< Δευτερονόμιον 7 >
1 ἐὰν δὲ εἰσαγάγῃ σε κύριος ὁ θεός σου εἰς τὴν γῆν εἰς ἣν εἰσπορεύῃ ἐκεῖ κληρονομῆσαι καὶ ἐξαρεῖ ἔθνη μεγάλα ἀπὸ προσώπου σου τὸν Χετταῖον καὶ Γεργεσαῖον καὶ Αμορραῖον καὶ Χαναναῖον καὶ Φερεζαῖον καὶ Ευαῖον καὶ Ιεβουσαῖον ἑπτὰ ἔθνη πολλὰ καὶ ἰσχυρότερα ὑμῶν
೧ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
2 καὶ παραδώσει αὐτοὺς κύριος ὁ θεός σου εἰς τὰς χεῖράς σου καὶ πατάξεις αὐτούς ἀφανισμῷ ἀφανιεῖς αὐτούς οὐ διαθήσῃ πρὸς αὐτοὺς διαθήκην οὐδὲ μὴ ἐλεήσητε αὐτούς
೨ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
3 οὐδὲ μὴ γαμβρεύσητε πρὸς αὐτούς τὴν θυγατέρα σου οὐ δώσεις τῷ υἱῷ αὐτοῦ καὶ τὴν θυγατέρα αὐτοῦ οὐ λήμψῃ τῷ υἱῷ σου
೩ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.
4 ἀποστήσει γὰρ τὸν υἱόν σου ἀπ’ ἐμοῦ καὶ λατρεύσει θεοῖς ἑτέροις καὶ ὀργισθήσεται θυμῷ κύριος εἰς ὑμᾶς καὶ ἐξολεθρεύσει σε τὸ τάχος
೪ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.
5 ἀλλ’ οὕτως ποιήσετε αὐτοῖς τοὺς βωμοὺς αὐτῶν καθελεῖτε καὶ τὰς στήλας αὐτῶν συντρίψετε καὶ τὰ ἄλση αὐτῶν ἐκκόψετε καὶ τὰ γλυπτὰ τῶν θεῶν αὐτῶν κατακαύσετε πυρί
೫ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
6 ὅτι λαὸς ἅγιος εἶ κυρίῳ τῷ θεῷ σου καὶ σὲ προείλατο κύριος ὁ θεός σου εἶναί σε αὐτῷ λαὸν περιούσιον παρὰ πάντα τὰ ἔθνη ὅσα ἐπὶ προσώπου τῆς γῆς
೬ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
7 οὐχ ὅτι πολυπληθεῖτε παρὰ πάντα τὰ ἔθνη προείλατο κύριος ὑμᾶς καὶ ἐξελέξατο ὑμᾶς ὑμεῖς γάρ ἐστε ὀλιγοστοὶ παρὰ πάντα τὰ ἔθνη
೭ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.
8 ἀλλὰ παρὰ τὸ ἀγαπᾶν κύριον ὑμᾶς καὶ διατηρῶν τὸν ὅρκον ὃν ὤμοσεν τοῖς πατράσιν ὑμῶν ἐξήγαγεν κύριος ὑμᾶς ἐν χειρὶ κραταιᾷ καὶ ἐν βραχίονι ὑψηλῷ καὶ ἐλυτρώσατο ἐξ οἴκου δουλείας ἐκ χειρὸς Φαραω βασιλέως Αἰγύπτου
೮ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
9 καὶ γνώσῃ ὅτι κύριος ὁ θεός σου οὗτος θεός θεὸς πιστός ὁ φυλάσσων διαθήκην καὶ ἔλεος τοῖς ἀγαπῶσιν αὐτὸν καὶ τοῖς φυλάσσουσιν τὰς ἐντολὰς αὐτοῦ εἰς χιλίας γενεὰς
೯ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
10 καὶ ἀποδιδοὺς τοῖς μισοῦσιν κατὰ πρόσωπον ἐξολεθρεῦσαι αὐτούς καὶ οὐχὶ βραδυνεῖ τοῖς μισοῦσιν κατὰ πρόσωπον ἀποδώσει αὐτοῖς
೧೦ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
11 καὶ φυλάξῃ τὰς ἐντολὰς καὶ τὰ δικαιώματα καὶ τὰ κρίματα ταῦτα ὅσα ἐγὼ ἐντέλλομαί σοι σήμερον ποιεῖν
೧೧ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.
12 καὶ ἔσται ἡνίκα ἂν ἀκούσητε πάντα τὰ δικαιώματα ταῦτα καὶ φυλάξητε καὶ ποιήσητε αὐτά καὶ διαφυλάξει κύριος ὁ θεός σού σοι τὴν διαθήκην καὶ τὸ ἔλεος ὃ ὤμοσεν τοῖς πατράσιν ὑμῶν
೧೨ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.
13 καὶ ἀγαπήσει σε καὶ εὐλογήσει σε καὶ πληθυνεῖ σε καὶ εὐλογήσει τὰ ἔκγονα τῆς κοιλίας σου καὶ τὸν καρπὸν τῆς γῆς σου τὸν σῖτόν σου καὶ τὸν οἶνόν σου καὶ τὸ ἔλαιόν σου τὰ βουκόλια τῶν βοῶν σου καὶ τὰ ποίμνια τῶν προβάτων σου ἐπὶ τῆς γῆς ἧς ὤμοσεν κύριος τοῖς πατράσιν σου δοῦναί σοι
೧೩ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.
