< Ἀριθμοί 3 >

1 καὶ αὗται αἱ γενέσεις Ααρων καὶ Μωυσῆ ἐν ᾗ ἡμέρᾳ ἐλάλησεν κύριος τῷ Μωυσῇ ἐν ὄρει Σινα
ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ.
2 καὶ ταῦτα τὰ ὀνόματα τῶν υἱῶν Ααρων πρωτότοκος Ναδαβ καὶ Αβιουδ Ελεαζαρ καὶ Ιθαμαρ
ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.
3 ταῦτα τὰ ὀνόματα τῶν υἱῶν Ααρων οἱ ἱερεῖς οἱ ἠλειμμένοι οὓς ἐτελείωσαν τὰς χεῖρας αὐτῶν ἱερατεύειν
ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು.
4 καὶ ἐτελεύτησεν Ναδαβ καὶ Αβιουδ ἔναντι κυρίου προσφερόντων αὐτῶν πῦρ ἀλλότριον ἔναντι κυρίου ἐν τῇ ἐρήμῳ Σινα καὶ παιδία οὐκ ἦν αὐτοῖς καὶ ἱεράτευσεν Ελεαζαρ καὶ Ιθαμαρ μετ’ Ααρων τοῦ πατρὸς αὐτῶν
ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.
5 καὶ ἐλάλησεν κύριος πρὸς Μωυσῆν λέγων
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
6 λαβὲ τὴν φυλὴν Λευι καὶ στήσεις αὐτοὺς ἐναντίον Ααρων τοῦ ἱερέως καὶ λειτουργήσουσιν αὐτῷ
“ಲೇವಿಯ ಗೋತ್ರವನ್ನು ಹತ್ತಿರ ಕರೆದು, ಯಾಜಕನಾದ ಆರೋನನ ಮುಂದೆ ನಿಲ್ಲಿಸು. ಅವರು ಅವನಿಗೆ ಸಹಾಯ ಮಾಡಲಿ.
7 καὶ φυλάξουσιν τὰς φυλακὰς αὐτοῦ καὶ τὰς φυλακὰς τῶν υἱῶν Ισραηλ ἔναντι τῆς σκηνῆς τοῦ μαρτυρίου ἐργάζεσθαι τὰ ἔργα τῆς σκηνῆς
ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.
8 καὶ φυλάξουσιν πάντα τὰ σκεύη τῆς σκηνῆς τοῦ μαρτυρίου καὶ τὰς φυλακὰς τῶν υἱῶν Ισραηλ κατὰ πάντα τὰ ἔργα τῆς σκηνῆς
ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.
9 καὶ δώσεις τοὺς Λευίτας Ααρων καὶ τοῖς υἱοῖς αὐτοῦ τοῖς ἱερεῦσιν δόμα δεδομένοι οὗτοί μοί εἰσιν ἀπὸ τῶν υἱῶν Ισραηλ
ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.
10 καὶ Ααρων καὶ τοὺς υἱοὺς αὐτοῦ καταστήσεις ἐπὶ τῆς σκηνῆς τοῦ μαρτυρίου καὶ φυλάξουσιν τὴν ἱερατείαν αὐτῶν καὶ πάντα τὰ κατὰ τὸν βωμὸν καὶ ἔσω τοῦ καταπετάσματος καὶ ὁ ἀλλογενὴς ὁ ἁπτόμενος ἀποθανεῖται
ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”
11 καὶ ἐλάλησεν κύριος πρὸς Μωυσῆν λέγων
ಯೆಹೋವ ದೇವರು ಮೋಶೆಗೆ ಹೀಗೆಂದರು:
12 καὶ ἐγὼ ἰδοὺ εἴληφα τοὺς Λευίτας ἐκ μέσου τῶν υἱῶν Ισραηλ ἀντὶ παντὸς πρωτοτόκου διανοίγοντος μήτραν παρὰ τῶν υἱῶν Ισραηλ λύτρα αὐτῶν ἔσονται καὶ ἔσονται ἐμοὶ οἱ Λευῖται
“ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.
