< Βασιλειῶν Δʹ 25 >
1 καὶ ἐγενήθη ἐν τῷ ἔτει τῷ ἐνάτῳ τῆς βασιλείας αὐτοῦ ἐν τῷ μηνὶ τῷ δεκάτῳ ἦλθεν Ναβουχοδονοσορ βασιλεὺς Βαβυλῶνος καὶ πᾶσα ἡ δύναμις αὐτοῦ ἐπὶ Ιερουσαλημ καὶ παρενέβαλεν ἐπ’ αὐτὴν καὶ ᾠκοδόμησεν ἐπ’ αὐτὴν περίτειχος κύκλῳ
೧ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
2 καὶ ἦλθεν ἡ πόλις ἐν περιοχῇ ἕως τοῦ ἑνδεκάτου ἔτους τοῦ βασιλέως Σεδεκιου
೨ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
3 ἐνάτῃ τοῦ μηνὸς καὶ ἐνίσχυσεν ὁ λιμὸς ἐν τῇ πόλει καὶ οὐκ ἦσαν ἄρτοι τῷ λαῷ τῆς γῆς
೩ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
4 καὶ ἐρράγη ἡ πόλις καὶ πάντες οἱ ἄνδρες τοῦ πολέμου ἐξῆλθον νυκτὸς ὁδὸν πύλης τῆς ἀνὰ μέσον τῶν τειχέων αὕτη ἥ ἐστιν τοῦ κήπου τοῦ βασιλέως καὶ οἱ Χαλδαῖοι ἐπὶ τὴν πόλιν κύκλῳ καὶ ἐπορεύθη ὁδὸν τὴν Αραβα
೪ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
5 καὶ ἐδίωξεν ἡ δύναμις τῶν Χαλδαίων ὀπίσω τοῦ βασιλέως καὶ κατέλαβον αὐτὸν ἐν Αραβωθ Ιεριχω καὶ πᾶσα ἡ δύναμις αὐτοῦ διεσπάρη ἐπάνωθεν αὐτοῦ
೫ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
6 καὶ συνέλαβον τὸν βασιλέα καὶ ἤγαγον αὐτὸν πρὸς τὸν βασιλέα Βαβυλῶνος εἰς Δεβλαθα καὶ ἐλάλησεν μετ’ αὐτοῦ κρίσιν
೬ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
7 καὶ τοὺς υἱοὺς Σεδεκιου ἔσφαξεν κατ’ ὀφθαλμοὺς αὐτοῦ καὶ τοὺς ὀφθαλμοὺς Σεδεκιου ἐξετύφλωσεν καὶ ἔδησεν αὐτὸν ἐν πέδαις καὶ ἤγαγεν αὐτὸν εἰς Βαβυλῶνα
೭ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
8 καὶ ἐν τῷ μηνὶ τῷ πέμπτῳ ἑβδόμῃ τοῦ μηνός αὐτὸς ἐνιαυτὸς ἐννεακαιδέκατος τῷ Ναβουχοδονοσορ βασιλεῖ Βαβυλῶνος ἦλθεν Ναβουζαρδαν ὁ ἀρχιμάγειρος ἑστὼς ἐνώπιον βασιλέως Βαβυλῶνος εἰς Ιερουσαλημ
೮ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
9 καὶ ἐνέπρησεν τὸν οἶκον κυρίου καὶ τὸν οἶκον τοῦ βασιλέως καὶ πάντας τοὺς οἴκους Ιερουσαλημ καὶ πᾶν οἶκον ἐνέπρησεν
೯ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
೧೦ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
11 καὶ τὸ περισσὸν τοῦ λαοῦ τὸ καταλειφθὲν ἐν τῇ πόλει καὶ τοὺς ἐμπεπτωκότας οἳ ἐνέπεσον πρὸς βασιλέα Βαβυλῶνος καὶ τὸ λοιπὸν τοῦ στηρίγματος μετῆρεν Ναβουζαρδαν ὁ ἀρχιμάγειρος
೧೧ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
