< હઝકિયેલ 45 >
1 ૧ જ્યારે તમે ચિઠ્ઠી નાખીને વારસો વહેંચી લો ત્યારે તમારે યહોવાહને અર્પણ ચઢાવવું; એટલે કે તે દેશનો અમુક ભાગ અર્પણ કરવો. તે ભાગ પચીસ હજાર હાથ લાંબો તથા દસ હજાર હાથ પહોળો હોય. તેની ચારે બાજુનો ભાગ પવિત્ર ગણાય.
“‘ಇದಲ್ಲದೆ ನೀವು ದೇಶವನ್ನು ಚೀಟುಹಾಕಿ ಸೊತ್ತಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಯೆಹೋವ ದೇವರಿಗೆ ಕಾಣಿಕೆಯಾಗಿ ಕೊಡಬೇಕು. ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ. ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
2 ૨ આમાંથી પવિત્રસ્થાનની ચારેબાજુ પાંચસો હાથ લાંબી તથા પાંચસો હાથ પહોળી ચોરસ જગા રાખવી તેની આસપાસ પચાસ હાથ પહોળી જગા રાખવી.
ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು.
3 ૩ આ ભાગમાંથી તારે પચીસ હાથ લાંબી અને દશ હાથ પહોળી જગા માપવી તે તારે માટે પવિત્રસ્થાન એટલે પરમપવિત્રસ્થાન થાય.
ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
4 ૪ તે જમીનનો પવિત્ર ભાગ છે. જેઓ યહોવાહની સેવા કરવા સારુ પાસે આવે છે, તે યાજકોને સારુ રહે. તે જગા તેઓનાં ઘરો માટે તથા પવિત્રસ્થાનને સારુ થાય.
ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
5 ૫ પચીસ હાથ લાંબી અને દશ હાથ પહોળી જગા, લેવીઓ કે જેઓ સભાસ્થાનની સેવા કરતા લેવીઓ માટે વતનરૂપી થાય.
ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆ ಮಾಡುವ ಲೇವಿಯರಿಗೆ ತಮಗೆ ಸೊತ್ತಾಗಿ ಇಪ್ಪತ್ತು ಕೊಠಡಿಗಳಿಗಾಗಿ ಇರಬೇಕು.
6 ૬ “પવિત્ર ભૂમિની પાસે લગોલગ પાંચહજાર હાથ પહોળો અને પચીસહજાર હાથ લાંબો ભાગ નગરને માટે નિયુક્ત કરવો. આ નગર બધા ઇઝરાયલી લોકો માટે છે.
“‘ನೀವು ಪಟ್ಟಣದ ಸೊತ್ತನ್ನು ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು. ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವುದು.
7 ૭ સરદારને માટે પવિત્રસ્થાનની તથા નગરની બન્ને બાજુએ તથા પશ્ચિમ દિશાએ તથા પૂર્વ દિશાએ જમીન હોય. લંબાઈમાં ભાગોમાંના એકની બરાબર, પશ્ચિમ તરફની સીમા પૂર્વ તરફની સીમા સુધી હોય.
“‘ಕಾಣಿಕೆಯಾದ ಪರಿಶುದ್ಧಭಾಗದ ಮುಂದೆಯೂ ಪಟ್ಟಣದ ಸೊತ್ತಿನ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು. ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಒಂದು ಗೋತ್ರದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವುದು.
8 ૮ સરદારને આ જમીન ઇઝરાયલમાં સંપત્તિ તરીકે મળે, મારા સરદારો ફરી કદી મારા લોકો પર જુલમ કરે નહિ; પણ, તેઓ ઇઝરાયલી લોકોને, તેઓનાં કુળ પ્રમાણે જમીન આપે.’”
ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.
9 ૯ પ્રભુ યહોવાહ આમ કહે છે: ‘હે ઇઝરાયલના સરદારો, ‘આટલું બસ કરો, હિંસા તથા ઝઘડો દૂર કરો; યથાર્થ ઇનસાફ કરો! મારા લોકો પરથી તમારો જુલમ બંધ કરો.’ આમ પ્રભુ યહોવાહ કહે છે.
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
10 ૧૦ ‘તમારે સાચાં ત્રાજવાં, સાચો એફાહ, સાચા બાથ રાખવા.
ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ ನ್ಯಾಯವಾದ ಬಾತ್ ಅಳತೆಯೂ ನಿಮಗಿರಬೇಕು.
11 ૧૧ એફાહ તથા બાથ એક જ માપના હોવા જોઈએ. બાથમાં હોમેરનો દસમો ભાગ હોય, એફાહમાં હોમેરનો દસમો ભાગ હોય. તેનું માપ હોમેરના ભાગ જેટલું હોય.
ಎಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರಬೇಕು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಎಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಹೋಮೆರ್ ಎರಡಕ್ಕೂ ಪ್ರಮಾಣಿತ ಅಳತೆಗೆ ಸಂಬಂಧವಾಗಿರಬೇಕು.
12 ૧૨ એક શેકેલ વીસ ગેરાહનો હોય; માનેહ સાઠ શેકેલનો હોવો જોઈએ. તમારો માનેહ વીસ શેકેલ, પચીસ તથા પચાસ શેકેલનો હોવો જોઈએ.
ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.
13 ૧૩ તમારે નીચે દર્શાવ્યા પ્રમાણે અર્પણ કરવું: દરેક હોમેર ઘઉંમાંથી એફાહનો છઠ્ઠો ભાગ, દરેક હોમેર જવમાંથી છઠ્ઠો ભાગ તમારે આપવો.
