< Ψαλμοί 123 >

1 ᾠδὴ τῶν ἀναβαθμῶν πρὸς σὲ ἦρα τοὺς ὀφθαλμούς μου τὸν κατοικοῦντα ἐν τῷ οὐρανῷ
ಯಾತ್ರಾಗೀತೆ. ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
2 ἰδοὺ ὡς ὀφθαλμοὶ δούλων εἰς χεῖρας τῶν κυρίων αὐτῶν ὡς ὀφθαλμοὶ παιδίσκης εἰς χεῖρας τῆς κυρίας αὐτῆς οὕτως οἱ ὀφθαλμοὶ ἡμῶν πρὸς κύριον τὸν θεὸν ἡμῶν ἕως οὗ οἰκτιρήσαι ἡμᾶς
ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
3 ἐλέησον ἡμᾶς κύριε ἐλέησον ἡμᾶς ὅτι ἐπὶ πολὺ ἐπλήσθημεν ἐξουδενώσεως
ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
4 ἐπὶ πλεῖον ἐπλήσθη ἡ ψυχὴ ἡμῶν τὸ ὄνειδος τοῖς εὐθηνοῦσιν καὶ ἡ ἐξουδένωσις τοῖς ὑπερηφάνοις
ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.

< Ψαλμοί 123 >