< Πραξεις 24 >

1 μετα δε πεντε ημερασ κατεβη ο αρχιερευσ ανανιασ μετα των πρεσβυτερων και ρητοροσ τερτυλλου τινοσ οιτινεσ ενεφανισαν τω ηγεμονι κατα του παυλου
ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.
2 κληθεντοσ δε αυτου ηρξατο κατηγορειν ο τερτυλλοσ λεγων πολλησ ειρηνησ τυγχανοντεσ δια σου και κατορθωματων γινομενων τω εθνει τουτω δια τησ σησ προνοιασ
ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ
3 παντη τε και πανταχου αποδεχομεθα κρατιστε φηλιξ μετα πασησ ευχαριστιασ
ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.
4 ινα δε μη επι πλειον σε εγκοπτω παρακαλω ακουσαι σε ημων συντομωσ τη ση επιεικεια
ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.
5 ευροντεσ γαρ τον ανδρα τουτον λοιμον και κινουντα στασιν πασιν τοισ ιουδαιοισ τοισ κατα την οικουμενην πρωτοστατην τε τησ των ναζωραιων αιρεσεωσ
“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
6 οσ και το ιερον επειρασεν βεβηλωσαι ον και εκρατησαμεν
ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.
7
(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)
8 παρ ου δυνηση αυτοσ ανακρινασ περι παντων τουτων επιγνωναι ων ημεισ κατηγορουμεν αυτου
ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು.
9 συνεπεθεντο δε και οι ιουδαιοι φασκοντεσ ταυτα ουτωσ εχειν
ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.
10 απεκριθη δε ο παυλοσ νευσαντοσ αυτω του ηγεμονοσ λεγειν εκ πολλων ετων οντα σε κριτην τω εθνει τουτω επισταμενοσ ευθυμοτερον τα περι εμαυτου απολογουμαι
೧೦ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
11 δυναμενου σου γνωναι οτι ου πλειουσ εισιν μοι ημεραι δεκαδυο αφ ησ ανεβην προσκυνησων εν ιερουσαλημ
೧೧ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.
12 και ουτε εν τω ιερω ευρον με προσ τινα διαλεγομενον η επισυστασιν ποιουντα οχλου ουτε εν ταισ συναγωγαισ ουτε κατα την πολιν
೧೨ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
13 ουτε παραστησαι με δυνανται περι ων νυν κατηγορουσιν μου
೧೩ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.
14 ομολογω δε τουτο σοι οτι κατα την οδον ην λεγουσιν αιρεσιν ουτωσ λατρευω τω πατρωω θεω πιστευων πασιν τοισ κατα τον νομον και τοισ προφηταισ γεγραμμενοισ
೧೪ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
15 ελπιδα εχων εισ τον θεον ην και αυτοι ουτοι προσδεχονται αναστασιν μελλειν εσεσθαι νεκρων δικαιων τε και αδικων
೧೫ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
16 εν τουτω δε αυτοσ ασκω απροσκοπον συνειδησιν εχων προσ τον θεον και τουσ ανθρωπουσ δια παντοσ
೧೬ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
17 δι ετων δε πλειονων παρεγενομην ελεημοσυνασ ποιησων εισ το εθνοσ μου και προσφορασ
೧೭“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
18 εν οισ ευρον με ηγνισμενον εν τω ιερω ου μετα οχλου ουδε μετα θορυβου τινεσ απο τησ ασιασ ιουδαιοι
೧೮ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.
19 ουσ δει επι σου παρειναι και κατηγορειν ει τι εχοιεν προσ με
೧೯ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.
20 η αυτοι ουτοι ειπατωσαν τι ευρον εν εμοι αδικημα σταντοσ μου επι του συνεδριου
೨೦ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.
21 η περι μιασ ταυτησ φωνησ ησ εκραξα εστωσ εν αυτοισ οτι περι αναστασεωσ νεκρων εγω κρινομαι σημερον υφ υμων
೨೧ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.
22 ακουσασ δε ταυτα ο φηλιξ ανεβαλετο αυτουσ ακριβεστερον ειδωσ τα περι τησ οδου ειπων οταν λυσιασ ο χιλιαρχοσ καταβη διαγνωσομαι τα καθ υμασ
೨೨ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.
23 διαταξαμενοσ τε τω εκατονταρχη τηρεισθαι τον παυλον εχειν τε ανεσιν και μηδενα κωλυειν των ιδιων αυτου υπηρετειν η προσερχεσθαι αυτω
೨೩ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
24 μετα δε ημερασ τινασ παραγενομενοσ ο φηλιξ συν δρουσιλλη τη γυναικι ουση ιουδαια μετεπεμψατο τον παυλον και ηκουσεν αυτου περι τησ εισ χριστον πιστεωσ
೨೪ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.
25 διαλεγομενου δε αυτου περι δικαιοσυνησ και εγκρατειασ και του κριματοσ του μελλοντοσ εσεσθαι εμφοβοσ γενομενοσ ο φηλιξ απεκριθη το νυν εχον πορευου καιρον δε μεταλαβων μετακαλεσομαι σε
೨೫ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.
26 αμα και ελπιζων οτι χρηματα δοθησεται αυτω υπο του παυλου οπωσ λυση αυτον διο και πυκνοτερον αυτον μεταπεμπομενοσ ωμιλει αυτω
೨೬ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.
27 διετιασ δε πληρωθεισησ ελαβεν διαδοχον ο φηλιξ πορκιον φηστον θελων τε χαριτασ καταθεσθαι τοισ ιουδαιοισ ο φηλιξ κατελιπεν τον παυλον δεδεμενον
೨೭ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.

< Πραξεις 24 >