< Κατα Ματθαιον 4 >

1 τοτε ο ιησουσ ανηχθη εισ την ερημον υπο του πνευματοσ πειρασθηναι υπο του διαβολου
ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
2 και νηστευσασ ημερασ τεσσαρακοντα και νυκτασ τεσσαρακοντα υστερον επεινασεν
ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
3 και προσελθων αυτω ο πειραζων ειπεν ει υιοσ ει του θεου ειπε ινα οι λιθοι ουτοι αρτοι γενωνται
ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
4 ο δε αποκριθεισ ειπεν γεγραπται ουκ επ αρτω μονω ζησεται ανθρωποσ αλλ επι παντι ρηματι εκπορευομενω δια στοματοσ θεου
ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.
5 τοτε παραλαμβανει αυτον ο διαβολοσ εισ την αγιαν πολιν και ιστησιν αυτον επι το πτερυγιον του ιερου
ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ
6 και λεγει αυτω ει υιοσ ει του θεου βαλε σεαυτον κατω γεγραπται γαρ οτι τοισ αγγελοισ αυτου εντελειται περι σου και επι χειρων αρουσιν σε μηποτε προσκοψησ προσ λιθον τον ποδα σου
ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
7 εφη αυτω ο ιησουσ παλιν γεγραπται ουκ εκπειρασεισ κυριον τον θεον σου
ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.
8 παλιν παραλαμβανει αυτον ο διαβολοσ εισ οροσ υψηλον λιαν και δεικνυσιν αυτω πασασ τασ βασιλειασ του κοσμου και την δοξαν αυτων
ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
9 και λεγει αυτω ταυτα παντα σοι δωσω εαν πεσων προσκυνησησ μοι
ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.
10 τοτε λεγει αυτω ο ιησουσ υπαγε οπισω μου σατανα γεγραπται γαρ κυριον τον θεον σου προσκυνησεισ και αυτω μονω λατρευσεισ
೧೦ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
11 τοτε αφιησιν αυτον ο διαβολοσ και ιδου αγγελοι προσηλθον και διηκονουν αυτω
೧೧ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.
12 ακουσασ δε ο ιησουσ οτι ιωαννησ παρεδοθη ανεχωρησεν εισ την γαλιλαιαν
೧೨ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
13 και καταλιπων την ναζαρετ ελθων κατωκησεν εισ καπερναουμ την παραθαλασσιαν εν οριοισ ζαβουλων και νεφθαλειμ
೧೩ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
14 ινα πληρωθη το ρηθεν δια ησαιου του προφητου λεγοντοσ
೧೪ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,
15 γη ζαβουλων και γη νεφθαλειμ οδον θαλασσησ περαν του ιορδανου γαλιλαια των εθνων
೧೫“ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,
16 ο λαοσ ο καθημενοσ εν σκοτει ειδεν φωσ μεγα και τοισ καθημενοισ εν χωρα και σκια θανατου φωσ ανετειλεν αυτοισ
೧೬ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
17 απο τοτε ηρξατο ο ιησουσ κηρυσσειν και λεγειν μετανοειτε ηγγικεν γαρ η βασιλεια των ουρανων
೧೭ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
18 περιπατων δε παρα την θαλασσαν τησ γαλιλαιασ ειδεν δυο αδελφουσ σιμωνα τον λεγομενον πετρον και ανδρεαν τον αδελφον αυτου βαλλοντασ αμφιβληστρον εισ την θαλασσαν ησαν γαρ αλιεισ
೧೮ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
19 και λεγει αυτοισ δευτε οπισω μου και ποιησω υμασ αλιεισ ανθρωπων
೧೯ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,
20 οι δε ευθεωσ αφεντεσ τα δικτυα ηκολουθησαν αυτω
೨೦ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
21 και προβασ εκειθεν ειδεν αλλουσ δυο αδελφουσ ιακωβον τον του ζεβεδαιου και ιωαννην τον αδελφον αυτου εν τω πλοιω μετα ζεβεδαιου του πατροσ αυτων καταρτιζοντασ τα δικτυα αυτων και εκαλεσεν αυτουσ
೨೧ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
22 οι δε ευθεωσ αφεντεσ το πλοιον και τον πατερα αυτων ηκολουθησαν αυτω
೨೨ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
23 και περιηγεν ολην την γαλιλαιαν ο ιησουσ διδασκων εν ταισ συναγωγαισ αυτων και κηρυσσων το ευαγγελιον τησ βασιλειασ και θεραπευων πασαν νοσον και πασαν μαλακιαν εν τω λαω
೨೩ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
24 και απηλθεν η ακοη αυτου εισ ολην την συριαν και προσηνεγκαν αυτω παντασ τουσ κακωσ εχοντασ ποικιλαισ νοσοισ και βασανοισ συνεχομενουσ και δαιμονιζομενουσ και σεληνιαζομενουσ και παραλυτικουσ και εθεραπευσεν αυτουσ
೨೪ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
25 και ηκολουθησαν αυτω οχλοι πολλοι απο τησ γαλιλαιασ και δεκαπολεωσ και ιεροσολυμων και ιουδαιασ και περαν του ιορδανου
೨೫ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.

< Κατα Ματθαιον 4 >