12 καὶ ἀπὸ τῶν πτωχῶν τῆς γῆς ὑπέλιπεν ὁ ἀρχιμάγειρος εἰς ἀμπελουργοὺς καὶ εἰς γαβιν
೧೨ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
13 καὶ τοὺς στύλους τοὺς χαλκοῦς τοὺς ἐν οἴκῳ κυρίου καὶ τὰς μεχωνωθ καὶ τὴν θάλασσαν τὴν χαλκῆν τὴν ἐν οἴκῳ κυρίου συνέτριψαν οἱ Χαλδαῖοι καὶ ἦραν τὸν χαλκὸν αὐτῶν εἰς Βαβυλῶνα
೧೩ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
14 καὶ τοὺς λέβητας καὶ τὰ ιαμιν καὶ τὰς φιάλας καὶ τὰς θυίσκας καὶ πάντα τὰ σκεύη τὰ χαλκᾶ ἐν οἷς λειτουργοῦσιν ἐν αὐτοῖς ἔλαβεν
೧೪ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
15 καὶ τὰ πυρεῖα καὶ τὰς φιάλας τὰς χρυσᾶς καὶ τὰς ἀργυρᾶς ἔλαβεν ὁ ἀρχιμάγειρος
೧೫ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
16 στύλους δύο ἡ θάλασσα ἡ μία καὶ τὰ μεχωνωθ ἃ ἐποίησεν Σαλωμων τῷ οἴκῳ κυρίου οὐκ ἦν σταθμὸς τοῦ χαλκοῦ πάντων τῶν σκευῶν
೧೬ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
17 ὀκτωκαίδεκα πήχεων ὕψος τοῦ στύλου τοῦ ἑνός καὶ τὸ χωθαρ ἐπ’ αὐτοῦ τὸ χαλκοῦν καὶ τὸ ὕψος τοῦ χωθαρ τριῶν πήχεων σαβαχα καὶ ῥοαὶ ἐπὶ τοῦ χωθαρ κύκλῳ τὰ πάντα χαλκᾶ καὶ κατὰ τὰ αὐτὰ τῷ στύλῳ τῷ δευτέρῳ ἐπὶ τῷ σαβαχα
೧೭ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
18 καὶ ἔλαβεν ὁ ἀρχιμάγειρος τὸν Σαραιαν ἱερέα τὸν πρῶτον καὶ τὸν Σοφονιαν υἱὸν τῆς δευτερώσεως καὶ τοὺς τρεῖς τοὺς φυλάσσοντας τὸν σταθμὸν
೧೮ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
19 καὶ ἐκ τῆς πόλεως ἔλαβεν εὐνοῦχον ἕνα ὃς ἦν ἐπιστάτης ἐπὶ τῶν ἀνδρῶν τῶν πολεμιστῶν καὶ πέντε ἄνδρας τῶν ὁρώντων τὸ πρόσωπον τοῦ βασιλέως τοὺς εὑρεθέντας ἐν τῇ πόλει καὶ τὸν γραμματέα τοῦ ἄρχοντος τῆς δυνάμεως τὸν ἐκτάσσοντα τὸν λαὸν τῆς γῆς καὶ ἑξήκοντα ἄνδρας τοῦ λαοῦ τῆς γῆς τοὺς εὑρεθέντας ἐν τῇ πόλει
೧೯ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
20 καὶ ἔλαβεν αὐτοὺς Ναβουζαρδαν ὁ ἀρχιμάγειρος καὶ ἀπήγαγεν αὐτοὺς πρὸς τὸν βασιλέα Βαβυλῶνος εἰς Δεβλαθα
೨೦ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
21 καὶ ἔπαισεν αὐτοὺς βασιλεὺς Βαβυλῶνος καὶ ἐθανάτωσεν αὐτοὺς ἐν Δεβλαθα ἐν γῇ Αιμαθ καὶ ἀπῳκίσθη Ιουδας ἐπάνωθεν τῆς γῆς αὐτοῦ
೨೧ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