13 ἐμοὶ γὰρ πᾶν πρωτότοκον ἐν ᾗ ἡμέρᾳ ἐπάταξα πᾶν πρωτότοκον ἐν γῇ Αἰγύπτου ἡγίασα ἐμοὶ πᾶν πρωτότοκον ἐν Ισραηλ ἀπὸ ἀνθρώπου ἕως κτήνους ἐμοὶ ἔσονται ἐγὼ κύριος
ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”
14 καὶ ἐλάλησεν κύριος πρὸς Μωυσῆν ἐν τῇ ἐρήμῳ Σινα λέγων
ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ ಹೇಳಿದ್ದೇನೆಂದರೆ:
15 ἐπίσκεψαι τοὺς υἱοὺς Λευι κατ’ οἴκους πατριῶν αὐτῶν κατὰ δήμους αὐτῶν κατὰ συγγενείας αὐτῶν πᾶν ἀρσενικὸν ἀπὸ μηνιαίου καὶ ἐπάνω ἐπισκέψασθε αὐτούς
“ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.
16 καὶ ἐπεσκέψαντο αὐτοὺς Μωυσῆς καὶ Ααρων διὰ φωνῆς κυρίου ὃν τρόπον συνέταξεν αὐτοῖς κύριος
ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
17 καὶ ἦσαν οὗτοι οἱ υἱοὶ Λευι ἐξ ὀνομάτων αὐτῶν Γεδσων Κααθ καὶ Μεραρι
ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್ ಮತ್ತು ಮೆರಾರೀ.
18 καὶ ταῦτα τὰ ὀνόματα τῶν υἱῶν Γεδσων κατὰ δήμους αὐτῶν Λοβενι καὶ Σεμεϊ
ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.
19 καὶ υἱοὶ Κααθ κατὰ δήμους αὐτῶν Αμραμ καὶ Ισσααρ Χεβρων καὶ Οζιηλ
ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.
20 καὶ υἱοὶ Μεραρι κατὰ δήμους αὐτῶν Μοολι καὶ Μουσι οὗτοί εἰσιν δῆμοι τῶν Λευιτῶν κατ’ οἴκους πατριῶν αὐτῶν
ಮೆರಾರೀಯ ಗೋತ್ರದವರು: ಮಹ್ಲೀ ಮತ್ತು ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರವಾಗಿ ಇವರೇ ಲೇವಿ ವಂಶದವರು.
21 τῷ Γεδσων δῆμος τοῦ Λοβενι καὶ δῆμος τοῦ Σεμεϊ οὗτοι δῆμοι τοῦ Γεδσων
ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು.
22 ἡ ἐπίσκεψις αὐτῶν κατὰ ἀριθμὸν παντὸς ἀρσενικοῦ ἀπὸ μηνιαίου καὶ ἐπάνω ἡ ἐπίσκεψις αὐτῶν ἑπτακισχίλιοι καὶ πεντακόσιοι
ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಕೆಯಾದವರು 7,500 ಮಂದಿ.
23 καὶ υἱοὶ Γεδσων ὀπίσω τῆς σκηνῆς παρὰ θάλασσαν παρεμβαλοῦσιν
ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.
24 καὶ ὁ ἄρχων οἴκου πατριᾶς τοῦ δήμου τοῦ Γεδσων Ελισαφ υἱὸς Λαηλ
ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥನು ಲಾಯೇಲನ ಮಗ ಎಲ್ಯಾಸಾಫ್.
25 καὶ ἡ φυλακὴ υἱῶν Γεδσων ἐν τῇ σκηνῇ τοῦ μαρτυρίου ἡ σκηνὴ καὶ τὸ κάλυμμα καὶ τὸ κατακάλυμμα τῆς θύρας τῆς σκηνῆς τοῦ μαρτυρίου
ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ,
26 καὶ τὰ ἱστία τῆς αὐλῆς καὶ τὸ καταπέτασμα τῆς πύλης τῆς αὐλῆς τῆς οὔσης ἐπὶ τῆς σκηνῆς καὶ τὰ κατάλοιπα πάντων τῶν ἔργων αὐτοῦ
ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂತಹ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.