14 εὐλογητὸς ἔσῃ παρὰ πάντα τὰ ἔθνη οὐκ ἔσται ἐν ὑμῖν ἄγονος οὐδὲ στεῖρα καὶ ἐν τοῖς κτήνεσίν σου
೧೪ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
15 καὶ περιελεῖ κύριος ἀπὸ σοῦ πᾶσαν μαλακίαν καὶ πάσας νόσους Αἰγύπτου τὰς πονηράς ἃς ἑώρακας καὶ ὅσα ἔγνως οὐκ ἐπιθήσει ἐπὶ σὲ καὶ ἐπιθήσει αὐτὰ ἐπὶ πάντας τοὺς μισοῦντάς σε
೧೫ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
16 καὶ φάγῃ πάντα τὰ σκῦλα τῶν ἐθνῶν ἃ κύριος ὁ θεός σου δίδωσίν σοι οὐ φείσεται ὁ ὀφθαλμός σου ἐπ’ αὐτοῖς καὶ οὐ λατρεύσεις τοῖς θεοῖς αὐτῶν ὅτι σκῶλον τοῦτό ἐστίν σοι
೧೬ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
17 ἐὰν δὲ λέγῃς ἐν τῇ διανοίᾳ σου ὅτι πολὺ τὸ ἔθνος τοῦτο ἢ ἐγώ πῶς δυνήσομαι ἐξολεθρεῦσαι αὐτούς
೧೭ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.
18 οὐ φοβηθήσῃ αὐτούς μνείᾳ μνησθήσῃ ὅσα ἐποίησεν κύριος ὁ θεός σου τῷ Φαραω καὶ πᾶσι τοῖς Αἰγυπτίοις
೧೮ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.
19 τοὺς πειρασμοὺς τοὺς μεγάλους οὓς εἴδοσαν οἱ ὀφθαλμοί σου τὰ σημεῖα καὶ τὰ τέρατα τὰ μεγάλα ἐκεῖνα τὴν χεῖρα τὴν κραταιὰν καὶ τὸν βραχίονα τὸν ὑψηλόν ὡς ἐξήγαγέν σε κύριος ὁ θεός σου οὕτως ποιήσει κύριος ὁ θεὸς ἡμῶν πᾶσιν τοῖς ἔθνεσιν οὓς σὺ φοβῇ ἀπὸ προσώπου αὐτῶν
೧೯ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.
20 καὶ τὰς σφηκίας ἀποστελεῖ κύριος ὁ θεός σου εἰς αὐτούς ἕως ἂν ἐκτριβῶσιν οἱ καταλελειμμένοι καὶ οἱ κεκρυμμένοι ἀπὸ σοῦ
೨೦ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು.
21 οὐ τρωθήσῃ ἀπὸ προσώπου αὐτῶν ὅτι κύριος ὁ θεός σου ἐν σοί θεὸς μέγας καὶ κραταιός
೨೧ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.
22 καὶ καταναλώσει κύριος ὁ θεός σου τὰ ἔθνη ταῦτα ἀπὸ προσώπου σου κατὰ μικρὸν μικρόν οὐ δυνήσῃ ἐξαναλῶσαι αὐτοὺς τὸ τάχος ἵνα μὴ γένηται ἡ γῆ ἔρημος καὶ πληθυνθῇ ἐπὶ σὲ τὰ θηρία τὰ ἄγρια
೨೨ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
23 καὶ παραδώσει αὐτοὺς κύριος ὁ θεός σου εἰς τὰς χεῖράς σου καὶ ἀπολέσει αὐτοὺς ἀπωλείᾳ μεγάλῃ ἕως ἂν ἐξολεθρεύσῃ αὐτούς
೨೩ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.
24 καὶ παραδώσει τοὺς βασιλεῖς αὐτῶν εἰς τὰς χεῖρας ὑμῶν καὶ ἀπολεῖται τὸ ὄνομα αὐτῶν ἐκ τοῦ τόπου ἐκείνου οὐκ ἀντιστήσεται οὐδεὶς κατὰ πρόσωπόν σου ἕως ἂν ἐξολεθρεύσῃς αὐτούς
೨೪ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.
25 τὰ γλυπτὰ τῶν θεῶν αὐτῶν κατακαύσετε πυρί οὐκ ἐπιθυμήσεις ἀργύριον οὐδὲ χρυσίον ἀπ’ αὐτῶν καὶ οὐ λήμψῃ σεαυτῷ μὴ πταίσῃς δῑ αὐτό ὅτι βδέλυγμα κυρίῳ τῷ θεῷ σού ἐστιν
೨೫ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
26 καὶ οὐκ εἰσοίσεις βδέλυγμα εἰς τὸν οἶκόν σου καὶ ἔσῃ ἀνάθημα ὥσπερ τοῦτο προσοχθίσματι προσοχθιεῖς καὶ βδελύγματι βδελύξῃ ὅτι ἀνάθημά ἐστιν
೨೬ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.