< Ιουδα 1 >

1 ιουδασ ιησου χριστου δουλοσ αδελφοσ δε ιακωβου τοισ εν θεω πατρι ηγιασμενοισ και ιησου χριστω τετηρημενοισ κλητοισ
ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,
2 ελεοσ υμιν και ειρηνη και αγαπη πληθυνθειη
ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.
3 αγαπητοι πασαν σπουδην ποιουμενοσ γραφειν υμιν περι τησ κοινησ σωτηριασ αναγκην εσχον γραψαι υμιν παρακαλων επαγωνιζεσθαι τη απαξ παραδοθειση τοισ αγιοισ πιστει
ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
4 παρεισεδυσαν γαρ τινεσ ανθρωποι οι παλαι προγεγραμμενοι εισ τουτο το κριμα ασεβεισ την του θεου ημων χαριν μετατιθεντεσ εισ ασελγειαν και τον μονον δεσποτην θεον και κυριον ημων ιησουν χριστον αρνουμενοι
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
5 υπομνησαι δε υμασ βουλομαι ειδοτασ υμασ απαξ τουτο οτι ο κυριοσ λαον εκ γησ αιγυπτου σωσασ το δευτερον τουσ μη πιστευσαντασ απωλεσεν
ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.
6 αγγελουσ τε τουσ μη τηρησαντασ την εαυτων αρχην αλλα απολιποντασ το ιδιον οικητηριον εισ κρισιν μεγαλησ ημερασ δεσμοισ αιδιοισ υπο ζοφον τετηρηκεν (aïdios g126)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. (aïdios g126)
7 ωσ σοδομα και γομορρα και αι περι αυτασ πολεισ τον ομοιον τουτοισ τροπον εκπορνευσασαι και απελθουσαι οπισω σαρκοσ ετερασ προκεινται δειγμα πυροσ αιωνιου δικην υπεχουσαι (aiōnios g166)
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. (aiōnios g166)
8 ομοιωσ μεντοι και ουτοι ενυπνιαζομενοι σαρκα μεν μιαινουσιν κυριοτητα δε αθετουσιν δοξασ δε βλασφημουσιν
ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
9 ο δε μιχαηλ ο αρχαγγελοσ οτε τω διαβολω διακρινομενοσ διελεγετο περι του μωυσεωσ σωματοσ ουκ ετολμησεν κρισιν επενεγκειν βλασφημιασ αλλ ειπεν επιτιμησαι σοι κυριοσ
ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.
10 ουτοι δε οσα μεν ουκ οιδασιν βλασφημουσιν οσα δε φυσικωσ ωσ τα αλογα ζωα επιστανται εν τουτοισ φθειρονται
೧೦ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
11 ουαι αυτοισ οτι τη οδω του καιν επορευθησαν και τη πλανη του βαλααμ μισθου εξεχυθησαν και τη αντιλογια του κορε απωλοντο
೧೧ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.
12 ουτοι εισιν εν ταισ αγαπαισ υμων σπιλαδεσ συνευωχουμενοι αφοβωσ εαυτουσ ποιμαινοντεσ νεφελαι ανυδροι υπο ανεμων παραφερομεναι δενδρα φθινοπωρινα ακαρπα δισ αποθανοντα εκριζωθεντα
೧೨ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.
13 κυματα αγρια θαλασσησ επαφριζοντα τασ εαυτων αισχυνασ αστερεσ πλανηται οισ ο ζοφοσ του σκοτουσ εισ αιωνα τετηρηται (aiōn g165)
೧೩ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. (aiōn g165)
14 προεφητευσεν δε και τουτοισ εβδομοσ απο αδαμ ενωχ λεγων ιδου ηλθεν κυριοσ εν αγιαισ μυριασιν αυτου
೧೪ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,
15 ποιησαι κρισιν κατα παντων και ελεγξαι παντασ τουσ ασεβεισ αυτων περι παντων των εργων ασεβειασ αυτων ων ησεβησαν και περι παντων των σκληρων ων ελαλησαν κατ αυτου αμαρτωλοι ασεβεισ
೧೫ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.
16 ουτοι εισιν γογγυσται μεμψιμοιροι κατα τασ επιθυμιασ αυτων πορευομενοι και το στομα αυτων λαλει υπερογκα θαυμαζοντεσ προσωπα ωφελειασ χαριν
೧೬ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.
17 υμεισ δε αγαπητοι μνησθητε των ρηματων των προειρημενων υπο των αποστολων του κυριου ημων ιησου χριστου
೧೭ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
18 οτι ελεγον υμιν οτι εν εσχατω χρονω εσονται εμπαικται κατα τασ εαυτων επιθυμιασ πορευομενοι των ασεβειων
೧೮“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.
19 ουτοι εισιν οι αποδιοριζοντεσ ψυχικοι πνευμα μη εχοντεσ
೧೯ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.
20 υμεισ δε αγαπητοι τη αγιωτατη υμων πιστει εποικοδομουντεσ εαυτουσ εν πνευματι αγιω προσευχομενοι
೨೦ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.
21 εαυτουσ εν αγαπη θεου τηρησατε προσδεχομενοι το ελεοσ του κυριου ημων ιησου χριστου εισ ζωην αιωνιον (aiōnios g166)
೨೧ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. (aiōnios g166)
22 και ουσ μεν ελεειτε διακρινομενοι
೨೨ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,
23 ουσ δε εν φοβω σωζετε εκ πυροσ αρπαζοντεσ μισουντεσ και τον απο τησ σαρκοσ εσπιλωμενον χιτωνα
೨೩ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
24 τω δε δυναμενω φυλαξαι αυτουσ απταιστουσ και στησαι κατενωπιον τησ δοξησ αυτου αμωμουσ εν αγαλλιασει
೨೪ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,
25 μονω σοφω θεω σωτηρι ημων δοξα και μεγαλωσυνη κρατοσ και εξουσια και νυν και εισ παντασ τουσ αιωνασ αμην (aiōn g165)
೨೫ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್. (aiōn g165)

< Ιουδα 1 >