< Πραξεις 9 >

1 ο δε σαυλοσ ετι εμπνεων απειλησ και φονου εισ τουσ μαθητασ του κυριου προσελθων τω αρχιερει
ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
2 ητησατο παρ αυτου επιστολασ εισ δαμασκον προσ τασ συναγωγασ οπωσ εαν τινασ ευρη τησ οδου οντασ ανδρασ τε και γυναικασ δεδεμενουσ αγαγη εισ ιερουσαλημ
ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
3 εν δε τω πορευεσθαι εγενετο αυτον εγγιζειν τη δαμασκω και εξαιφνησ περιηστραψεν αυτον φωσ απο του ουρανου
ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.
4 και πεσων επι την γην ηκουσεν φωνην λεγουσαν αυτω σαουλ σαουλ τι με διωκεισ
ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.
5 ειπεν δε τισ ει κυριε ο δε κυριοσ ειπεν εγω ειμι ιησουσ ον συ διωκεισ
ಅದಕ್ಕೆ ಸೌಲನು; , “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;
6 αλλα αναστηθι και εισελθε εισ την πολιν και λαληθησεται σοι τι σε δει ποιειν
ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.
7 οι δε ανδρεσ οι συνοδευοντεσ αυτω ειστηκεισαν ενεοι ακουοντεσ μεν τησ φωνησ μηδενα δε θεωρουντεσ
ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.
8 ηγερθη δε ο σαυλοσ απο τησ γησ ανεωγμενων τε των οφθαλμων αυτου ουδενα εβλεπεν χειραγωγουντεσ δε αυτον εισηγαγον εισ δαμασκον
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
9 και ην ημερασ τρεισ μη βλεπων και ουκ εφαγεν ουδε επιεν
ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.
10 ην δε τισ μαθητησ εν δαμασκω ονοματι ανανιασ και ειπεν προσ αυτον ο κυριοσ εν οραματι ανανια ο δε ειπεν ιδου εγω κυριε
೧೦ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.
11 ο δε κυριοσ προσ αυτον αναστασ πορευθητι επι την ρυμην την καλουμενην ευθειαν και ζητησον εν οικια ιουδα σαυλον ονοματι ταρσεα ιδου γαρ προσευχεται
೧೧ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.
12 και ειδεν εν οραματι ανδρα ονοματι ανανιαν εισελθοντα και επιθεντα αυτω χειρα οπωσ αναβλεψη
೧೨ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.
13 απεκριθη δε ανανιασ κυριε ακηκοα απο πολλων περι του ανδροσ τουτου οσα κακα εποιησεν τοισ αγιοισ σου εν ιερουσαλημ
೧೩ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
14 και ωδε εχει εξουσιαν παρα των αρχιερεων δησαι παντασ τουσ επικαλουμενουσ το ονομα σου
೧೪ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.
15 ειπεν δε προσ αυτον ο κυριοσ πορευου οτι σκευοσ εκλογησ μοι εστιν ουτοσ του βαστασαι το ονομα μου ενωπιον εθνων και βασιλεων υιων τε ισραηλ
೧೫ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.
16 εγω γαρ υποδειξω αυτω οσα δει αυτον υπερ του ονοματοσ μου παθειν
೧೬ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.
17 απηλθεν δε ανανιασ και εισηλθεν εισ την οικιαν και επιθεισ επ αυτον τασ χειρασ ειπεν σαουλ αδελφε ο κυριοσ απεσταλκεν με ο οφθεισ σοι εν τη οδω η ηρχου οπωσ αναβλεψησ και πλησθησ πνευματοσ αγιου
೧೭ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.
18 και ευθεωσ απεπεσον απο των οφθαλμων αυτου ωσει λεπιδεσ ανεβλεψεν τε και αναστασ εβαπτισθη
೧೮ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
19 και λαβων τροφην ενισχυσεν εγενετο δε ο σαυλοσ μετα των εν δαμασκω μαθητων ημερασ τινασ
೧೯ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.
20 και ευθεωσ εν ταισ συναγωγαισ εκηρυσσεν τον χριστον οτι ουτοσ εστιν ο υιοσ του θεου
೨೦ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.
21 εξισταντο δε παντεσ οι ακουοντεσ και ελεγον ουχ ουτοσ εστιν ο πορθησασ εν ιερουσαλημ τουσ επικαλουμενουσ το ονομα τουτο και ωδε εισ τουτο εληλυθεν ινα δεδεμενουσ αυτουσ αγαγη επι τουσ αρχιερεισ
೨೧ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.
