< Danyèl 11 >

1 Mwen menm tou mwen te kanpe ak li pou ede l', pou soutni l' nan premye lanne rèy wa Dariyis la.
ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು.
2 Koulye a, mwen pral fè ou konnen verite a. Zanj lan di m' ankò: -Gen twa lòt wa ki gen pou gouvènen peyi Pès la ankò, yonn apre lòt. Apre sa, ap gen yon katriyèm wa k'ap pi rich pase tout lòt yo. Avèk richès li, l'ap chita pouvwa li byen chita, epi li pral atake gouvènman peyi Lagrès la.
ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.
3 Lè sa a, yon wa vanyan gason va parèt. Li pral gouvènen yon gwo gwo peyi. Epi l'ap fè sa li vle.
ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.
4 Men, lè l'a fin chita pouvwa li byen chita, gwo peyi l'ap gouvènen an pral separe fè kat pòsyon. Men, se p'ap pitit li yo ki pral gouvènen nan plas li. Se va kat lòt moun. Men, yo p'ap gen pouvwa li menm li te genyen an.
ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.
5 Wa peyi Lejip la pral vin fò anpil. Men, yonn nan jeneral lame li yo pral pi fò pase l'. Li pral gouvènen yon peyi ki pi gran pase pa l' la toujou.
ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು.
6 Apre kèk lanne, wa peyi Lejip la pral siyen kontra ak wa peyi Siri a. Pitit fi wa peyi Lejip la pral marye ak wa peyi Siri a pou kontra a ka kenbe. Men, kontra a p'ap rete lontan, paske yo pral touye ni li, ni mari l', ni pitit li, ni moun li te mennen avè l' lè sa a.
ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ.
7 Kèk tan apre sa, yonn nan fanmi l' yo va moute wa. Li pral atake lame wa peyi Siri a. L'ap antre nan sitadèl wa a, l'ap goumen avè l'. L'ap soti pi fò pase l'.
ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.
8 L'ap pran tout bondye moun yo ak estati an fè yo, ansanm ak tout veso fèt an ajan ak an lò yo te gen pou fè sèvis zidòl yo, l'ap pote yo desann nan peyi Lejip. Pandan kèk tan l'ap rete sou sa l' te fè a, li p'ap pwoche bò peyi Siri a.
ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.
9 Wa peyi Siri a pral atake peyi Lejip. Men, l'ap blije kase tèt tounen lakay li.
ಆಮೇಲೆ ಉತ್ತರದ ಅರಸನು, ದಕ್ಷಿಣದ ಅರಸನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗಿ ಹೋಗುವನು.
10 Pitit gason wa peyi Siri a pral pare pou y' al goumen. Y'ap sanble yon gwo lame ak anpil sòlda. Yonn ladan yo pral parèt tankou yon gwo larivyè k'ap desann. L'ap travèse fwontyè a, l'ap atake yon fò lènmi epi l'ap kouri tounen lakay yo.
ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.
11 Wa peyi Lejip la pral fache. Li pral leve yon gwo lame pou li al goumen ak wa peyi Siri a, l'ap fè tout sòlda lame wa peyi Siri a prizonye.
ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.
12 L'ap kraze gwo lame wa Siri a. Li pral gonfle lestonmak li, l'ap fè touye anpil sòlda. Men, apre sa, l'ap pèdi fòs li.
ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.
13 Wa peyi Siri a ap tounen ankò, l'ap sanble yon lame pi gwo pase sa l' te gen anvan an. Apre kèk lanne, l'ap parèt ak yon gwo lame ak anpil zam.
ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು.
14 Lè sa a, anpil pèp pral leve kont wa peyi Lejip la. Danyèl, jan ou te wè l' nan vizyon an, kèk lwijanboje nan moun peyi ou la pral leve kont wa a tou, men y'ap kraze yo.
ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು. ನಿನ್ನ ಜನರಲ್ಲಿ ಹಿಂಸಾಕಾರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಿರುಗಿ ಬೀಳುವರು. ಆದರೆ ಸೋತುಹೋಗುವರು.
15 Se konsa, wa peyi Siri a pral sènen yon lavil ki gen gwo ranpa. L'ap pran l'. Sòlda lame peyi Lejip yo p'ap ka kenbe tèt avè l'. Menm pi bon nan sòlda yo p'ap gen fòs ankò pou kenbe.
ಆಗ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ, ದಿಬ್ಬವನ್ನು ಕೆಡವಿ, ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವನು. ದಕ್ಷಿಣದ ಭುಜಬಲವಾದರೂ ಅವನು ಆಯ್ದುಕೊಂಡ ಜನರಾದರೂ ಎದುರಿಸಿ ನಿಲ್ಲುವುದಕ್ಕೆ ಅಶಕ್ತರಾಗುವರು.
