< Αποκαλυψις Ιωαννου 3 >

1 και τω αγγελω τησ εν σαρδεσιν εκκλησιασ γραψον ταδε λεγει ο εχων τα επτα πνευματα του θεου και τουσ επτα αστερασ οιδα σου τα εργα οτι ονομα εχεισ οτι ζησ και νεκροσ ει
“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ.
2 γινου γρηγορων και στηρισον τα λοιπα α εμελλεσ αποβαλλειν ου γαρ ευρηκα σου τα εργα πεπληρωμενα ενωπιον του θεου μου
“ಎಚ್ಚರವಾಗು, ಸಾಯುವ ಹಾಗಿರುವಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.
3 μνημονευε ουν πωσ ειληφασ και ηκουσασ και τηρει και μετανοησον εαν ουν μη γρηγορησησ ηξω επι σε ωσ κλεπτησ και ου μη γνωσ ποιαν ωραν ηξω επι σε
ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.
4 αλλ ολιγα εχεισ ονοματα εν σαρδεσιν α ουκ εμολυναν τα ιματια αυτων και περιπατησουσιν μετ εμου εν λευκοισ οτι αξιοι εισιν
ಆದರೂತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರುಯೋಗ್ಯರಾಗಿರುವುದರಿಂದಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
5 ο νικων ουτοσ περιβαλειται εν ιματιοισ λευκοισ και ου μη εξαλειψω το ονομα αυτου εκ τησ βιβλου τησ ζωησ και ομολογησω το ονομα αυτου ενωπιον του πατροσ μου και ενωπιον των αγγελων αυτου
ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
6 ο εχων ουσ ακουσατω τι το πνευμα λεγει ταισ εκκλησιαισ
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
7 και τω αγγελω τησ εν φιλαδελφεια εκκλησιασ γραψον ταδε λεγει ο αγιοσ ο αληθινοσ ο εχων την κλειν του δαυιδ ο ανοιγων και ουδεισ κλεισει αυτην ει μη ο ανοιγων και ουδεισ ανοιξει
“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
8 οιδα σου τα εργα ιδου δεδωκα ενωπιον σου θυραν ανεωγμενην ην ουδεισ δυναται κλεισαι αυτην οτι μικραν εχεισ δυναμιν και ετηρησασ μου τον λογον και ουκ ηρνησω το ονομα μου
ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
9 ιδου διδωμι εκ τησ συναγωγησ του σατανα των λεγοντων εαυτουσ ιουδαιουσ ειναι και ουκ εισιν αλλα ψευδονται ιδου ποιησω αυτουσ ινα ηξωσιν και προσκυνησωσιν ενωπιον των ποδων σου και γνωσιν οτι ηγαπησα σε
ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.
10 οτι ετηρησασ τον λογον τησ υπομονησ μου καγω σε τηρησω εκ τησ ωρασ του πειρασμου τησ μελλουσησ ερχεσθαι επι τησ οικουμενησ ολησ πειρασαι τουσ κατοικουντασ επι τησ γησ
೧೦ಸೈರಣೆಯಿಂದಿರಬೇಕೆಂಬನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
11 ερχομαι ταχυ κρατει ο εχεισ ινα μηδεισ λαβη τον στεφανον σου
೧೧ನಾನುಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
12 ο νικων ποιησω αυτον στυλον εν τω ναω του θεου μου και εξω ου μη εξελθη ετι και γραψω επ αυτον το ονομα του θεου μου και το ονομα τησ πολεωσ του θεου μου τησ καινησ ιερουσαλημ η καταβαινει εκ του ουρανου απο του θεου μου και το ονομα μου το καινον
೧೨ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
13 ο εχων ουσ ακουσατω τι το πνευμα λεγει ταισ εκκλησιαισ
೧೩ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
14 και τω αγγελω τησ εν λαοδικεια εκκλησιασ γραψον ταδε λεγει ο αμην ο μαρτυσ ο πιστοσ και αληθινοσ η αρχη τησ κτισεωσ του θεου
೧೪“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ‘ಆಮೆನ್’ ಎಂಬಾತನುಹೇಳುವುದೇನಂದರೆ,
15 οιδα σου τα εργα οτι ουτε ψυχροσ ει ουτε ζεστοσ οφελον ψυχροσ ησ η ζεστοσ
೧೫ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.
16 ουτωσ οτι χλιαροσ ει και ου ζεστοσ ουτε ψυχροσ μελλω σε εμεσαι εκ του στοματοσ μου
೧೬ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
17 οτι λεγεισ πλουσιοσ ειμι και πεπλουτηκα και ουδενοσ χρειαν εχω και ουκ οιδασ οτι συ ει ο ταλαιπωροσ και ο ελεεινοσ και πτωχοσ και τυφλοσ και γυμνοσ
೧೭ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
18 συμβουλευω σοι αγορασαι χρυσιον παρ εμου πεπυρωμενον εκ πυροσ ινα πλουτησησ και ιματια λευκα ινα περιβαλη και μη φανερωθη η αισχυνη τησ γυμνοτητοσ σου και κολλυριον ινα εγχριση τουσ οφθαλμουσ σου ινα βλεπησ
೧೮ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
19 εγω οσουσ εαν φιλω ελεγχω και παιδευω ζηλωσον ουν και μετανοησον
೧೯ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.
20 ιδου εστηκα επι την θυραν και κρουω εαν τισ ακουση τησ φωνησ μου και ανοιξη την θυραν και εισελευσομαι προσ αυτον και δειπνησω μετ αυτου και αυτοσ μετ εμου
೨೦ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
21 ο νικων δωσω αυτω καθισαι μετ εμου εν τω θρονω μου ωσ καγω ενικησα και εκαθισα μετα του πατροσ μου εν τω θρονω αυτου
೨೧ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
22 ο εχων ουσ ακουσατω τι το πνευμα λεγει ταισ εκκλησιαισ
೨೨ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

< Αποκαλυψις Ιωαννου 3 >