< Δευτερονόμιον 2 >

1 καὶ ἐπιστραφέντες ἀπήραμεν εἰς τὴν ἔρημον ὁδὸν θάλασσαν ἐρυθράν ὃν τρόπον ἐλάλησεν κύριος πρός με καὶ ἐκυκλώσαμεν τὸ ὄρος τὸ Σηιρ ἡμέρας πολλάς
ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
2 καὶ εἶπεν κύριος πρός με
ಆ ಮೇಲೆ ಯೆಹೋವನು ನನಗೆ,
3 ἱκανούσθω ὑμῖν κυκλοῦν τὸ ὄρος τοῦτο ἐπιστράφητε οὖν ἐπὶ βορρᾶν
“ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.
4 καὶ τῷ λαῷ ἔντειλαι λέγων ὑμεῖς παραπορεύεσθε διὰ τῶν ὁρίων τῶν ἀδελφῶν ὑμῶν υἱῶν Ησαυ οἳ κατοικοῦσιν ἐν Σηιρ καὶ φοβηθήσονται ὑμᾶς καὶ εὐλαβηθήσονται ὑμᾶς σφόδρα
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
5 μὴ συνάψητε πρὸς αὐτοὺς πόλεμον οὐ γὰρ μὴ δῶ ὑμῖν ἀπὸ τῆς γῆς αὐτῶν οὐδὲ βῆμα ποδός ὅτι ἐν κλήρῳ δέδωκα τοῖς υἱοῖς Ησαυ τὸ ὄρος τὸ Σηιρ
ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
6 βρώματα ἀργυρίου ἀγοράσατε παρ’ αὐτῶν καὶ φάγεσθε καὶ ὕδωρ μέτρῳ λήμψεσθε παρ’ αὐτῶν ἀργυρίου καὶ πίεσθε
ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.
7 ὁ γὰρ κύριος ὁ θεὸς ἡμῶν εὐλόγησέν σε ἐν παντὶ ἔργῳ τῶν χειρῶν σου διάγνωθι πῶς διῆλθες τὴν ἔρημον τὴν μεγάλην καὶ τὴν φοβερὰν ἐκείνην ἰδοὺ τεσσαράκοντα ἔτη κύριος ὁ θεός σου μετὰ σοῦ οὐκ ἐπεδεήθης ῥήματος
ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.
8 καὶ παρήλθομεν τοὺς ἀδελφοὺς ἡμῶν υἱοὺς Ησαυ τοὺς κατοικοῦντας ἐν Σηιρ παρὰ τὴν ὁδὸν τὴν Αραβα ἀπὸ Αιλων καὶ ἀπὸ Γασιωνγαβερ καὶ ἐπιστρέψαντες παρήλθομεν ὁδὸν ἔρημον Μωαβ
ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.
9 καὶ εἶπεν κύριος πρός με μὴ ἐχθραίνετε τοῖς Μωαβίταις καὶ μὴ συνάψητε πρὸς αὐτοὺς πόλεμον οὐ γὰρ μὴ δῶ ὑμῖν ἀπὸ τῆς γῆς αὐτῶν ἐν κλήρῳ τοῖς γὰρ υἱοῖς Λωτ δέδωκα τὴν Σηιρ κληρονομεῖν
ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
10 οἱ Ομμιν πρότεροι ἐνεκάθηντο ἐπ’ αὐτῆς ἔθνος μέγα καὶ πολὺ καὶ ἰσχύοντες ὥσπερ οἱ Ενακιμ
೧೦ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.
11 Ραφαϊν λογισθήσονται καὶ οὗτοι ὥσπερ οἱ Ενακιμ καὶ οἱ Μωαβῖται ἐπονομάζουσιν αὐτοὺς Ομμιν
೧೧ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
12 καὶ ἐν Σηιρ ἐνεκάθητο ὁ Χορραῖος πρότερον καὶ υἱοὶ Ησαυ ἀπώλεσαν αὐτοὺς καὶ ἐξέτριψαν αὐτοὺς ἀπὸ προσώπου αὐτῶν καὶ κατῳκίσθησαν ἀντ’ αὐτῶν ὃν τρόπον ἐποίησεν Ισραηλ τὴν γῆν τῆς κληρονομίας αὐτοῦ ἣν δέδωκεν κύριος αὐτοῖς
೧೨ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
13 νῦν οὖν ἀνάστητε καὶ ἀπάρατε ὑμεῖς καὶ παραπορεύεσθε τὴν φάραγγα Ζαρετ καὶ παρήλθομεν τὴν φάραγγα Ζαρετ
೧೩ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.