27 τῷ Κααθ δῆμος ὁ Αμραμις καὶ δῆμος ὁ Σααρις καὶ δῆμος ὁ Χεβρωνις καὶ δῆμος ὁ Οζιηλις οὗτοί εἰσιν δῆμοι τοῦ Κααθ
ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.
28 κατὰ ἀριθμὸν πᾶν ἀρσενικὸν ἀπὸ μηνιαίου καὶ ἐπάνω ὀκτακισχίλιοι καὶ ἑξακόσιοι φυλάσσοντες τὰς φυλακὰς τῶν ἁγίων
ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು.
29 οἱ δῆμοι τῶν υἱῶν Κααθ παρεμβαλοῦσιν ἐκ πλαγίων τῆς σκηνῆς κατὰ λίβα
ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.
30 καὶ ὁ ἄρχων οἴκου πατριῶν τῶν δήμων τοῦ Κααθ Ελισαφαν υἱὸς Οζιηλ
ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.
31 καὶ ἡ φυλακὴ αὐτῶν ἡ κιβωτὸς καὶ ἡ τράπεζα καὶ ἡ λυχνία καὶ τὰ θυσιαστήρια καὶ τὰ σκεύη τοῦ ἁγίου ὅσα λειτουργοῦσιν ἐν αὐτοῖς καὶ τὸ κατακάλυμμα καὶ πάντα τὰ ἔργα αὐτῶν
ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.
32 καὶ ὁ ἄρχων ἐπὶ τῶν ἀρχόντων τῶν Λευιτῶν Ελεαζαρ ὁ υἱὸς Ααρων τοῦ ἱερέως καθεσταμένος φυλάσσειν τὰς φυλακὰς τῶν ἁγίων
ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.
33 τῷ Μεραρι δῆμος ὁ Μοολι καὶ δῆμος ὁ Μουσι οὗτοί εἰσιν δῆμοι Μεραρι
ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು.
34 ἡ ἐπίσκεψις αὐτῶν κατὰ ἀριθμόν πᾶν ἀρσενικὸν ἀπὸ μηνιαίου καὶ ἐπάνω ἑξακισχίλιοι καὶ πεντήκοντα
ಅವರಲ್ಲಿ ಎಣಿಕೆಯಾದವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 6,200 ಮಂದಿ.
35 καὶ ὁ ἄρχων οἴκου πατριῶν τοῦ δήμου τοῦ Μεραρι Σουριηλ υἱὸς Αβιχαιλ ἐκ πλαγίων τῆς σκηνῆς παρεμβαλοῦσιν πρὸς βορρᾶν
ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.
36 ἡ ἐπίσκεψις ἡ φυλακὴ υἱῶν Μεραρι τὰς κεφαλίδας τῆς σκηνῆς καὶ τοὺς μοχλοὺς αὐτῆς καὶ τοὺς στύλους αὐτῆς καὶ τὰς βάσεις αὐτῆς καὶ πάντα τὰ σκεύη αὐτῶν καὶ τὰ ἔργα αὐτῶν
ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ
37 καὶ τοὺς στύλους τῆς αὐλῆς κύκλῳ καὶ τὰς βάσεις αὐτῶν καὶ τοὺς πασσάλους καὶ τοὺς κάλους αὐτῶν
ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.
38 καὶ οἱ παρεμβάλλοντες κατὰ πρόσωπον τῆς σκηνῆς τοῦ μαρτυρίου ἀπ’ ἀνατολῆς Μωυσῆς καὶ Ααρων καὶ οἱ υἱοὶ αὐτοῦ φυλάσσοντες τὰς φυλακὰς τοῦ ἁγίου εἰς τὰς φυλακὰς τῶν υἱῶν Ισραηλ καὶ ὁ ἀλλογενὴς ὁ ἁπτόμενος ἀποθανεῖται
ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.
39 πᾶσα ἡ ἐπίσκεψις τῶν Λευιτῶν οὓς ἐπεσκέψατο Μωυσῆς καὶ Ααρων διὰ φωνῆς κυρίου κατὰ δήμους αὐτῶν πᾶν ἀρσενικὸν ἀπὸ μηνιαίου καὶ ἐπάνω δύο καὶ εἴκοσι χιλιάδες
ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ.
