< Ζαχαρίας 10 >

1 αἰτεῖσθε ὑετὸν παρὰ κυρίου καθ’ ὥραν πρόιμον καὶ ὄψιμον κύριος ἐποίησεν φαντασίας καὶ ὑετὸν χειμερινὸν δώσει αὐτοῖς ἑκάστῳ βοτάνην ἐν ἀγρῷ
ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.
2 διότι οἱ ἀποφθεγγόμενοι ἐλάλησαν κόπους καὶ οἱ μάντεις ὁράσεις ψευδεῖς καὶ τὰ ἐνύπνια ψευδῆ ἐλάλουν μάταια παρεκάλουν διὰ τοῦτο ἐξήρθησαν ὡς πρόβατα καὶ ἐκακώθησαν διότι οὐκ ἦν ἴασις
ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.
3 ἐπὶ τοὺς ποιμένας παρωξύνθη ὁ θυμός μου καὶ ἐπὶ τοὺς ἀμνοὺς ἐπισκέψομαι καὶ ἐπισκέψεται κύριος ὁ θεὸς ὁ παντοκράτωρ τὸ ποίμνιον αὐτοῦ τὸν οἶκον Ιουδα καὶ τάξει αὐτοὺς ὡς ἵππον εὐπρεπῆ αὐτοῦ ἐν πολέμῳ
“ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.
4 καὶ ἐξ αὐτοῦ ἐπέβλεψεν καὶ ἐξ αὐτοῦ ἔταξεν καὶ ἐξ αὐτοῦ τόξον ἐν θυμῷ ἐξ αὐτοῦ ἐξελεύσεται πᾶς ὁ ἐξελαύνων ἐν τῷ αὐτῷ
ಆ ಕುಲದಿಂದಲೇ ಮೂಲೆಗಲ್ಲೂ, ಗುಡಾರದ ಮೊಳೆಯೂ, ಯುದ್ಧದ ಬಿಲ್ಲೂ, ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.
5 καὶ ἔσονται ὡς μαχηταὶ πατοῦντες πηλὸν ἐν ταῖς ὁδοῖς ἐν πολέμῳ καὶ παρατάξονται διότι κύριος μετ’ αὐτῶν καὶ καταισχυνθήσονται ἀναβάται ἵππων
ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.
6 καὶ κατισχύσω τὸν οἶκον Ιουδα καὶ τὸν οἶκον Ιωσηφ σώσω καὶ κατοικιῶ αὐτούς ὅτι ἠγάπησα αὐτούς καὶ ἔσονται ὃν τρόπον οὐκ ἀπεστρεψάμην αὐτούς διότι ἐγὼ κύριος ὁ θεὸς αὐτῶν καὶ ἐπακούσομαι αὐτοῖς
“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.
7 καὶ ἔσονται ὡς μαχηταὶ τοῦ Εφραιμ καὶ χαρήσεται ἡ καρδία αὐτῶν ὡς ἐν οἴνῳ καὶ τὰ τέκνα αὐτῶν ὄψονται καὶ εὐφρανθήσονται καὶ χαρεῖται ἡ καρδία αὐτῶν ἐπὶ τῷ κυρίῳ
ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.
8 σημανῶ αὐτοῖς καὶ εἰσδέξομαι αὐτούς διότι λυτρώσομαι αὐτούς καὶ πληθυνθήσονται καθότι ἦσαν πολλοί
ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.
9 καὶ σπερῶ αὐτοὺς ἐν λαοῖς καὶ οἱ μακρὰν μνησθήσονταί μου ἐκθρέψουσιν τὰ τέκνα αὐτῶν καὶ ἐπιστρέψουσιν
ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
10 καὶ ἐπιστρέψω αὐτοὺς ἐκ γῆς Αἰγύπτου καὶ ἐξ Ἀσσυρίων εἰσδέξομαι αὐτοὺς καὶ εἰς τὴν Γαλααδῖτιν καὶ εἰς τὸν Λίβανον εἰσάξω αὐτούς καὶ οὐ μὴ ὑπολειφθῇ ἐξ αὐτῶν οὐδὲ εἷς
ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.
11 καὶ διελεύσονται ἐν θαλάσσῃ στενῇ καὶ πατάξουσιν ἐν θαλάσσῃ κύματα καὶ ξηρανθήσεται πάντα τὰ βάθη ποταμῶν καὶ ἀφαιρεθήσεται πᾶσα ὕβρις Ἀσσυρίων καὶ σκῆπτρον Αἰγύπτου περιαιρεθήσεται
ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.
12 καὶ κατισχύσω αὐτοὺς ἐν κυρίῳ θεῷ αὐτῶν καὶ ἐν τῷ ὀνόματι αὐτοῦ κατακαυχήσονται λέγει κύριος
ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

< Ζαχαρίας 10 >