14 καὶ αἱ ἡμέραι ἃς παρεπορεύθημεν ἀπὸ Καδης Βαρνη ἕως οὗ παρήλθομεν τὴν φάραγγα Ζαρετ τριάκοντα καὶ ὀκτὼ ἔτη ἕως οὗ διέπεσεν πᾶσα γενεὰ ἀνδρῶν πολεμιστῶν ἀποθνῄσκοντες ἐκ τῆς παρεμβολῆς καθότι ὤμοσεν αὐτοῖς ὁ θεός
೧೪ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.
15 καὶ ἡ χεὶρ τοῦ θεοῦ ἦν ἐπ’ αὐτοῖς ἐξαναλῶσαι αὐτοὺς ἐκ τῆς παρεμβολῆς ἕως οὗ διέπεσαν
೧೫ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.
16 καὶ ἐγενήθη ἐπεὶ διέπεσαν πάντες οἱ ἄνδρες οἱ πολεμισταὶ ἀποθνῄσκοντες ἐκ μέσου τοῦ λαοῦ
೧೬ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.
17 καὶ ἐλάλησεν κύριος πρός με λέγων
೧೭ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,
18 σὺ παραπορεύσῃ σήμερον τὰ ὅρια Μωαβ τὴν Σηιρ
೧೮“ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.
19 καὶ προσάξετε ἐγγὺς υἱῶν Αμμαν μὴ ἐχθραίνετε αὐτοῖς καὶ μὴ συνάψητε αὐτοῖς εἰς πόλεμον οὐ γὰρ μὴ δῶ ἀπὸ τῆς γῆς υἱῶν Αμμαν σοὶ ἐν κλήρῳ ὅτι τοῖς υἱοῖς Λωτ δέδωκα αὐτὴν ἐν κλήρῳ
೧೯ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
20 γῆ Ραφαϊν λογισθήσεται καὶ γὰρ ἐπ’ αὐτῆς κατῴκουν οἱ Ραφαϊν τὸ πρότερον καὶ οἱ Αμμανῖται ὀνομάζουσιν αὐτοὺς Ζομζομμιν
೨೦ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.
21 ἔθνος μέγα καὶ πολὺ καὶ δυνατώτερον ὑμῶν ὥσπερ οἱ Ενακιμ καὶ ἀπώλεσεν αὐτοὺς κύριος πρὸ προσώπου αὐτῶν καὶ κατεκληρονόμησαν καὶ κατῳκίσθησαν ἀντ’ αὐτῶν ἕως τῆς ἡμέρας ταύτης
೨೧ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
22 ὥσπερ ἐποίησαν τοῖς υἱοῖς Ησαυ τοῖς κατοικοῦσιν ἐν Σηιρ ὃν τρόπον ἐξέτριψαν τὸν Χορραῖον ἀπὸ προσώπου αὐτῶν καὶ κατεκληρονόμησαν καὶ κατῳκίσθησαν ἀντ’ αὐτῶν ἕως τῆς ἡμέρας ταύτης
೨೨ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
23 καὶ οἱ Ευαῖοι οἱ κατοικοῦντες ἐν ασηρωθ ἕως Γάζης καὶ οἱ Καππάδοκες οἱ ἐξελθόντες ἐκ Καππαδοκίας ἐξέτριψαν αὐτοὺς καὶ κατῳκίσθησαν ἀντ’ αὐτῶν
೨೩ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.
24 νῦν οὖν ἀνάστητε καὶ ἀπάρατε καὶ παρέλθατε ὑμεῖς τὴν φάραγγα Αρνων ἰδοὺ παραδέδωκα εἰς τὰς χεῖράς σου τὸν Σηων βασιλέα Εσεβων τὸν Αμορραῖον καὶ τὴν γῆν αὐτοῦ ἐνάρχου κληρονομεῖν σύναπτε πρὸς αὐτὸν πόλεμον
೨೪“ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
25 ἐν τῇ ἡμέρᾳ ταύτῃ ἐνάρχου δοῦναι τὸν τρόμον σου καὶ τὸν φόβον σου ἐπὶ πρόσωπον πάντων τῶν ἐθνῶν τῶν ὑποκάτω τοῦ οὐρανοῦ οἵτινες ἀκούσαντες τὸ ὄνομά σου ταραχθήσονται καὶ ὠδῖνας ἕξουσιν ἀπὸ προσώπου σου
೨೫ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.
