< Παραλειπομένων Βʹ 31 >
1 καὶ ὡς συνετελέσθη πάντα ταῦτα ἐξῆλθεν πᾶς Ισραηλ οἱ εὑρεθέντες ἐν πόλεσιν Ιουδα καὶ συνέτριψαν τὰς στήλας καὶ ἐξέκοψαν τὰ ἄλση καὶ κατέσπασαν τὰ ὑψηλὰ καὶ τοὺς βωμοὺς ἀπὸ πάσης τῆς Ιουδαίας καὶ Βενιαμιν καὶ ἐξ Εφραιμ καὶ ἀπὸ Μανασση ἕως εἰς τέλος καὶ ἐπέστρεψαν πᾶς Ισραηλ ἕκαστος εἰς τὴν κληρονομίαν αὐτοῦ καὶ εἰς τὰς πόλεις αὐτῶν
೧ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
2 καὶ ἔταξεν Εζεκιας τὰς ἐφημερίας τῶν ἱερέων καὶ τῶν Λευιτῶν καὶ τὰς ἐφημερίας ἑκάστου κατὰ τὴν ἑαυτοῦ λειτουργίαν τοῖς ἱερεῦσιν καὶ τοῖς Λευίταις εἰς τὴν ὁλοκαύτωσιν καὶ εἰς τὴν θυσίαν τοῦ σωτηρίου καὶ αἰνεῖν καὶ ἐξομολογεῖσθαι καὶ λειτουργεῖν ἐν ταῖς πύλαις ἐν ταῖς αὐλαῖς οἴκου κυρίου
೨ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.
3 καὶ μερὶς τοῦ βασιλέως ἐκ τῶν ὑπαρχόντων αὐτοῦ εἰς τὰς ὁλοκαυτώσεις τὴν πρωινὴν καὶ τὴν δειλινὴν καὶ ὁλοκαυτώσεις εἰς σάββατα καὶ εἰς τὰς νουμηνίας καὶ εἰς τὰς ἑορτὰς τὰς γεγραμμένας ἐν τῷ νόμῳ κυρίου
೩ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.
4 καὶ εἶπεν τῷ λαῷ τοῖς κατοικοῦσιν ἐν Ιερουσαλημ δοῦναι τὴν μερίδα τῶν ἱερέων καὶ τῶν Λευιτῶν ὅπως κατισχύσωσιν ἐν τῇ λειτουργίᾳ οἴκου κυρίου
೪ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
5 καὶ ὡς προσέταξεν τὸν λόγον ἐπλεόνασαν οἱ υἱοὶ Ισραηλ ἀπαρχὴν σίτου καὶ οἴνου καὶ ἐλαίου καὶ μέλιτος καὶ πᾶν γένημα ἀγροῦ καὶ ἐπιδέκατα πάντα εἰς πλῆθος ἤνεγκαν
೫ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
6 οἱ υἱοὶ Ισραηλ καὶ Ιουδα καὶ οἱ κατοικοῦντες ἐν ταῖς πόλεσιν Ιουδα καὶ αὐτοὶ ἤνεγκαν ἐπιδέκατα μόσχων καὶ προβάτων καὶ ἐπιδέκατα αἰγῶν καὶ ἡγίασαν τῷ κυρίῳ θεῷ αὐτῶν καὶ εἰσήνεγκαν καὶ ἔθηκαν σωροὺς σωρούς
೬ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು.
7 ἐν τῷ μηνὶ τῷ τρίτῳ ἤρξαντο οἱ σωροὶ θεμελιοῦσθαι καὶ ἐν τῷ ἑβδόμῳ μηνὶ συνετελέσθησαν
೭ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ
8 καὶ ἦλθεν Εζεκιας καὶ οἱ ἄρχοντες καὶ εἶδον τοὺς σωροὺς καὶ ηὐλόγησαν τὸν κύριον καὶ τὸν λαὸν αὐτοῦ Ισραηλ
೮ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.
9 καὶ ἐπυνθάνετο Εζεκιας τῶν ἱερέων καὶ τῶν Λευιτῶν ὑπὲρ τῶν σωρῶν
೯ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,
10 καὶ εἶπεν πρὸς αὐτὸν Αζαριας ὁ ἱερεὺς ὁ ἄρχων εἰς οἶκον Σαδωκ καὶ εἶπεν ἐξ οὗ ἦρκται ἡ ἀπαρχὴ φέρεσθαι εἰς οἶκον κυρίου ἐφάγομεν καὶ ἐπίομεν καὶ κατελίπομεν ὅτι κύριος ηὐλόγησεν τὸν λαὸν αὐτοῦ καὶ κατελίπομεν ἔτι τὸ πλῆθος τοῦτο
೧೦ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.
