< Προς Γαλατας 5 >
1 Εν τη ελευθερία λοιπόν, με την οποίαν ηλευθέρωσεν ημάς ο Χριστός, μένετε σταθεροί, και μη υποβληθήτε πάλιν εις ζυγόν δουλείας.
ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.
2 Ιδού, εγώ ο Παύλος σας λέγω ότι εάν περιτέμνησθε, ο Χριστός δεν θέλει σας ωφελήσει ουδέν.
ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.
3 Μαρτύρομαι δε πάλιν προς πάντα άνθρωπον περιτεμνόμενον, ότι είναι χρεώστης να εκτελή όλον τον νόμον.
ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ.
4 Απεχωρίσθητε από του Χριστού όσοι δικαιόνεσθε διά του νόμου, εξεπέσατε από της χάριτος·
ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
5 διότι ημείς διά του Πνεύματος προσδοκώμεν εκ πίστεως την ελπίδα της δικαιώσεως.
ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.
6 Διότι εν Χριστώ Ιησού ούτε περιτομή έχει ισχύν τινά, ούτε ακροβυστία, αλλά πίστις δι' αγάπης ενεργουμένη.
ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.
7 Ετρέχετε καλώς· τις σας ημπόδισεν ώστε να μη πείθησθε εις την αλήθειαν;
ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?
8 Η κατάπεισις αύτη δεν είναι εξ εκείνου, όστις σας καλεί.
ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ.
9 Ολίγη ζύμη καθιστά όλον το φύραμα ένζυμον.
ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು.
10 Εγώ έχω πεποίθησιν εις εσάς διά του Κυρίου ότι δεν θέλετε φρονήσει ουδέν άλλο· όστις όμως σας ταράττει, αυτός θέλει υποφέρει την ποινήν, οποίος και αν ήναι.
ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.
11 Εγώ δε, αδελφοί, εάν ακόμη κηρύττω περιτομήν, διά τι πλέον κατατρέχομαι; άρα κατηργήθη το σκάνδαλον του σταυρού.
ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?
12 Είθε να αποκοπώσιν οι ταράττοντές σας.
ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ!
13 Διότι σεις, αδελφοί, προσεκλήθητε εις ελευθερίαν· μόνον μη μεταχειρίζεσθε την ελευθερίαν εις αφορμήν της σαρκός, αλλά διά της αγάπης δουλεύετε αλλήλους.
ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.
14 Διότι όλος ο νόμος εις ένα λόγον συμπληρούται, εις τον, Θέλεις αγαπά τον πλησίον σου ως σεαυτόν.
ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.
15 Εάν όμως δάκνητε και κατατρώγητε αλλήλους, προσέχετε μη υπ' αλλήλων αφανισθήτε.
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.
16 Λέγω λοιπόν, Περιπατείτε κατά το Πνεύμα και δεν θέλετε εκπληροί την επιθυμίαν της σαρκός.
ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.
17 Διότι η σαρξ επιθυμεί εναντία του Πνεύματος, το δε Πνεύμα εναντία της σαρκός· ταύτα δε αντίκεινται προς άλληλα, ώστε εκείνα, τα οποία θέλετε, να μη πράττητε.
ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.
18 Αλλ' εάν οδηγήσθε υπό του Πνεύματος, δεν είσθε υπό νόμον.
ಆದರೆ ನೀವು ದೇವರ ಆತ್ಮದಿಂದ ನಡೆಸಿಕೊಳ್ಳುವವರಾದರೆ, ನಿಯಮದ ಅಧೀನತೆಯಲ್ಲಿ ಇರುವವರಲ್ಲ.
19 Φανερά δε είναι τα έργα της σαρκός, τα οποία είναι μοιχεία, πορνεία, ακαθαρσία, ασέλγεια,
ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,
20 ειδωλολατρεία, φαρμακεία, έχθραι, έριδες, ζηλοτυπίαι, θυμοί, μάχαι, διχοστασίαι, αιρέσεις,
ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,
21 φθόνοι, φόνοι, μέθαι, κώμοι, και τα όμοια τούτων, περί των οποίων σας προλέγω, καθώς και προείπον, ότι οι τα τοιαύτα πράττοντες βασιλείαν Θεού δεν θέλουσι κληρονομήσει.
ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
22 Ο δε καρπός του Πνεύματος είναι αγάπη, χαρά, ειρήνη, μακροθυμία, χρηστότης, αγαθωσύνη, πίστις,
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,
23 πραότης, εγκράτεια· κατά των τοιούτων δεν υπάρχει νόμος.
ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
24 Όσοι δε είναι του Χριστού εσταύρωσαν την σάρκα ομού με τα πάθη και τας επιθυμίας.
ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
25 Εάν ζώμεν κατά το Πνεύμα, ας περιπατώμεν και κατά το Πνεύμα.
ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.
26 Μη γινώμεθα κενόδοξοι, αλλήλους ερεθίζοντες, αλλήλους φθονούντες.
ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.