“‘ಇದು ಸಮರ್ಪಿಸಬೇಕಾದ ವಿಶೇಷ ಕಾಣಿಕೆ: ನೀವು ಜವೆಗೋಧಿಯ ಓಮೆರಿನಲ್ಲಿ ಏಫದ ಆರನೆಯ ಪಾಲನ್ನು ಕಾಣಿಕೆಯಾಗಿ ಕೊಡಬೇಕು.
14 ૧૪ તેલનો નીમેલો ભાગ આ પ્રમાણે એટલે દરેક કોર માટે, દરેક હોમેર માટે તથા દર હોમેર એક દશાંશ બાથ તેલનો હોવો જોઈએ, કેમ કે દશ બાથનો એક હોમેર થાય છે.
ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಎಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ, ಒಂದು ಕೋರ್ ಅಂದರೆ, ಹತ್ತು ಬಾತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬಾತ್ ಅಳತೆಯ ಹತ್ತನೆಯ ಒಂದು ಪಾಲು; ಏಕೆಂದರೆ ಹತ್ತು ಬಾತ್ ಒಂದೇ ಓಮೆರ್.
15 ૧૫ ઇઝરાયલના પાણીવાળા પ્રદેશમાંનાં બસો ટોળાંમાંથી એક ઘેટું કે બકરો ખાદ્યાર્પણ તરીકે, દહનીયાર્પણ તરીકે અને શાંત્યર્પણ તરીકે લોકોને શુદ્ધ કરવા માટે આપવું. આમ પ્રભુ યહોવાહ કહે છે.
ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
16 ૧૬ દેશના બધા લોકોએ ઇઝરાયલના સરદારને આ હિસ્સો આપવો.
ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು.
17 ૧૭ પર્વોમાં, ચંદ્રદર્શનોમાં તથા વિશ્રામવારોમાં, ઇઝરાયલી લોકોના ખાસ તહેવારોમાં દહનીયાર્પણો, ખાદ્યાર્પણો તથા પેયાર્પણો આપવાં એ સરદારોની જવાબદારી છે. તે ઇઝરાયલી લોકોનાં શુદ્ધિકરણ માટે પાપાર્થાર્પણો, ખાદ્યાર્પણો, દહનીયાર્પણ તથા શાંત્યર્પણો પૂરા પાડશે.’”
ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.
18 ૧૮ પ્રભુ યહોવાહ આમ કહે છે: ‘પહેલા મહિનાના પહેલા દિવસે તમારે ખોડખાંપણ વગરનો એક વાછરડો લેવો અને પવિત્રસ્થાનને માટે પાપાર્થાર્પણ ચઢાવવું.
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೆಯ ಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡಬೇಕು.
19 ૧૯ યાજક પાપાર્થાર્પણનું કેટલુંક રક્ત લઈને તે સભાસ્થાનની બારસાખ પર, વેદીના ચાર ખૂણા પર તથા અંદરના આંગણાના દરવાજે લગાડે.
ಯಾಜಕನು ದೋಷಪರಿಹಾರ ಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
20 ૨૦ દરેક વ્યક્તિએ અજાણતાંથી તથા અજ્ઞાનતાથી પાપ કર્યું હોય તો તેણે તે મહિનાના સાતમા દિવસે પણ આ પ્રમાણે કરવું. સભાસ્થાન માટે આ રીતે તમારે શુદ્ધ કરવું.
ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು.
21 ૨૧ પહેલા મહિનાના ચૌદમા દિવસે તમારે પાસ્ખાપર્વ પાળવું. સાત દિવસ સુધી પાસ્ખાપર્વ પાળવું. તારે બેખમીર રોટલી ખાવી.
“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
22 ૨૨ તે દિવસે સરદારે પોતાના તથા ઇઝરાયલી લોકોના પાપને માટે એક બળદને પાપાર્થાર્પણ તરીકે તૈયાર કરવો.
ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
23 ૨૩ એ પર્વના સાત દિવસ સરદાર યહોવાહ માટે દહનીયાર્પણ તૈયાર કરે સાત દિવસ ખોડખાંપણ વગરના સાત બળદો તથા ખોડખાંપણ વગરના સાત ઘેટાને, પાપાર્થાર્પણ તરીકે દરરોજ એક બકરાને રજૂ કરે.
ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು.
24 ૨૪ સરદાર દરેક બળદ એક એફાહ તથા ઘેટા માટે એક એફાહ, દરેક એફાહ એક હિન તેલ ખાદ્યાર્પણ તરીકે રજૂ કરે.
ಅವನು ಒಂದೊಂದು ಹೋರಿಗೆ ಮತ್ತು ಟಗರಿಗೆ ಐದು ಕಿಲೋಗ್ರಾಂ ಗೋಧಿಹಿಟ್ಟನ್ನೂ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಧಾನ್ಯ ಸಮರ್ಪಣೆಯಾಗಿ ಅರ್ಪಿಸಬೇಕು.
25 ૨૫ સાતમા મહિનાના પંદરમા દિવસે, સરદાર પર્વમાં સાત દિવસ એ જ પ્રમાણે કરે; એટલે પાપાર્થાર્પણ, દહનીયાર્પણ, ખાદ્યાર્પણ તથા તેલનાં અર્પણ ચઢાવવાં.’”
“‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.