< Ἐκκλησιαστής 7 >
1 ἀγαθὸν ὄνομα ὑπὲρ ἔλαιον ἀγαθὸν καὶ ἡμέρα τοῦ θανάτου ὑπὲρ ἡμέραν γενέσεως αὐτοῦ
೧ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
2 ἀγαθὸν πορευθῆναι εἰς οἶκον πένθους ἢ ὅτι πορευθῆναι εἰς οἶκον πότου καθότι τοῦτο τέλος παντὸς τοῦ ἀνθρώπου καὶ ὁ ζῶν δώσει εἰς καρδίαν αὐτοῦ
೨ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
3 ἀγαθὸν θυμὸς ὑπὲρ γέλωτα ὅτι ἐν κακίᾳ προσώπου ἀγαθυνθήσεται καρδία
೩ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.
4 καρδία σοφῶν ἐν οἴκῳ πένθους καὶ καρδία ἀφρόνων ἐν οἴκῳ εὐφροσύνης
೪ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
5 ἀγαθὸν τὸ ἀκοῦσαι ἐπιτίμησιν σοφοῦ ὑπὲρ ἄνδρα ἀκούοντα ᾆσμα ἀφρόνων
೫ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
6 ὅτι ὡς φωνὴ τῶν ἀκανθῶν ὑπὸ τὸν λέβητα οὕτως γέλως τῶν ἀφρόνων καί γε τοῦτο ματαιότης
೬ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
7 ὅτι ἡ συκοφαντία περιφέρει σοφὸν καὶ ἀπόλλυσι τὴν καρδίαν εὐτονίας αὐτοῦ
೭ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
8 ἀγαθὴ ἐσχάτη λόγων ὑπὲρ ἀρχὴν αὐτοῦ ἀγαθὸν μακρόθυμος ὑπὲρ ὑψηλὸν πνεύματι
೮ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
9 μὴ σπεύσῃς ἐν πνεύματί σου τοῦ θυμοῦσθαι ὅτι θυμὸς ἐν κόλπῳ ἀφρόνων ἀναπαύσεται
೯ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
10 μὴ εἴπῃς τί ἐγένετο ὅτι αἱ ἡμέραι αἱ πρότεραι ἦσαν ἀγαθαὶ ὑπὲρ ταύτας ὅτι οὐκ ἐν σοφίᾳ ἐπηρώτησας περὶ τούτου
೧೦ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
11 ἀγαθὴ σοφία μετὰ κληροδοσίας καὶ περισσεία τοῖς θεωροῦσιν τὸν ἥλιον
೧೧ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
12 ὅτι ἐν σκιᾷ αὐτῆς ἡ σοφία ὡς σκιὰ τοῦ ἀργυρίου καὶ περισσεία γνώσεως τῆς σοφίας ζωοποιήσει τὸν παρ’ αὐτῆς
೧೨ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
13 ἰδὲ τὰ ποιήματα τοῦ θεοῦ ὅτι τίς δυνήσεται τοῦ κοσμῆσαι ὃν ἂν ὁ θεὸς διαστρέψῃ αὐτόν
೧೩ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
14 ἐν ἡμέρᾳ ἀγαθωσύνης ζῆθι ἐν ἀγαθῷ καὶ ἐν ἡμέρᾳ κακίας ἰδέ καί γε σὺν τοῦτο σύμφωνον τούτῳ ἐποίησεν ὁ θεὸς περὶ λαλιᾶς ἵνα μὴ εὕρῃ ὁ ἄνθρωπος ὀπίσω αὐτοῦ μηδέν
೧೪ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
15 σὺν τὰ πάντα εἶδον ἐν ἡμέραις ματαιότητός μου ἔστιν δίκαιος ἀπολλύμενος ἐν δικαίῳ αὐτοῦ καὶ ἔστιν ἀσεβὴς μένων ἐν κακίᾳ αὐτοῦ
೧೫ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
16 μὴ γίνου δίκαιος πολὺ καὶ μὴ σοφίζου περισσά μήποτε ἐκπλαγῇς
೧೬ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
17 μὴ ἀσεβήσῃς πολὺ καὶ μὴ γίνου σκληρός ἵνα μὴ ἀποθάνῃς ἐν οὐ καιρῷ σου
೧೭ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?
18 ἀγαθὸν τὸ ἀντέχεσθαί σε ἐν τούτῳ καί γε ἀπὸ τούτου μὴ ἀνῇς τὴν χεῖρά σου ὅτι φοβούμενος τὸν θεὸν ἐξελεύσεται τὰ πάντα
೧೮ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
19 ἡ σοφία βοηθήσει τῷ σοφῷ ὑπὲρ δέκα ἐξουσιάζοντας τοὺς ὄντας ἐν τῇ πόλει
೧೯ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
20 ὅτι ἄνθρωπος οὐκ ἔστιν δίκαιος ἐν τῇ γῇ ὃς ποιήσει ἀγαθὸν καὶ οὐχ ἁμαρτήσεται
೨೦ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
21 καί γε εἰς πάντας τοὺς λόγους οὓς λαλήσουσιν μὴ θῇς καρδίαν σου ὅπως μὴ ἀκούσῃς τοῦ δούλου σου καταρωμένου σε
೨೧ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
22 ὅτι πλειστάκις πονηρεύσεταί σε καὶ καθόδους πολλὰς κακώσει καρδίαν σου ὅπως καί γε σὺ κατηράσω ἑτέρους
೨೨ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
23 πάντα ταῦτα ἐπείρασα ἐν τῇ σοφίᾳ εἶπα σοφισθήσομαι
೨೩ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
24 καὶ αὐτὴ ἐμακρύνθη ἀπ’ ἐμοῦ μακρὰν ὑπὲρ ὃ ἦν καὶ βαθὺ βάθος τίς εὑρήσει αὐτό
೨೪ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?
25 ἐκύκλωσα ἐγώ καὶ ἡ καρδία μου τοῦ γνῶναι καὶ τοῦ κατασκέψασθαι καὶ ζητῆσαι σοφίαν καὶ ψῆφον καὶ τοῦ γνῶναι ἀσεβοῦς ἀφροσύνην καὶ σκληρίαν καὶ περιφοράν
೨೫ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.
26 καὶ εὑρίσκω ἐγὼ πικρότερον ὑπὲρ θάνατον σὺν τὴν γυναῖκα ἥτις ἐστὶν θηρεύματα καὶ σαγῆναι καρδία αὐτῆς δεσμοὶ χεῖρες αὐτῆς ἀγαθὸς πρὸ προσώπου τοῦ θεοῦ ἐξαιρεθήσεται ἀπ’ αὐτῆς καὶ ἁμαρτάνων συλλημφθήσεται ἐν αὐτῇ
೨೬ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
27 ἰδὲ τοῦτο εὗρον εἶπεν ὁ Ἐκκλησιαστής μία τῇ μιᾷ τοῦ εὑρεῖν λογισμόν
೨೭ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.
28 ὃν ἔτι ἐζήτησεν ἡ ψυχή μου καὶ οὐχ εὗρον ἄνθρωπον ἕνα ἀπὸ χιλίων εὗρον καὶ γυναῖκα ἐν πᾶσι τούτοις οὐχ εὗρον
೨೮ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
29 πλὴν ἰδὲ τοῦτο εὗρον ὃ ἐποίησεν ὁ θεὸς σὺν τὸν ἄνθρωπον εὐθῆ καὶ αὐτοὶ ἐζήτησαν λογισμοὺς πολλούς
೨೯ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.