11 καὶ εἶπεν Εζεκιας ἑτοιμάσαι παστοφόρια εἰς οἶκον κυρίου καὶ ἡτοίμασαν
೧೧ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
12 καὶ εἰσήνεγκαν ἐκεῖ τὰς ἀπαρχὰς καὶ τὰ ἐπιδέκατα ἐν πίστει καὶ ἐπ’ αὐτῶν ἐπιστάτης Χωνενιας ὁ Λευίτης καὶ Σεμεϊ ὁ ἀδελφὸς αὐτοῦ διαδεχόμενος
೧೨ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
13 καὶ Ιιηλ καὶ Οζαζιας καὶ Ναεθ καὶ Ασαηλ καὶ Ιεριμωθ καὶ Ιωζαβαθ καὶ Ελιηλ καὶ Σαμαχια καὶ Μααθ καὶ Βαναιας καὶ οἱ υἱοὶ αὐτοῦ καθεσταμένοι διὰ Χωνενιου καὶ Σεμεϊ τοῦ ἀδελφοῦ αὐτοῦ καθὼς προσέταξεν ὁ βασιλεὺς Εζεκιας καὶ Αζαριας ὁ ἡγούμενος οἴκου κυρίου
೧೩ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.
14 καὶ Κωρη ὁ τοῦ Ιεμνα ὁ Λευίτης ὁ πυλωρὸς κατὰ ἀνατολὰς ἐπὶ τῶν δομάτων δοῦναι τὰς ἀπαρχὰς κυρίῳ καὶ τὰ ἅγια τῶν ἁγίων
೧೪ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
15 διὰ χειρὸς Οδομ καὶ Βενιαμιν καὶ Ἰησοῦς καὶ Σεμεϊ καὶ Αμαριας καὶ Σεχονιας διὰ χειρὸς τῶν ἱερέων ἐν πίστει δοῦναι τοῖς ἀδελφοῖς αὐτῶν κατὰ τὰς ἐφημερίας κατὰ τὸν μέγαν καὶ τὸν μικρὸν
೧೫ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.
16 ἐκτὸς τῆς ἐπιγονῆς τῶν ἀρσενικῶν ἀπὸ τριετοῦς καὶ ἐπάνω παντὶ τῷ εἰσπορευομένῳ εἰς οἶκον κυρίου εἰς λόγον ἡμερῶν εἰς ἡμέραν εἰς λειτουργίαν ἐφημερίαις διατάξεως αὐτῶν
೧೬ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.
17 οὗτος ὁ καταλοχισμὸς τῶν ἱερέων κατ’ οἴκους πατριῶν καὶ οἱ Λευῖται ἐν ταῖς ἐφημερίαις αὐτῶν ἀπὸ εἰκοσαετοῦς καὶ ἐπάνω ἐν διατάξει
೧೭ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,
18 ἐν καταλοχίαις ἐν πάσῃ ἐπιγονῇ υἱῶν αὐτῶν καὶ θυγατέρων αὐτῶν εἰς πᾶν τὸ πλῆθος ὅτι ἐν πίστει ἥγνισαν τὸ ἅγιον
೧೮ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.
19 τοῖς υἱοῖς Ααρων τοῖς ἱερατεύουσιν καὶ οἱ ἀπὸ τῶν πόλεων αὐτῶν ἐν πάσῃ πόλει καὶ πόλει ἄνδρες οἳ ὠνομάσθησαν ἐν ὀνόματι δοῦναι μερίδα παντὶ ἀρσενικῷ ἐν τοῖς ἱερεῦσιν καὶ παντὶ καταριθμουμένῳ ἐν τοῖς Λευίταις
೧೯ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.
20 καὶ ἐποίησεν οὕτως Εζεκιας ἐν παντὶ Ιουδα καὶ ἐποίησεν τὸ καλὸν καὶ τὸ εὐθὲς ἐναντίον τοῦ κυρίου θεοῦ αὐτοῦ
೨೦ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
21 καὶ ἐν παντὶ ἔργῳ ἐν ᾧ ἤρξατο ἐν ἐργασίᾳ ἐν οἴκῳ κυρίου καὶ ἐν τῷ νόμῳ καὶ ἐν τοῖς προστάγμασιν ἐξεζήτησεν τὸν θεὸν αὐτοῦ ἐξ ὅλης ψυχῆς αὐτοῦ καὶ ἐποίησεν καὶ εὐοδώθη
೨೧ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.