22 σαυλοσ δε μαλλον ενεδυναμουτο και συνεχυνεν τουσ ιουδαιουσ τουσ κατοικουντασ εν δαμασκω συμβιβαζων οτι ουτοσ εστιν ο χριστοσ
೨೨ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
23 ωσ δε επληρουντο ημεραι ικαναι συνεβουλευσαντο οι ιουδαιοι ανελειν αυτον
೨೩ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
24 εγνωσθη δε τω σαυλω η επιβουλη αυτων παρετηρουν τε τασ πυλασ ημερασ τε και νυκτοσ οπωσ αυτον ανελωσιν
೨೪ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
25 λαβοντεσ δε αυτον οι μαθηται νυκτοσ καθηκαν δια του τειχουσ χαλασαντεσ εν σπυριδι
೨೫ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.
26 παραγενομενοσ δε ο σαυλοσ εν ιερουσαλημ επειρατο κολλασθαι τοισ μαθηταισ και παντεσ εφοβουντο αυτον μη πιστευοντεσ οτι εστιν μαθητησ
೨೬ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
27 βαρναβασ δε επιλαβομενοσ αυτον ηγαγεν προσ τουσ αποστολουσ και διηγησατο αυτοισ πωσ εν τη οδω ειδεν τον κυριον και οτι ελαλησεν αυτω και πωσ εν δαμασκω επαρρησιασατο εν τω ονοματι του ιησου
೨೭ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
28 και ην μετ αυτων εισπορευομενοσ εισ ιερουσαλημ και παρρησιαζομενοσ εν τω ονοματι του κυριου ιησου
೨೮ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.
29 ελαλει τε και συνεζητει προσ τουσ ελληνιστασ οι δε επεχειρουν αυτον ανελειν
೨೯ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.
30 επιγνοντεσ δε οι αδελφοι κατηγαγον αυτον εισ καισαρειαν και εξαπεστειλαν αυτον εισ ταρσον
೩೦ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
31 αι μεν ουν εκκλησιαι καθ ολησ τησ ιουδαιασ και γαλιλαιασ και σαμαρειασ ειχον ειρηνην οικοδομουμεναι και πορευομεναι τω φοβω του κυριου και τη παρακλησει του αγιου πνευματοσ επληθυνοντο
೩೧ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
32 εγενετο δε πετρον διερχομενον δια παντων κατελθειν και προσ τουσ αγιουσ τουσ κατοικουντασ λυδδαν
೩೨ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.
33 ευρεν δε εκει ανθρωπον τινα αινεαν ονοματι εξ ετων οκτω κατακειμενον επι κραββατω οσ ην παραλελυμενοσ
೩೩ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
34 και ειπεν αυτω ο πετροσ αινεα ιαται σε ιησουσ ο χριστοσ αναστηθι και στρωσον σεαυτω και ευθεωσ ανεστη
೩೪ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.
35 και ειδον αυτον παντεσ οι κατοικουντεσ λυδδαν και τον ασσαρωνα οιτινεσ επεστρεψαν επι τον κυριον
೩೫ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.
36 εν ιοππη δε τισ ην μαθητρια ονοματι ταβηθα η διερμηνευομενη λεγεται δορκασ αυτη ην πληρησ αγαθων εργων και ελεημοσυνων ων εποιει
೩೬ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
37 εγενετο δε εν ταισ ημεραισ εκειναισ ασθενησασαν αυτην αποθανειν λουσαντεσ δε αυτην εθηκαν εν υπερωω
೩೭ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು.
38 εγγυσ δε ουσησ λυδδησ τη ιοππη οι μαθηται ακουσαντεσ οτι πετροσ εστιν εν αυτη απεστειλαν προσ αυτον παρακαλουντεσ μη οκνησαι διελθειν εωσ αυτων
೩೮ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.
39 αναστασ δε πετροσ συνηλθεν αυτοισ ον παραγενομενον ανηγαγον εισ το υπερωον και παρεστησαν αυτω πασαι αι χηραι κλαιουσαι και επιδεικνυμεναι χιτωνασ και ιματια οσα εποιει μετ αυτων ουσα η δορκασ
೩೯ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.
40 εκβαλων δε εξω παντασ ο πετροσ θεισ τα γονατα προσηυξατο και επιστρεψασ προσ το σωμα ειπεν ταβηθα αναστηθι η δε ηνοιξεν τουσ οφθαλμουσ αυτησ και ιδουσα τον πετρον ανεκαθισεν
೪೦ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.
41 δουσ δε αυτη χειρα ανεστησεν αυτην φωνησασ δε τουσ αγιουσ και τασ χηρασ παρεστησεν αυτην ζωσαν
೪೧ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.
42 γνωστον δε εγενετο καθ ολησ τησ ιοππησ και πολλοι επιστευσαν επι τον κυριον
೪೨ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.
43 εγενετο δε ημερασ ικανασ μειναι αυτον εν ιοππη παρα τινι σιμωνι βυρσει
೪೩ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.

< Πραξεις 9 >