< Βασιλειῶν Αʹ 13 >
೧ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.
2 καὶ ἐκλέγεται Σαουλ ἑαυτῷ τρεῖς χιλιάδας ἀνδρῶν ἐκ τῶν ἀνδρῶν Ισραηλ καὶ ἦσαν μετὰ Σαουλ δισχίλιοι ἐν Μαχεμας καὶ ἐν τῷ ὄρει Βαιθηλ χίλιοι ἦσαν μετὰ Ιωναθαν ἐν Γαβεε τοῦ Βενιαμιν καὶ τὸ κατάλοιπον τοῦ λαοῦ ἐξαπέστειλεν ἕκαστον εἰς τὸ σκήνωμα αὐτοῦ
೨ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.
3 καὶ ἐπάταξεν Ιωναθαν τὸν Νασιβ τὸν ἀλλόφυλον τὸν ἐν τῷ βουνῷ καὶ ἀκούουσιν οἱ ἀλλόφυλοι καὶ Σαουλ σάλπιγγι σαλπίζει εἰς πᾶσαν τὴν γῆν λέγων ἠθετήκασιν οἱ δοῦλοι
೩ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.
4 καὶ πᾶς Ισραηλ ἤκουσεν λεγόντων πέπαικεν Σαουλ τὸν Νασιβ τὸν ἀλλόφυλον καὶ ᾐσχύνθησαν Ισραηλ ἐν τοῖς ἀλλοφύλοις καὶ ἀνεβόησαν ὁ λαὸς ὀπίσω Σαουλ ἐν Γαλγαλοις
೪ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
5 καὶ οἱ ἀλλόφυλοι συνάγονται εἰς πόλεμον ἐπὶ Ισραηλ καὶ ἀναβαίνουσιν ἐπὶ Ισραηλ τριάκοντα χιλιάδες ἁρμάτων καὶ ἓξ χιλιάδες ἱππέων καὶ λαὸς ὡς ἡ ἄμμος ἡ παρὰ τὴν θάλασσαν τῷ πλήθει καὶ ἀναβαίνουσιν καὶ παρεμβάλλουσιν ἐν Μαχεμας ἐξ ἐναντίας Βαιθων κατὰ νότου
೫ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
6 καὶ ἀνὴρ Ισραηλ εἶδεν ὅτι στενῶς αὐτῷ μὴ προσάγειν αὐτόν καὶ ἐκρύβη ὁ λαὸς ἐν τοῖς σπηλαίοις καὶ ἐν ταῖς μάνδραις καὶ ἐν ταῖς πέτραις καὶ ἐν τοῖς βόθροις καὶ ἐν τοῖς λάκκοις
೬ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
7 καὶ οἱ διαβαίνοντες διέβησαν τὸν Ιορδάνην εἰς γῆν Γαδ καὶ Γαλααδ καὶ Σαουλ ἔτι ἦν ἐν Γαλγαλοις καὶ πᾶς ὁ λαὸς ἐξέστη ὀπίσω αὐτοῦ
೭ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.
8 καὶ διέλιπεν ἑπτὰ ἡμέρας τῷ μαρτυρίῳ ὡς εἶπεν Σαμουηλ καὶ οὐ παρεγένετο Σαμουηλ εἰς Γαλγαλα καὶ διεσπάρη ὁ λαὸς αὐτοῦ ἀπ’ αὐτοῦ
೮ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
9 καὶ εἶπεν Σαουλ προσαγάγετε ὅπως ποιήσω ὁλοκαύτωσιν καὶ εἰρηνικάς καὶ ἀνήνεγκεν τὴν ὁλοκαύτωσιν
೯ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
10 καὶ ἐγένετο ὡς συνετέλεσεν ἀναφέρων τὴν ὁλοκαύτωσιν καὶ Σαμουηλ παραγίνεται καὶ ἐξῆλθεν Σαουλ εἰς ἀπάντησιν αὐτῷ εὐλογῆσαι αὐτόν
೧೦ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು
11 καὶ εἶπεν Σαμουηλ τί πεποίηκας καὶ εἶπεν Σαουλ ὅτι εἶδον ὡς διεσπάρη ὁ λαὸς ἀπ’ ἐμοῦ καὶ σὺ οὐ παρεγένου ὡς διετάξω ἐν τῷ μαρτυρίῳ τῶν ἡμερῶν καὶ οἱ ἀλλόφυλοι συνήχθησαν εἰς Μαχεμας
೧೧ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.