26 καὶ ἀπέστειλα πρέσβεις ἐκ τῆς ἐρήμου Κεδαμωθ πρὸς Σηων βασιλέα Εσεβων λόγοις εἰρηνικοῖς λέγων
೨೬ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
27 παρελεύσομαι διὰ τῆς γῆς σου ἐν τῇ ὁδῷ παρελεύσομαι οὐχὶ ἐκκλινῶ δεξιὰ οὐδὲ ἀριστερά
೨೭“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
28 βρώματα ἀργυρίου ἀποδώσῃ μοι καὶ φάγομαι καὶ ὕδωρ ἀργυρίου ἀποδώσῃ μοι καὶ πίομαι πλὴν ὅτι παρελεύσομαι τοῖς ποσίν
೨೮ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
29 καθὼς ἐποίησάν μοι οἱ υἱοὶ Ησαυ οἱ κατοικοῦντες ἐν Σηιρ καὶ οἱ Μωαβῖται οἱ κατοικοῦντες ἐν Αροηρ ἕως παρέλθω τὸν Ιορδάνην εἰς τὴν γῆν ἣν κύριος ὁ θεὸς ἡμῶν δίδωσιν ἡμῖν
೨೯ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.
30 καὶ οὐκ ἠθέλησεν Σηων βασιλεὺς Εσεβων παρελθεῖν ἡμᾶς δῑ αὐτοῦ ὅτι ἐσκλήρυνεν κύριος ὁ θεὸς ἡμῶν τὸ πνεῦμα αὐτοῦ καὶ κατίσχυσεν τὴν καρδίαν αὐτοῦ ἵνα παραδοθῇ εἰς τὰς χεῖράς σου ὡς ἐν τῇ ἡμέρᾳ ταύτῃ
೩೦ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
31 καὶ εἶπεν κύριος πρός με ἰδοὺ ἦργμαι παραδοῦναι πρὸ προσώπου σου τὸν Σηων βασιλέα Εσεβων τὸν Αμορραῖον καὶ τὴν γῆν αὐτοῦ ἔναρξαι κληρονομῆσαι τὴν γῆν αὐτοῦ
೩೧ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.
32 καὶ ἐξῆλθεν Σηων βασιλεὺς Εσεβων εἰς συνάντησιν ἡμῖν αὐτὸς καὶ πᾶς ὁ λαὸς αὐτοῦ εἰς πόλεμον Ιασσα
೩೨ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.
33 καὶ παρέδωκεν αὐτὸν κύριος ὁ θεὸς ἡμῶν πρὸ προσώπου ἡμῶν καὶ ἐπατάξαμεν αὐτὸν καὶ τοὺς υἱοὺς αὐτοῦ καὶ πάντα τὸν λαὸν αὐτοῦ
೩೩ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
34 καὶ ἐκρατήσαμεν πασῶν τῶν πόλεων αὐτοῦ ἐν τῷ καιρῷ ἐκείνῳ καὶ ἐξωλεθρεύσαμεν πᾶσαν πόλιν ἑξῆς καὶ τὰς γυναῖκας αὐτῶν καὶ τὰ τέκνα αὐτῶν οὐ κατελίπομεν ζωγρείαν
೩೪ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.
35 πλὴν τὰ κτήνη ἐπρονομεύσαμεν καὶ τὰ σκῦλα τῶν πόλεων ἐλάβομεν
೩೫ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.
36 ἐξ Αροηρ ἥ ἐστιν παρὰ τὸ χεῖλος χειμάρρου Αρνων καὶ τὴν πόλιν τὴν οὖσαν ἐν τῇ φάραγγι καὶ ἕως ὄρους τοῦ Γαλααδ οὐκ ἐγενήθη πόλις ἥτις διέφυγεν ἡμᾶς τὰς πάσας παρέδωκεν κύριος ὁ θεὸς ἡμῶν εἰς τὰς χεῖρας ἡμῶν
೩೬ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.
37 πλὴν εἰς γῆν υἱῶν Αμμων οὐ προσήλθομεν πάντα τὰ συγκυροῦντα χειμάρρου Ιαβοκ καὶ τὰς πόλεις τὰς ἐν τῇ ὀρεινῇ καθότι ἐνετείλατο ἡμῖν κύριος ὁ θεὸς ἡμῶν
೩೭ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.

< Δευτερονόμιον 2 >