< Ἰώβ 40 >

1 καὶ ἀπεκρίθη κύριος ὁ θεὸς τῷ Ιωβ καὶ εἶπεν
ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು:
2 μὴ κρίσιν μετὰ ἱκανοῦ ἐκκλινεῖ ἐλέγχων θεὸν ἀποκριθήσεται αὐτήν
“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”
3 ὑπολαβὼν δὲ Ιωβ λέγει τῷ κυρίῳ
ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ,
4 τί ἔτι ἐγὼ κρίνομαι νουθετούμενος καὶ ἐλέγχων κύριον ἀκούων τοιαῦτα οὐθὲν ὤν ἐγὼ δὲ τίνα ἀπόκρισιν δῶ πρὸς ταῦτα χεῖρα θήσω ἐπὶ στόματί μου
“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.
5 ἅπαξ λελάληκα ἐπὶ δὲ τῷ δευτέρῳ οὐ προσθήσω
ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.
6 ἔτι δὲ ὑπολαβὼν ὁ κύριος εἶπεν τῷ Ιωβ ἐκ τοῦ νέφους
ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ:
7 μή ἀλλὰ ζῶσαι ὥσπερ ἀνὴρ τὴν ὀσφύν σου ἐρωτήσω δέ σε σὺ δέ μοι ἀποκρίθητι
“ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; ನಾನು ನಿನಗೆ ಪ್ರಶ್ನೆಮಾಡುತ್ತೇನೆ; ನೀನು ನನಗೆ ಉತ್ತರಕೊಡು.
8 μὴ ἀποποιοῦ μου τὸ κρίμα οἴει δέ με ἄλλως σοι κεχρηματικέναι ἢ ἵνα ἀναφανῇς δίκαιος
“ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ?
9 ἦ βραχίων σοί ἐστιν κατὰ τοῦ κυρίου ἢ φωνῇ κατ’ αὐτὸν βροντᾷς
ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?
10 ἀνάλαβε δὴ ὕψος καὶ δύναμιν δόξαν δὲ καὶ τιμὴν ἀμφίεσαι
ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ.
11 ἀπόστειλον δὲ ἀγγέλους ὀργῇ πᾶν δὲ ὑβριστὴν ταπείνωσον
ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು.
12 ὑπερήφανον δὲ σβέσον σῆψον δὲ ἀσεβεῖς παραχρῆμα
ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು.
13 κρύψον δὲ εἰς γῆν ἔξω ὁμοθυμαδόν τὰ δὲ πρόσωπα αὐτῶν ἀτιμίας ἔμπλησον
ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು; ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕುಹಾಕು.
14 ὁμολογήσω ἄρα ὅτι δύναται ἡ δεξιά σου σῶσαι
ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.
15 ἀλλὰ δὴ ἰδοὺ θηρία παρὰ σοί χόρτον ἴσα βουσὶν ἐσθίει
“ನಾನು ನಿನ್ನ ಹಾಗೆ ಸೃಷ್ಟಿಮಾಡಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ.
16 ἰδοὺ δὴ ἰσχὺς αὐτοῦ ἐπ’ ὀσφύι ἡ δὲ δύναμις ἐπ’ ὀμφαλοῦ γαστρός
ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ!
17 ἔστησεν οὐρὰν ὡς κυπάρισσον τὰ δὲ νεῦρα αὐτοῦ συμπέπλεκται
ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ.
18 αἱ πλευραὶ αὐτοῦ πλευραὶ χάλκειαι ἡ δὲ ῥάχις αὐτοῦ σίδηρος χυτός
ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ.
19 τοῦτ’ ἔστιν ἀρχὴ πλάσματος κυρίου πεποιημένον ἐγκαταπαίζεσθαι ὑπὸ τῶν ἀγγέλων αὐτοῦ
ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ.
20 ἐπελθὼν δὲ ἐπ’ ὄρος ἀκρότομον ἐποίησεν χαρμονὴν τετράποσιν ἐν τῷ ταρτάρῳ
ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ.
21 ὑπὸ παντοδαπὰ δένδρα κοιμᾶται παρὰ πάπυρον καὶ κάλαμον καὶ βούτομον
ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ.
22 σκιάζονται δὲ ἐν αὐτῷ δένδρα μεγάλα σὺν ῥαδάμνοις καὶ κλῶνες ἄγνου
ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.
23 ἐὰν γένηται πλήμμυρα οὐ μὴ αἰσθηθῇ πέποιθεν ὅτι προσκρούσει ὁ Ιορδάνης εἰς τὸ στόμα αὐτοῦ
ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.
24 ἐν τῷ ὀφθαλμῷ αὐτοῦ δέξεται αὐτόν ἐνσκολιευόμενος τρήσει ῥῖνα
ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ?

< Ἰώβ 40 >