< Προς Κολοσσαεις 3 >

1 ει ουν συνηγερθητε τω χριστω τα ανω ζητειτε ου ο χριστοσ εστιν εν δεξια του θεου καθημενοσ
ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
2 τα ανω φρονειτε μη τα επι τησ γησ
ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.
3 απεθανετε γαρ και η ζωη υμων κεκρυπται συν τω χριστω εν τω θεω
ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
4 οταν ο χριστοσ φανερωθη η ζωη ημων τοτε και υμεισ συν αυτω φανερωθησεσθε εν δοξη
ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
5 νεκρωσατε ουν τα μελη υμων τα επι τησ γησ πορνειαν ακαθαρσιαν παθοσ επιθυμιαν κακην και την πλεονεξιαν ητισ εστιν ειδωλολατρεια
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
6 δι α ερχεται η οργη του θεου επι τουσ υιουσ τησ απειθειασ
ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.
7 εν οισ και υμεισ περιεπατησατε ποτε οτε εζητε εν αυτοισ
ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.
8 νυνι δε αποθεσθε και υμεισ τα παντα οργην θυμον κακιαν βλασφημιαν αισχρολογιαν εκ του στοματοσ υμων
ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.
9 μη ψευδεσθε εισ αλληλουσ απεκδυσαμενοι τον παλαιον ανθρωπον συν ταισ πραξεσιν αυτου
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
10 και ενδυσαμενοι τον νεον τον ανακαινουμενον εισ επιγνωσιν κατ εικονα του κτισαντοσ αυτον
೧೦ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
11 οπου ουκ ενι ελλην και ιουδαιοσ περιτομη και ακροβυστια βαρβαροσ σκυθησ δουλοσ ελευθεροσ αλλα τα παντα και εν πασιν χριστοσ
೧೧ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
12 ενδυσασθε ουν ωσ εκλεκτοι του θεου αγιοι και ηγαπημενοι σπλαγχνα οικτιρμου χρηστοτητα ταπεινοφροσυνην πραοτητα μακροθυμιαν
೧೨ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
13 ανεχομενοι αλληλων και χαριζομενοι εαυτοισ εαν τισ προσ τινα εχη μομφην καθωσ και ο χριστοσ εχαρισατο υμιν ουτωσ και υμεισ
೧೩ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
14 επι πασιν δε τουτοισ την αγαπην ητισ εστιν συνδεσμοσ τησ τελειοτητοσ
೧೪ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
15 και η ειρηνη του θεου βραβευετω εν ταισ καρδιαισ υμων εισ ην και εκληθητε εν ενι σωματι και ευχαριστοι γινεσθε
೧೫ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
16 ο λογοσ του χριστου ενοικειτω εν υμιν πλουσιωσ εν παση σοφια διδασκοντεσ και νουθετουντεσ εαυτουσ ψαλμοισ και υμνοισ και ωδαισ πνευματικαισ εν χαριτι αδοντεσ εν τη καρδια υμων τω κυριω
೧೬ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
17 και παν ο τι αν ποιητε εν λογω η εν εργω παντα εν ονοματι κυριου ιησου ευχαριστουντεσ τω θεω και πατρι δι αυτου
೧೭ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
18 αι γυναικεσ υποτασσεσθε τοισ ιδιοισ ανδρασιν ωσ ανηκεν εν κυριω
೧೮ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
19 οι ανδρεσ αγαπατε τασ γυναικασ και μη πικραινεσθε προσ αυτασ
೧೯ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
20 τα τεκνα υπακουετε τοισ γονευσιν κατα παντα τουτο γαρ εστιν ευαρεστον εν κυριω
೨೦ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
21 οι πατερεσ μη ερεθιζετε τα τεκνα υμων ινα μη αθυμωσιν
೨೧ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
22 οι δουλοι υπακουετε κατα παντα τοισ κατα σαρκα κυριοισ μη εν οφθαλμοδουλειαισ ωσ ανθρωπαρεσκοι αλλ εν απλοτητι καρδιασ φοβουμενοι τον θεον
೨೨ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.
23 και παν ο τι εαν ποιητε εκ ψυχησ εργαζεσθε ωσ τω κυριω και ουκ ανθρωποισ
೨೩ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
24 ειδοτεσ οτι απο κυριου ληψεσθε την ανταποδοσιν τησ κληρονομιασ τω γαρ κυριω χριστω δουλευετε
೨೪ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.
25 ο δε αδικων κομιειται ο ηδικησεν και ουκ εστιν προσωποληψια
೨೫ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.

< Προς Κολοσσαεις 3 >