< Ιωαννου Γ΄ 1 >
1 Ο πρεσβύτερος προς Γάϊον τον αγαπητόν, τον οποίον εγώ αγαπώ εν αληθεία.
೧ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;
2 Αγαπητέ, κατά πάντα εύχομαι να ευοδούσαι και να υγιαίνης, καθώς ευοδούται η ψυχή σου.
೨ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
3 Διότι εχάρην κατά πολλά ότι έρχονται αδελφοί και μαρτυρούσιν εις την αλήθειάν σου, καθώς συ περιπατείς εν τη αληθεία.
೩ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.
4 Μεγαλητέραν χαράν δεν έχω παρά τούτο, να ακούω ότι τα τέκνα μου περιπατούσιν εν τη αληθεία.
೪ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
5 Αγαπητέ, έργον άξιον πιστού πράττεις ό, τι κάμης εις τους αδελφούς και εις τους ξένους,
೫ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.
6 οίτινες εμαρτύρησαν περί της αγάπης σου ενώπιον της εκκλησίας, τους οποίους καλώς θέλεις πράξει προπέμψας αξίως του Θεού.
೬ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.
7 Διότι υπέρ του ονόματος αυτού εξήλθον, χωρίς να λαμβάνωσι μηδέν από των εθνών.
೭ಏಕೆಂದರೆ, ಅವರು ಕ್ರಿಸ್ತನ ಹೆಸರನ್ನು ಪ್ರಚುರಪಡಿಸುವ ನಿಮಿತ್ತವಾಗಿ ಹೊರಟಿದ್ದಾರೆ. ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
8 Ημείς λοιπόν χρεωστούμεν να υποδεχώμεθα τους τοιούτους, διά να γινώμεθα συνεργοί εις την αλήθειαν.
೮ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
9 Έγραψα προς την εκκλησίαν· αλλ' ο φιλοπρωτεύων αυτών Διοτρεφής δεν δέχεται ημάς.
೯ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.
10 Διά τούτο, εάν έλθω, θέλω υπενθυμίσει τα έργα αυτού, τα οποία κάμνει, φλυαρών εναντίον ημών με λόγους πονηρούς· και μη αρκούμενος εις τούτους, ούτε αυτός δέχεται τους αδελφούς, αλλά και τους θέλοντας να δεχθώσιν εμποδίζει και από της εκκλησίας εκβάλλει.
೧೦ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.
11 Αγαπητέ, μη μιμού το κακόν, αλλά το αγαθόν. Ο αγαθοποιών εκ του Θεού είναι, ο δε κακοποιών δεν είδε τον Θεόν.
೧೧ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
12 Εις τον Δημήτριον δίδεται καλή μαρτυρία υπό πάντων και υπ' αυτής της αληθείας· και ημείς δε μαρτυρούμεν, και εξεύρετε ότι η μαρτυρία ημών είναι αληθής.
೧೨ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.
13 Πολλά είχον να γράφω, αλλά δεν θέλω να σοι γράψω διά μελάνης και καλάμου,
೧೩ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ, ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ.
14 αλλ' ελπίζω ταχέως να σε ίδω, και θέλομεν λαλήσει στόμα προς στόμα. Ειρήνη εις σέ· Ασπάζονταί σε οι φίλοι. Ασπάζου τους φίλους κατ' όνομα.
೧೪ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ. ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರೆಲ್ಲರನ್ನೂ ಹೆಸರಿಸಿ ವಂದಿಸು.