< Προς Κορινθιους Β΄ 6 >
1 συνεργουντεσ δε και παρακαλουμεν μη εισ κενον την χαριν του θεου δεξασθαι υμασ
೧ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
2 λεγει γαρ καιρω δεκτω επηκουσα σου και εν ημερα σωτηριασ εβοηθησα σοι ιδου νυν καιροσ ευπροσδεκτοσ ιδου νυν ημερα σωτηριασ
೨“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.
3 μηδεμιαν εν μηδενι διδοντεσ προσκοπην ινα μη μωμηθη η διακονια
೩ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.
4 αλλ εν παντι συνιστωντεσ εαυτουσ ωσ θεου διακονοι εν υπομονη πολλη εν θλιψεσιν εν αναγκαισ εν στενοχωριαισ
೪ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,
5 εν πληγαισ εν φυλακαισ εν ακαταστασιαισ εν κοποισ εν αγρυπνιαισ εν νηστειαισ
೫ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
6 εν αγνοτητι εν γνωσει εν μακροθυμια εν χρηστοτητι εν πνευματι αγιω εν αγαπη ανυποκριτω
೬ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,
7 εν λογω αληθειασ εν δυναμει θεου δια των οπλων τησ δικαιοσυνησ των δεξιων και αριστερων
೭ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.
8 δια δοξησ και ατιμιασ δια δυσφημιασ και ευφημιασ ωσ πλανοι και αληθεισ
೮ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.
9 ωσ αγνοουμενοι και επιγινωσκομενοι ωσ αποθνησκοντεσ και ιδου ζωμεν ωσ παιδευομενοι και μη θανατουμενοι
೯ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,
10 ωσ λυπουμενοι αει δε χαιροντεσ ωσ πτωχοι πολλουσ δε πλουτιζοντεσ ωσ μηδεν εχοντεσ και παντα κατεχοντεσ
೧೦ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
11 το στομα ημων ανεωγεν προσ υμασ κορινθιοι η καρδια ημων πεπλατυνται
೧೧ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ.
12 ου στενοχωρεισθε εν ημιν στενοχωρεισθε δε εν τοισ σπλαγχνοισ υμων
೧೨ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.
13 την δε αυτην αντιμισθιαν ωσ τεκνοισ λεγω πλατυνθητε και υμεισ
೧೩ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.
14 μη γινεσθε ετεροζυγουντεσ απιστοισ τισ γαρ μετοχη δικαιοσυνη και ανομια τισ δε κοινωνια φωτι προσ σκοτοσ
೧೪ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
15 τισ δε συμφωνησισ χριστω προσ βελιαρ η τισ μερισ πιστω μετα απιστου
೧೫ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
16 τισ δε συγκαταθεσισ ναω θεου μετα ειδωλων υμεισ γαρ ναοσ θεου εστε ζωντοσ καθωσ ειπεν ο θεοσ οτι ενοικησω εν αυτοισ και εμπεριπατησω και εσομαι αυτων θεοσ και αυτοι εσονται μοι λαοσ
೧೬ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
17 διο εξελθετε εκ μεσου αυτων και αφορισθητε λεγει κυριοσ και ακαθαρτου μη απτεσθε καγω εισδεξομαι υμασ
೧೭ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
18 και εσομαι υμιν εισ πατερα και υμεισ εσεσθε μοι εισ υιουσ και θυγατερασ λεγει κυριοσ παντοκρατωρ
೧೮ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.