22 καὶ ὁ λαὸς ὁ καταλειφθεὶς ἐν γῇ Ιουδα οὓς κατέλιπεν Ναβουχοδονοσορ βασιλεὺς Βαβυλῶνος καὶ κατέστησεν ἐπ’ αὐτῶν τὸν Γοδολιαν υἱὸν Αχικαμ υἱοῦ Σαφαν
೨೨ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
23 καὶ ἤκουσαν πάντες οἱ ἄρχοντες τῆς δυνάμεως αὐτοὶ καὶ οἱ ἄνδρες αὐτῶν ὅτι κατέστησεν βασιλεὺς Βαβυλῶνος τὸν Γοδολιαν καὶ ἦλθον πρὸς Γοδολιαν εἰς Μασσηφαθ καὶ Ισμαηλ υἱὸς Ναθανιου καὶ Ιωαναν υἱὸς Καρηε καὶ Σαραιας υἱὸς Θανεμαθ ὁ Νετωφαθίτης καὶ Ιεζονιας υἱὸς τοῦ Μαχαθι αὐτοὶ καὶ οἱ ἄνδρες αὐτῶν
೨೩ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
24 καὶ ὤμοσεν Γοδολιας αὐτοῖς καὶ τοῖς ἀνδράσιν αὐτῶν καὶ εἶπεν αὐτοῖς μὴ φοβεῖσθε πάροδον τῶν Χαλδαίων καθίσατε ἐν τῇ γῇ καὶ δουλεύσατε τῷ βασιλεῖ Βαβυλῶνος καὶ καλῶς ἔσται ὑμῖν
೨೪ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
25 καὶ ἐγενήθη ἐν τῷ ἑβδόμῳ μηνὶ ἦλθεν Ισμαηλ υἱὸς Ναθανιου υἱοῦ Ελισαμα ἐκ τοῦ σπέρματος τῶν βασιλέων καὶ δέκα ἄνδρες μετ’ αὐτοῦ καὶ ἐπάταξεν τὸν Γοδολιαν καὶ ἀπέθανεν καὶ τοὺς Ιουδαίους καὶ τοὺς Χαλδαίους οἳ ἦσαν μετ’ αὐτοῦ εἰς Μασσηφαθ
೨೫ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
26 καὶ ἀνέστη πᾶς ὁ λαὸς ἀπὸ μικροῦ καὶ ἕως μεγάλου καὶ οἱ ἄρχοντες τῶν δυνάμεων καὶ εἰσῆλθον εἰς Αἴγυπτον ὅτι ἐφοβήθησαν ἀπὸ προσώπου τῶν Χαλδαίων
೨೬ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
27 καὶ ἐγενήθη ἐν τῷ τριακοστῷ καὶ ἑβδόμῳ ἔτει τῆς ἀποικεσίας τοῦ Ιωακιμ βασιλέως Ιουδα ἐν τῷ δωδεκάτῳ μηνὶ ἑβδόμῃ καὶ εἰκάδι τοῦ μηνὸς ὕψωσεν Ευιλμαρωδαχ βασιλεὺς Βαβυλῶνος ἐν τῷ ἐνιαυτῷ τῆς βασιλείας αὐτοῦ τὴν κεφαλὴν Ιωακιμ βασιλέως Ιουδα καὶ ἐξήγαγεν αὐτὸν ἐξ οἴκου φυλακῆς αὐτοῦ
೨೭ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
28 καὶ ἐλάλησεν μετ’ αὐτοῦ ἀγαθὰ καὶ ἔδωκεν τὸν θρόνον αὐτοῦ ἐπάνωθεν τῶν θρόνων τῶν βασιλέων τῶν μετ’ αὐτοῦ ἐν Βαβυλῶνι
೨೮ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
29 καὶ ἠλλοίωσεν τὰ ἱμάτια τῆς φυλακῆς αὐτοῦ καὶ ἤσθιεν ἄρτον διὰ παντὸς ἐνώπιον αὐτοῦ πάσας τὰς ἡμέρας τῆς ζωῆς αὐτοῦ
೨೯ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
30 καὶ ἡ ἑστιατορία αὐτοῦ ἑστιατορία διὰ παντὸς ἐδόθη αὐτῷ ἐξ οἴκου τοῦ βασιλέως λόγον ἡμέρας ἐν τῇ ἡμέρᾳ αὐτοῦ πάσας τὰς ἡμέρας τῆς ζωῆς αὐτοῦ
೩೦ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.