16 Lame peyi Siri a pral fè sa li vle ak peyi Lejip. Pesonn p'ap ka kenbe tèt avè l'. L'ap rete kèk tan nan pi bèl peyi ki sou latè a. L'ap detwi tou sa ki tonbe anba men l'.
ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.
17 Wa Siri a ap mete nan tèt li pou l' pran tout peyi lòt wa a pou li. L'ap siyen yon kontra avè l'. Pou l' ka pran l' pi byen, l'ap ba li pitit fi li a pou madanm. Men, plan an p'ap pran, sa p'ap mache.
ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.
18 Lèfini, l'ap pase nan lanmè, l'ap atake lòt nasyon sou zile yo. L'ap pran anpil ladan yo. Men, yonn nan chèf lòt nasyon yo pral rete l' sou kous li. L'ap fè l' sispann fè awogan. L'ap fè awogans wa a tounen sou tèt wa a ankò.
ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು.
19 Wa a ap tounen nan fò ki nan peyi pa l' yo. Men, wè pa wè, y'ap kraze l', y'ap fini nèt avè l', l'ap disparèt.
ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.
20 Apre li, ap gen yon lòt wa k'ap voye yon chèf pou peze pèp la. L'ap egzije pèp la peye taks pou yo plen kès wa a. Anvan lontan y'ap touye wa a, men se p'ap bagay k'ap rive ni an piblik ni nan lagè.
ಅವನ ಉತ್ತರಾಧಿಕಾರಿಯು ಅರಸೊತ್ತಿಗೆಯ ಸೊಗಸನ್ನು ಕಾದುಕೊಳ್ಳುವುದಕ್ಕಾಗಿ ಸುಂಕ ವಸೂಲಿ ಮಾಡುವವನನ್ನು ಕಳುಹಿಸುವನು. ಆದರೂ ಕೆಲವೇ ವರ್ಷಗಳಲ್ಲಿ ಅವನು ನಾಶ ಹೊಂದುವನು. ಇದು ಕೋಪದಿಂದಾಗಲಿ ಇಲ್ಲವೆ ಯುದ್ಧದಿಂದಾಗಲಿ ಆಗುವುದಿಲ್ಲ.
21 Zanj lan t'ap pale toujou. Li di: -Wa k'ap parèt apre sa a pral yon vòryen ki pa t' gen dwa pou l' te nan plas la. Men, l'ap vini tou dousman, l'ap fè mannigèt, l'ap pran pouvwa a.
ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.
22 Tout moun ki konprann pou yo kenbe tèt ak li, l'ap kraze yo, l'ap disparèt yo. L'ap disparèt ata chèf kontra a.
ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.
23 L'ap siyen kontra ak lòt nasyon yo, men se pou l' ka twonpe yo pi byen. Atout peyi l' la tou piti, chak jou l'ap vin pi fò.
ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು.
24 San bay ankenn avètisman, l'ap anvayi yon pwovens ki rich anpil, l'ap fè bagay ni papa l', ni pesonn nan zansèt li yo pa t' janm fè. Lèfini, l'ap pran tout byen, tout richès li te piye lakay moun yo, l'ap separe yo bay moun pa l' yo. L'ap fè plan pou l' atake gwo fò yo, men li p'ap gen tan fè sa.
ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.
25 L'ap leve, l'ap pare yon gwo lame pou l' atake peyi Lejip. Wa Lejip la menm ap pare yon gwo lame tou ak anpil zam pou koresponn ak li. Men, l'ap pèdi batay la paske y'ap fè move konplo sou do l'.
ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
26 Zanmi ki t'ap manje sou menm tab avè l' yo ap fè yo fini avè l'. Anpil nan sòlda li yo pral mouri. Y'ap kraze lame li a.
ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು.
27 Apre sa, de wa yo pral chita manje ansanm sou menm tab, men tou de pral gen move lide dèyè tèt yo, yonn ap bay lòt manti. Yo yonn yo p'ap jwenn sa yo bezwen an, paske lè a p'ap ko rive.
ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.
28 Wa peyi Siri a ap tounen nan peyi l' ak anpil richès l'ap piye nan peyi Lejip. Apre lagè a, l'ap soti pou l' kraze relijyon pèp Bondye a. L'ap fè sa li te gen lide fè a. Lèfini, l'ap tounen tounen l' nan peyi l'.
ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.
29 Kèk tan apre sa, l'ap tounen desann nan peyi Lejip ankò. Men, fwa sa a, sa p'ap pase tankou premye fwa a.
ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ.
