< Βασιλειῶν Αʹ 19 >
1 καὶ ἐλάλησεν Σαουλ πρὸς Ιωναθαν τὸν υἱὸν αὐτοῦ καὶ πρὸς πάντας τοὺς παῖδας αὐτοῦ θανατῶσαι τὸν Δαυιδ καὶ Ιωναθαν υἱὸς Σαουλ ᾑρεῖτο τὸν Δαυιδ σφόδρα
೧ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.
2 καὶ ἀπήγγειλεν Ιωναθαν τῷ Δαυιδ λέγων Σαουλ ζητεῖ θανατῶσαί σε φύλαξαι οὖν αὔριον πρωὶ καὶ κρύβηθι καὶ κάθισον κρυβῇ
೨ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.
3 καὶ ἐγὼ ἐξελεύσομαι καὶ στήσομαι ἐχόμενος τοῦ πατρός μου ἐν ἀγρῷ οὗ ἐὰν ᾖς ἐκεῖ καὶ ἐγὼ λαλήσω περὶ σοῦ πρὸς τὸν πατέρα μου καὶ ὄψομαι ὅ τι ἐὰν ᾖ καὶ ἀπαγγελῶ σοι
೩ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.
4 καὶ ἐλάλησεν Ιωναθαν περὶ Δαυιδ ἀγαθὰ πρὸς Σαουλ τὸν πατέρα αὐτοῦ καὶ εἶπεν πρὸς αὐτόν μὴ ἁμαρτησάτω ὁ βασιλεὺς εἰς τὸν δοῦλόν σου Δαυιδ ὅτι οὐχ ἡμάρτηκεν εἰς σέ καὶ τὰ ποιήματα αὐτοῦ ἀγαθὰ σφόδρα
೪ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.
5 καὶ ἔθετο τὴν ψυχὴν αὐτοῦ ἐν τῇ χειρὶ αὐτοῦ καὶ ἐπάταξεν τὸν ἀλλόφυλον καὶ ἐποίησεν κύριος σωτηρίαν μεγάλην καὶ πᾶς Ισραηλ εἶδον καὶ ἐχάρησαν καὶ ἵνα τί ἁμαρτάνεις εἰς αἷμα ἀθῷον θανατῶσαι τὸν Δαυιδ δωρεάν
೫ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.
6 καὶ ἤκουσεν Σαουλ τῆς φωνῆς Ιωναθαν καὶ ὤμοσεν Σαουλ λέγων ζῇ κύριος εἰ ἀποθανεῖται
೬ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.
7 καὶ ἐκάλεσεν Ιωναθαν τὸν Δαυιδ καὶ ἀπήγγειλεν αὐτῷ πάντα τὰ ῥήματα ταῦτα καὶ εἰσήγαγεν Ιωναθαν τὸν Δαυιδ πρὸς Σαουλ καὶ ἦν ἐνώπιον αὐτοῦ ὡσεὶ ἐχθὲς καὶ τρίτην ἡμέραν
೭ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.
8 καὶ προσέθετο ὁ πόλεμος γενέσθαι πρὸς Σαουλ καὶ κατίσχυσεν Δαυιδ καὶ ἐπολέμησεν τοὺς ἀλλοφύλους καὶ ἐπάταξεν ἐν αὐτοῖς πληγὴν μεγάλην σφόδρα καὶ ἔφυγον ἐκ προσώπου αὐτοῦ
೮ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.
9 καὶ ἐγένετο πνεῦμα θεοῦ πονηρὸν ἐπὶ Σαουλ καὶ αὐτὸς ἐν οἴκῳ καθεύδων καὶ δόρυ ἐν τῇ χειρὶ αὐτοῦ καὶ Δαυιδ ἔψαλλεν ἐν ταῖς χερσὶν αὐτοῦ
೯ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.
10 καὶ ἐζήτει Σαουλ πατάξαι τὸ δόρυ εἰς Δαυιδ καὶ ἀπέστη Δαυιδ ἐκ προσώπου Σαουλ καὶ ἐπάταξεν τὸ δόρυ εἰς τὸν τοῖχον καὶ Δαυιδ ἀνεχώρησεν καὶ διεσώθη
೧೦ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
11 καὶ ἐγενήθη ἐν τῇ νυκτὶ ἐκείνῃ καὶ ἀπέστειλεν Σαουλ ἀγγέλους εἰς οἶκον Δαυιδ φυλάξαι αὐτὸν τοῦ θανατῶσαι αὐτὸν πρωί καὶ ἀπήγγειλεν τῷ Δαυιδ Μελχολ ἡ γυνὴ αὐτοῦ λέγουσα ἐὰν μὴ σὺ σώσῃς τὴν ψυχὴν σαυτοῦ τὴν νύκτα ταύτην αὔριον θανατωθήσῃ
೧೧ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ
12 καὶ κατάγει ἡ Μελχολ τὸν Δαυιδ διὰ τῆς θυρίδος καὶ ἀπῆλθεν καὶ ἔφυγεν καὶ σῴζεται
೧೨ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.
