< Κατα Λουκαν 14 >

1 Και ότε ήλθεν αυτός εις τον οίκον τινός των αρχόντων των Φαρισαίων το σάββατον διά να φάγη άρτον, εκείνοι παρετήρουν αυτόν.
ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
2 Και ιδού, άνθρωπός τις υδρωπικός ήτο έμπροσθεν αυτού.
ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ,
3 Και αποκριθείς ο Ιησούς, είπε προς τους νομικούς και Φαρισαίους, λέγων· Είναι τάχα συγκεχωρημένον να θεραπεύη τις εν τω σαββάτω;
“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
4 Οι δε εσιώπησαν. Και πιάσας ιάτρευσεν αυτόν και απέλυσε.
ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
5 Και αποκριθείς προς αυτούς είπε· Τίνος υμών ο όνος ή ο βους θέλει πέσει εις φρέαρ, και δεν θέλει ευθύς ανασύρει αυτόν εν τη ημέρα του σαββάτου;
“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.
6 Και δεν ηδυνήθησαν να αποκριθώσιν εις αυτόν προς ταύτα.
ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.
7 Είπε δε παραβολήν προς τους κεκλημένους, επειδή παρετήρει πως εξέλεγον τας πρωτοκαθεδρίας, λέγων προς αυτούς.
ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
8 Όταν προσκληθής υπό τινός εις γάμους, μη καθήσης εις τον πρώτον τόπον, μήποτε είναι προσκεκλημένος υπ' αυτού εντιμότερός σου,
ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು
9 και ελθών εκείνος, όστις εκάλεσε σε και αυτόν, σοι είπη· Δος τόπον εις τούτον· και τότε αρχίσης με αισχύνην να λαμβάνης τον έσχατον τόπον.
ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.
10 Αλλ' όταν προσκληθής, ύπαγε και κάθησον εις τον έσχατον τόπον, διά να σοι είπη όταν έλθη εκείνος, όστις σε εκάλεσε· Φίλε, ανάβα ανωτέρω· τότε θέλεις έχει δόξαν ενώπιον των συγκαθημένων μετά σου.
೧೦ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
11 Διότι πας ο υψών εαυτόν θέλει ταπεινωθή και ο ταπεινών εαυτόν θέλει υψωθή.
೧೧ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
12 Έλεγε δε και προς εκείνον, όστις προσεκάλεσεν αυτόν. Όταν κάμνης γεύμα ή δείπνον, μη προσκάλει τους φίλους σου μηδέ τους αδελφούς σου μηδέ τους συγγενείς σου μηδέ γείτονας πλουσίους, μήποτε και αυτοί σε αντικαλέσωσι, και γείνη εις σε ανταπόδοσις.
೧೨ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.
13 Αλλ' όταν κάμνης υποδοχήν, προσκάλει πτωχούς, βεβλαμμένους, χωλούς, τυφλούς,
೧೩ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,
14 και θέλεις είσθαι μακάριος, διότι δεν έχουσι να σοι ανταποδώσωσιν· επειδή η ανταπόδοσις θέλει γείνει εις σε εν τη αναστάσει των δικαίων.
೧೪ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
15 Ακούσας δε ταύτα εις των συγκαθημένων, είπε προς αυτόν· Μακάριος όστις φάγη άρτον εν τη βασιλεία του Θεού.
೧೫ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
16 Ο δε είπε προς αυτόν· Άνθρωπος τις έκαμε δείπνον μέγα και εκάλεσε πολλούς·
೧೬ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.
17 και απέστειλε τον δούλον αυτού τη ώρα του δείπνου διά να είπη προς τους κεκλημένους· Έρχεσθε, επειδή πάντα είναι ήδη έτοιμα.
೧೭ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
18 Και ήρχισαν πάντες με μίαν γνώμην να παραιτώνται. Ο πρώτος είπε προς αυτόν· Αγρόν ηγόρασα, και έχω ανάγκην να εξέλθω και να ίδω αυτόν· παρακαλώ σε, έχε με παρητημένον.
೧೮ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
19 Και άλλος είπεν· Ηγόρασα πέντε ζεύγη βοών, και υπάγω να δοκιμάσω αυτά· παρακαλώ σε, έχε με παρητημένον.
೧೯ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
20 και άλλος είπε· Γυναίκα ενυμφεύθην, και διά τούτο δεν δύναμαι να έλθω.
೨೦ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.
21 Και ελθών ο δούλος εκείνος, απήγγειλε προς τον κύριον αυτού ταύτα. Τότε οργισθείς ο οικοδεσπότης, είπε προς τον δούλον αυτού· Έξελθε ταχέως εις τας πλατείας και τας οδούς της πόλεως, και εισάγαγε εδώ τους πτωχούς και βεβλαμμένους και χωλούς και τυφλούς.
೨೧ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
22 Και είπεν ο δούλος· Κύριε, έγεινεν ως προσέταξας, και είναι έτι τόπος.
೨೨ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.
23 Και είπεν ο κύριος προς τον δούλον· Έξελθε εις τας οδούς και φραγμούς και ανάγκασον να εισέλθωσι, διά να γεμισθή ο οίκός μου.
೨೩ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
24 Διότι σας λέγω ότι ουδείς των ανδρών εκείνων των κεκλημένων θέλει γευθή του δείπνου μου.
೨೪ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.
25 Ήρχοντο δε μετ' αυτού όχλοι πολλοί. Και στραφείς είπε προς αυτούς·
೨೫ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,
26 Εάν τις έρχηται προς εμέ και δεν μισή τον πατέρα αυτού και την μητέρα και την γυναίκα και τα τέκνα και τους αδελφούς και τας αδελφάς, έτι δε και την εαυτού ζωήν, δεν δύναται να ήναι μαθητής μου.
೨೬“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
27 Και όστις δεν βαστάζει τον σταυρόν αυτού και έρχεται οπίσω μου, δεν δύναται να ήναι μαθητής μου.
೨೭ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
28 Διότι τις εξ υμών, θέλων να οικοδομήση πύργον, δεν κάθηται πρώτον και λογαριάζει την δαπάνην, αν έχη τα αναγκαία διά να τελειώση αυτόν;
೨೮ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
29 μήποτε αφού βάλη θεμέλιον και δεν δύναται να τελειώση αυτόν, αρχίσωσι πάντες οι βλέποντες να εμπαίζωσιν αυτόν,
೨೯ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,
30 λέγοντες· Ότι ούτος ο άνθρωπος ήρχισε να οικοδομή και δεν ηδυνήθη να τελειώση.
೩೦‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.
31 Η τις βασιλεύς υπάγων να πολεμήση άλλον βασιλέα δεν κάθηται πρότερον και σκέπτεται εάν ήναι δυνατός με δέκα χιλιάδας να απαντήση τον ερχόμενον κατ' αυτού με είκοσι χιλιάδας;
೩೧ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?
32 Ει δε μη, ενώ αυτός είναι έτι μακράν, αποστέλλει πρέσβεις και ζητεί ειρήνην.
೩೨ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.
33 Ούτω λοιπόν πας όστις εξ υμών δεν απαρνείται πάντα τα εαυτού υπάρχοντα, δεν δύναται να ήναι μαθητής μου.
೩೩ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
34 Καλόν το άλας· αλλ' εάν το άλας διαφθαρή, με τι θέλει αρτυθή;
೩೪“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?
35 δεν είναι πλέον χρήσιμον ούτε διά την γην ούτε διά την κοπρίαν· έξω ρίπτουσιν αυτό. Ο έχων ώτα διά να ακούη ας ακούη.
೩೫ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

< Κατα Λουκαν 14 >