12 καὶ εἶπα νῦν καταβήσονται οἱ ἀλλόφυλοι πρός με εἰς Γαλγαλα καὶ τοῦ προσώπου τοῦ κυρίου οὐκ ἐδεήθην καὶ ἐνεκρατευσάμην καὶ ἀνήνεγκα τὴν ὁλοκαύτωσιν
೧೨ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
13 καὶ εἶπεν Σαμουηλ πρὸς Σαουλ μεματαίωταί σοι ὅτι οὐκ ἐφύλαξας τὴν ἐντολήν μου ἣν ἐνετείλατό σοι κύριος ὡς νῦν ἡτοίμασεν κύριος τὴν βασιλείαν σου ἕως αἰῶνος ἐπὶ Ισραηλ
೧೩ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
14 καὶ νῦν ἡ βασιλεία σου οὐ στήσεται καὶ ζητήσει κύριος ἑαυτῷ ἄνθρωπον κατὰ τὴν καρδίαν αὐτοῦ καὶ ἐντελεῖται κύριος αὐτῷ εἰς ἄρχοντα ἐπὶ τὸν λαὸν αὐτοῦ ὅτι οὐκ ἐφύλαξας ὅσα ἐνετείλατό σοι κύριος
೧೪ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
15 καὶ ἀνέστη Σαμουηλ καὶ ἀπῆλθεν ἐκ Γαλγαλων εἰς ὁδὸν αὐτοῦ καὶ τὸ κατάλειμμα τοῦ λαοῦ ἀνέβη ὀπίσω Σαουλ εἰς ἀπάντησιν ὀπίσω τοῦ λαοῦ τοῦ πολεμιστοῦ αὐτῶν παραγενομένων ἐκ Γαλγαλων εἰς Γαβαα Βενιαμιν καὶ ἐπεσκέψατο Σαουλ τὸν λαὸν τὸν εὑρεθέντα μετ’ αὐτοῦ ὡς ἑξακοσίους ἄνδρας
೧೫ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.
16 καὶ Σαουλ καὶ Ιωναθαν υἱὸς αὐτοῦ καὶ ὁ λαὸς οἱ εὑρεθέντες μετ’ αὐτῶν ἐκάθισαν ἐν Γαβεε Βενιαμιν καὶ ἔκλαιον καὶ οἱ ἀλλόφυλοι παρεμβεβλήκεισαν εἰς Μαχεμας
೧೬ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.
17 καὶ ἐξῆλθεν διαφθείρων ἐξ ἀγροῦ ἀλλοφύλων τρισὶν ἀρχαῖς ἡ ἀρχὴ ἡ μία ἐπιβλέπουσα ὁδὸν Γοφερα ἐπὶ γῆν Σωγαλ
೧೭ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ,
18 καὶ ἡ μία ἀρχὴ ἐπιβλέπουσα ὁδὸν Βαιθωρων καὶ ἡ ἀρχὴ ἡ μία ἐπιβλέπουσα ὁδὸν Γαβεε τὴν εἰσκύπτουσαν ἐπὶ Γαι τὴν Σαβιν
೧೮ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
19 καὶ τέκτων σιδήρου οὐχ εὑρίσκετο ἐν πάσῃ γῇ Ισραηλ ὅτι εἶπον οἱ ἀλλόφυλοι μὴ ποιήσωσιν οἱ Εβραῖοι ῥομφαίαν καὶ δόρυ
೧೯ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
20 καὶ κατέβαινον πᾶς Ισραηλ εἰς γῆν ἀλλοφύλων χαλκεύειν ἕκαστος τὸ θέριστρον αὐτοῦ καὶ τὸ σκεῦος αὐτοῦ καὶ ἕκαστος τὴν ἀξίνην αὐτοῦ καὶ τὸ δρέπανον αὐτοῦ
೨೦ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.
21 καὶ ἦν ὁ τρυγητὸς ἕτοιμος τοῦ θερίζειν τὰ δὲ σκεύη ἦν τρεῖς σίκλοι εἰς τὸν ὀδόντα καὶ τῇ ἀξίνῃ καὶ τῷ δρεπάνῳ ὑπόστασις ἦν ἡ αὐτή
೨೧ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.
22 καὶ ἐγενήθη ἐν ταῖς ἡμέραις τοῦ πολέμου Μαχεμας καὶ οὐχ εὑρέθη ῥομφαία καὶ δόρυ ἐν χειρὶ παντὸς τοῦ λαοῦ τοῦ μετὰ Σαουλ καὶ μετὰ Ιωναθαν καὶ εὑρέθη τῷ Σαουλ καὶ τῷ Ιωναθαν υἱῷ αὐτοῦ
೨೨ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.
23 καὶ ἐξῆλθεν ἐξ ὑποστάσεως τῶν ἀλλοφύλων τὴν ἐν τῷ πέραν Μαχεμας
೨೩ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.