13 καὶ ἔλαβεν ἡ Μελχολ τὰ κενοτάφια καὶ ἔθετο ἐπὶ τὴν κλίνην καὶ ἧπαρ τῶν αἰγῶν ἔθετο πρὸς κεφαλῆς αὐτοῦ καὶ ἐκάλυψεν αὐτὰ ἱματίῳ
೧೩ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.
14 καὶ ἀπέστειλεν Σαουλ ἀγγέλους λαβεῖν τὸν Δαυιδ καὶ λέγουσιν ἐνοχλεῖσθαι αὐτόν
೧೪ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.
15 καὶ ἀποστέλλει ἐπὶ τὸν Δαυιδ λέγων ἀγάγετε αὐτὸν ἐπὶ τῆς κλίνης πρός με τοῦ θανατῶσαι αὐτόν
೧೫ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.
16 καὶ ἔρχονται οἱ ἄγγελοι καὶ ἰδοὺ τὰ κενοτάφια ἐπὶ τῆς κλίνης καὶ ἧπαρ τῶν αἰγῶν πρὸς κεφαλῆς αὐτοῦ
೧೬ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.
17 καὶ εἶπεν Σαουλ τῇ Μελχολ ἵνα τί οὕτως παρελογίσω με καὶ ἐξαπέστειλας τὸν ἐχθρόν μου καὶ διεσώθη καὶ εἶπεν Μελχολ τῷ Σαουλ αὐτὸς εἶπεν ἐξαπόστειλόν με εἰ δὲ μή θανατώσω σε
೧೭ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.
18 καὶ Δαυιδ ἔφυγεν καὶ διεσώθη καὶ παραγίνεται πρὸς Σαμουηλ εἰς Αρμαθαιμ καὶ ἀπαγγέλλει αὐτῷ πάντα ὅσα ἐποίησεν αὐτῷ Σαουλ καὶ ἐπορεύθη Δαυιδ καὶ Σαμουηλ καὶ ἐκάθισαν ἐν Ναυαθ ἐν Ραμα
೧೮ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.
19 καὶ ἀπηγγέλη τῷ Σαουλ λέγοντες ἰδοὺ Δαυιδ ἐν Ναυαθ ἐν Ραμα
೧೯ದಾವೀದನು ರಾಮದ ನಯೋತಿನಲ್ಲಿರುವುದು ಸೌಲನಿಗೆ ಗೊತ್ತಾಗಲು,
20 καὶ ἀπέστειλεν Σαουλ ἀγγέλους λαβεῖν τὸν Δαυιδ καὶ εἶδαν τὴν ἐκκλησίαν τῶν προφητῶν καὶ Σαμουηλ εἱστήκει καθεστηκὼς ἐπ’ αὐτῶν καὶ ἐγενήθη ἐπὶ τοὺς ἀγγέλους τοῦ Σαουλ πνεῦμα θεοῦ καὶ προφητεύουσιν
೨೦ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.
21 καὶ ἀπηγγέλη τῷ Σαουλ καὶ ἀπέστειλεν ἀγγέλους ἑτέρους καὶ ἐπροφήτευσαν καὶ αὐτοί καὶ προσέθετο Σαουλ ἀποστεῖλαι ἀγγέλους τρίτους καὶ ἐπροφήτευσαν καὶ αὐτοί
೨೧ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.
22 καὶ ἐθυμώθη ὀργῇ Σαουλ καὶ ἐπορεύθη καὶ αὐτὸς εἰς Αρμαθαιμ καὶ ἔρχεται ἕως τοῦ φρέατος τοῦ ἅλω τοῦ ἐν τῷ Σεφι καὶ ἠρώτησεν καὶ εἶπεν ποῦ Σαμουηλ καὶ Δαυιδ καὶ εἶπαν ἰδοὺ ἐν Ναυαθ ἐν Ραμα
೨೨ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.
23 καὶ ἐπορεύθη ἐκεῖθεν εἰς Ναυαθ ἐν Ραμα καὶ ἐγενήθη καὶ ἐπ’ αὐτῷ πνεῦμα θεοῦ καὶ ἐπορεύετο προφητεύων ἕως τοῦ ἐλθεῖν αὐτὸν εἰς Ναυαθ ἐν Ραμα
೨೩ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.
24 καὶ ἐξεδύσατο τὰ ἱμάτια αὐτοῦ καὶ ἐπροφήτευσεν ἐνώπιον αὐτῶν καὶ ἔπεσεν γυμνὸς ὅλην τὴν ἡμέραν ἐκείνην καὶ ὅλην τὴν νύκτα διὰ τοῦτο ἔλεγον εἰ καὶ Σαουλ ἐν προφήταις
೨೪ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.