὶ Αβιαθαρ τοὺς ἱερεῖς καὶ τοὺς Λευίτας τὸν Ουριηλ Ασαια Ιωηλ Σαμαιαν Ελιηλ Αμιναδαβ
೧೧ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,
12 καὶ εἶπεν αὐτοῖς ὑμεῖς ἄρχοντες πατριῶν τῶν Λευιτῶν ἁγνίσθητε ὑμεῖς καὶ οἱ ἀδελφοὶ ὑμῶν καὶ ἀνοίσετε τὴν κιβωτὸν τοῦ θεοῦ Ισραηλ οὗ ἡτοίμασα αὐτῇ
೧೨ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
13 ὅτι οὐκ ἐν τῷ πρότερον ὑμᾶς εἶναι διέκοψεν ὁ θεὸς ἡμῶν ἐν ἡμῖν ὅτι οὐκ ἐζητήσαμεν ἐν κρίματι
೧೩ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.
14 καὶ ἡγνίσθησαν οἱ ἱερεῖς καὶ οἱ Λευῖται τοῦ ἀνενέγκαι τὴν κιβωτὸν θεοῦ Ισραηλ
೧೪ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು.
15 καὶ ἔλαβον οἱ υἱοὶ τῶν Λευιτῶν τὴν κιβωτὸν τοῦ θεοῦ ὡς ἐνετείλατο Μωυσῆς ἐν λόγῳ θεοῦ κατὰ τὴν γραφήν ἐν ἀναφορεῦσιν ἐπ’ αὐτούς
೧೫ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.
16 καὶ εἶπεν Δαυιδ τοῖς ἄρχουσιν τῶν Λευιτῶν στήσατε τοὺς ἀδελφοὺς αὐτῶν τοὺς ψαλτῳδοὺς ἐν ὀργάνοις ᾠδῶν νάβλαις καὶ κινύραις καὶ κυμβάλοις τοῦ φωνῆσαι εἰς ὕψος ἐν φωνῇ εὐφροσύνης
೧೬ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.
17 καὶ ἔστησαν οἱ Λευῖται τὸν Αιμαν υἱὸν Ιωηλ ἐκ τῶν ἀδελφῶν αὐτοῦ Ασαφ υἱὸς Βαραχια καὶ ἐκ τῶν υἱῶν Μεραρι ἀδελφῶν αὐτοῦ Αιθαν υἱὸς Κισαιου
೧೭ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,
18 καὶ μετ’ αὐτῶν ἀδελφοὶ αὐτῶν οἱ δεύτεροι Ζαχαριας καὶ Οζιηλ καὶ Σεμιραμωθ καὶ Ιιηλ καὶ Ωνι καὶ Ελιαβ καὶ Βαναια καὶ Μαασαια καὶ Ματταθια καὶ Ελιφαλια καὶ Μακενια καὶ Αβδεδομ καὶ Ιιηλ καὶ Οζιας οἱ πυλωροί
೧೮ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.
19 καὶ οἱ ψαλτῳδοί Αιμαν Ασαφ καὶ Αιθαν ἐν κυμβάλοις χαλκοῖς τοῦ ἀκουσθῆναι ποιῆσαι
೧೯ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.
20 Ζαχαριας καὶ Οζιηλ Σεμιραμωθ Ιιηλ Ωνι Ελιαβ Μασαιας Βαναιας ἐν νάβλαις ἐπὶ αλαιμωθ
೨೦ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.
21 καὶ Ματταθιας καὶ Ελιφαλιας καὶ Μακενιας καὶ Αβδεδομ καὶ Ιιηλ καὶ Οζιας ἐν κινύραις αμασενιθ τοῦ ἐνισχῦσαι
೨೧ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ದ್ವಾರಪಾಲಕರಾದ ಓಬೇದೆದೋಮ ಯೆಗೀಯೇಲರು ಅಹಜ್ಯ ಎಂಬವರು ಗಾಯಕ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ನುಡಿಸುವವರನ್ನು ನೆಮಿಸಿಕೊಂಡನು.
22 καὶ Χωνενια ἄρχων τῶν Λευιτῶν ἄρχων τῶν ᾠδῶν ὅτι συνετὸς ἦν
೨೨ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.
23 καὶ Βαραχια καὶ Ηλκανα πυλωροὶ τῆς κιβωτοῦ
೨೩ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು.
24 καὶ Σοβνια καὶ Ιωσαφατ καὶ Ναθαναηλ καὶ Αμασαι καὶ Ζαχαρια καὶ Βαναι καὶ Ελιεζερ οἱ ἱερεῖς σαλπίζοντες ταῖς σάλπιγξιν ἔμπροσθεν τῆς κιβωτοῦ τοῦ θεοῦ καὶ Αβδεδομ καὶ Ιια πυλωροὶ τῆς κιβωτοῦ τοῦ θεοῦ
೨೪ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.
25 καὶ ἦν Δαυιδ καὶ οἱ πρεσβύτεροι Ισραηλ καὶ οἱ χιλίαρχοι οἱ πορευόμενοι τοῦ ἀναγαγεῖν τὴν κιβωτὸν τῆς διαθήκης κυρίου ἐξ οἴκου Αβδεδομ ἐν εὐφροσύνῃ
೨೫ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,
26 καὶ ἐγένετο ἐν τῷ κατισχῦσαι τὸν θεὸν τοὺς Λευίτας αἴροντας τὴν κιβωτὸν τῆς διαθήκης κυρίου καὶ ἔθυσαν ἑπτὰ μόσχους καὶ ἑπτὰ κριούς
೨೬ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.
27 καὶ Δαυιδ περιεζωσμένος ἐν στολῇ βυσσίνῃ καὶ πάντες οἱ Λευῖται αἴροντες τὴν κιβωτὸν διαθήκης κυρίου καὶ οἱ ψαλτῳδοὶ καὶ Χωνενιας ὁ ἄρχων τῶν ᾠδῶν τῶν ᾀδόντων καὶ ἐπὶ Δαυιδ στολὴ βυσσίνη
೨೭ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.
28 καὶ πᾶς Ισραηλ ἀνάγοντες τὴν κιβωτὸν διαθήκης κυρίου ἐν σημασίᾳ καὶ ἐν φωνῇ σωφερ καὶ ἐν σάλπιγξιν καὶ ἐν κυμβάλοις ἀναφωνοῦντες νάβλαις καὶ ἐν κινύραις
೨೮ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.
29 καὶ ἐγένετο κιβωτὸς διαθήκης κυρίου καὶ ἦλθεν ἕως πόλεως Δαυιδ καὶ Μελχολ θυγάτηρ Σαουλ παρέκυψεν διὰ τῆς θυρίδος καὶ εἶδεν τὸν βασιλέα Δαυιδ ὀρχούμενον καὶ παίζοντα καὶ ἐξουδένωσεν αὐτὸν ἐν τῇ ψυχῇ αὐτῆς
೨೯ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.