40 καὶ εἶπεν κύριος πρὸς Μωυσῆν λέγων ἐπίσκεψαι πᾶν πρωτότοκον ἄρσεν τῶν υἱῶν Ισραηλ ἀπὸ μηνιαίου καὶ ἐπάνω καὶ λαβὲ τὸν ἀριθμὸν ἐξ ὀνόματος
ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
41 καὶ λήμψῃ τοὺς Λευίτας ἐμοί ἐγὼ κύριος ἀντὶ πάντων τῶν πρωτοτόκων τῶν υἱῶν Ισραηλ καὶ τὰ κτήνη τῶν Λευιτῶν ἀντὶ πάντων τῶν πρωτοτόκων ἐν τοῖς κτήνεσιν τῶν υἱῶν Ισραηλ
ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’” ಎಂದರು.
42 καὶ ἐπεσκέψατο Μωυσῆς ὃν τρόπον ἐνετείλατο κύριος πᾶν πρωτότοκον ἐν τοῖς υἱοῖς Ισραηλ
ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು.
43 καὶ ἐγένοντο πάντα τὰ πρωτότοκα τὰ ἀρσενικὰ κατὰ ἀριθμὸν ἐξ ὀνόματος ἀπὸ μηνιαίου καὶ ἐπάνω ἐκ τῆς ἐπισκέψεως αὐτῶν δύο καὶ εἴκοσι χιλιάδες τρεῖς καὶ ἑβδομήκοντα καὶ διακόσιοι
ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಜೇಷ್ಠರಾದವರೆಲ್ಲರ ಒಟ್ಟು ಸಂಖ್ಯೆ 22,273 ಮಂದಿ.
44 καὶ ἐλάλησεν κύριος πρὸς Μωυσῆν λέγων
ಯೆಹೋವ ದೇವರು ಮೋಶೆಗೆ ಪುನಃ ಹೇಳಿದ್ದೇನೆಂದರೆ,
45 λαβὲ τοὺς Λευίτας ἀντὶ πάντων τῶν πρωτοτόκων τῶν υἱῶν Ισραηλ καὶ τὰ κτήνη τῶν Λευιτῶν ἀντὶ τῶν κτηνῶν αὐτῶν καὶ ἔσονται ἐμοὶ οἱ Λευῖται ἐγὼ κύριος
“ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು.
46 καὶ τὰ λύτρα τριῶν καὶ ἑβδομήκοντα καὶ διακοσίων οἱ πλεονάζοντες παρὰ τοὺς Λευίτας ἀπὸ τῶν πρωτοτόκων τῶν υἱῶν Ισραηλ
ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ
47 καὶ λήμψῃ πέντε σίκλους κατὰ κεφαλήν κατὰ τὸ δίδραχμον τὸ ἅγιον λήμψῃ εἴκοσι ὀβολοὺς τοῦ σίκλου
ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.
48 καὶ δώσεις τὸ ἀργύριον Ααρων καὶ τοῖς υἱοῖς αὐτοῦ λύτρα τῶν πλεοναζόντων ἐν αὐτοῖς
ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.”
49 καὶ ἔλαβεν Μωυσῆς τὸ ἀργύριον τὰ λύτρα τῶν πλεοναζόντων εἰς τὴν ἐκλύτρωσιν τῶν Λευιτῶν
ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
50 παρὰ τῶν πρωτοτόκων τῶν υἱῶν Ισραηλ ἔλαβεν τὸ ἀργύριον χιλίους τριακοσίους ἑξήκοντα πέντε σίκλους κατὰ τὸν σίκλον τὸν ἅγιον
ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು.
51 καὶ ἔδωκεν Μωυσῆς τὰ λύτρα τῶν πλεοναζόντων Ααρων καὶ τοῖς υἱοῖς αὐτοῦ διὰ φωνῆς κυρίου ὃν τρόπον συνέταξεν κύριος τῷ Μωυσῇ
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು.

< Ἀριθμοί 3 >