30 Moun Kitim yo ap vin nan batiman yo, y'ap rete l' sou kous li, l'ap dekouraje. Lè l'ap tounen. l'ap fin debòde sou moun k'ap sèvi dapre kontra Bondye te siyen avèk yo a. Men, l'ap fè pa moun ki vire do bay kontra a.
ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.
31 L'ap voye sòlda nan lame li yo vin fè mete Tanp lan nan kondisyon pou moun pa ka sèvi Bondye ladan l' ankò. Y'ap aboli ofrann bèt yo te konn fè chak jou a, y'ap mete sa nou pa ta renmen wè a, bagay k'ap bay gwo lapenn lan chita byen wo nan Tanp lan.
ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.
32 Wa a ap fè moun ki te deja vire do yo bay kontra Bondye a pran pozisyon pou li, l'ap pran tèt yo ak bèl pawòl. Men, moun k'ap sèvi Bondye yo ap kanpe fèm, y'ap kenbe tèt avè l'.
ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.
33 Chèf ki gen bon konprann yo va separe konesans yo ak pèp la. Men, pandan kèk tan yo pral pèsekite yo, y'ap touye yo nan batay. Yo pral boule yo nan dife jouk yo mouri. Y'ap depòte yo, y'ap piye tout zafè yo.
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.
34 Pandan tout pèsekisyon sa a, pèp Bondye a va resevwa yon ti konkou. Men, anpil moun ap vin mete tèt ansanm ak yo pou defann pwòp enterè pa yo.
ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.
35 Nan chèf ki gen konesans yo genyen k'ap mouri. Men, avèk lafliksyon sa a, pèp la va netwaye, l'a lave, l'a blanchi. Sa pral pase konsa jouk lè a va rive pou sa fini nan dat Bondye te fikse a.
ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.
36 Wa peyi Siri a va fè sa li vle. Li pral gonfle lestonmak li, li pral mache di jan li pi gran pase tout bondye. L'ap di yon bann vye koze sou Bondye ki anwo tout bondye yo. L'ap fè sa konsa jouk lè pou Bondye pini l' lan va rive. Paske, tou sa Bondye te di ki pou fèt la gen pou fèt.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.
37 Wa a p'ap konnen bondye zansèt li yo, li p'ap konnen bondye medam yo renmen sèvi a, li p'ap konn ankenn lòt bondye. Se tèt pa l' ase l'ap konnen. Pou li, li pi gran pase yo tout.
ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
38 Nan plas yo, l'ap pito sèvi bondye ki pwoteje fò yo, yon bondye zansèt li yo pa t' janm konnen. L'ap ofri lò, ajan, bèl pyè bijou ak lòt bagay ki koute chè ba li.
ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.
39 Pou defann fò li yo, l'ap pran moun ki sèvi lòt bondye pou sèvi sòlda. Depi yon moun rekonèt li pou wa, l'ap fè bèl bagay pou li, l'ap mete l' chèf sou anpil moun, l'ap ba li tè pou rekonpans.
ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.
40 Lè tan wa Siri a pral bout, wa Lejip la pral atake l'. Wa Siri a pral vare sou li tankou yon van siklòn, li pral mache sou li ak tout cha lagè li yo, tout kavalye l' yo ak anpil batiman. L'ap anvayi anpil peyi, l'ap tankou yon gwo larivyè k'ap desann.
ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.
41 L'ap anvayi pi bèl peyi ki sou latè a, l'ap touye yon pakèt moun. Men, moun peyi Edon, moun peyi Moab ak rès moun peyi Amon yo va chape anba men l'.
ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.
42 Wi, l'ap anvayi tout peyi yo. Ata peyi Lejip p'ap chape.
ಅವನು ಇತರ ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಈಜಿಪ್ಟ್ ದೇಶವು ತಪ್ಪಿಸಿಕೊಳ್ಳದು.
43 L'ap pran tout richès peyi Lejip la pou li: lò, ajan ak tout bèl bagay ki koute chè yo. L'ap fè moun Libi yo ak moun Letiopi yo bat ba devan li.
ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ, ಈಜಿಪ್ಟಿನ ಎಲ್ಲಾ ಅಮೂಲ್ಯ ವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವುದು. ಲಿಬಿಯದವರೂ ಕೂಷ್ಯರೂ ಅವನಿಗೆ ಅಧೀನರಾಗುವರು.
44 Men, l'ap vin tande nouvèl k'ap kouri soti nan nò ak bò solèy leve. L'ap pè, l'ap kase tèt tounen. L'ap debòde, l'ap kraze brize, l'ap masakre anpil moun.
ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.
45 L'ap moute gwo tant li a ant lanmè a ak mòn kote tanp Bondye a kanpe a. Men, l'ap mouri, p'ap gen pesonn pou pote l' sekou.
ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.

< Danyèl 11 >