< 1 Istwa 3 >
1 Alò, sila yo se te fis a David ke li te fè Hébron yo. Premye ne a, Amnon, pa Achinoam ak Jizreel; dezyèm nan, Daniel ak Abigaïl, moun Carmel la;
೧ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.
2 Twazyèm nan, Absalom, fis a Maaca a, fi a Talmaï a, wa Gueschur a; katriyèm nan, Adonija, fis a Haggith la;
೨ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.
3 senkyèm nan, Schephatia, pa Abithai; sizyèm nan, Jithream pa Élga, madanm li.
೩ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.
4 Se sis ki te fèt a li Hébron. La, li te renye pandan setan si mwa e li te renye pandan trann-twazan Jérusalem.
೪ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.
5 Men sila ki te fèt a li Jérusalem yo: Schimea, Schobab, Nathan avèk Salomon, kat pa Bath-Schua, fi a Ammiel la;
೫ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.
6 avèk Jibhar, Élischama, Éliphéleth,
೬ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,
7 Noga, Népheg, Japhia, Élischama,
೭ನೋಗ, ನೆಫೆಗ್, ಯಾಫೀಯ,
8 Éliada avèk Éliphéleth, nèf.
೮ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.
9 Tout sila yo se fis a David, anplis, fis a ti mennaj li yo; epi Tamar te sè li.
೯ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.
10 Fis a Salomon an: Roboam. Abijah, fis pa li a; Asa, fis pa li a; Josaphat, fis pa li a;
೧೦ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;
11 Joram, fis pa li a; Achazia, fis pa li a; Joas, fis pa li a;
೧೧ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
12 Amatsia, fis pa li a: Azaria, fis pa li a; Jotham, fis pa li a;
೧೨ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.
13 Achaz, fis pa li a; Ézéchias, fis pa li a; Manassé, fis pa li a;
೧೩ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.
14 Amon, fis pa li a; Josias, fis pa li a.
೧೪ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.
15 Fis a Josias yo: Jochanan, premye ne a; dezyèm nan, Jojakim; twazyèm nan, Sédécias; katriyèm nan, Schallum.
೧೫ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.
16 Fis a Jojakim yo: Jéconias, fis li a, avèk Zedekiah, fis li a.
೧೬ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.
17 Fis a Jéconias yo, prizonye a: Schealthiel, fis li a,
೧೭ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,
18 epi Malkiram, Pedaja, Schénatsar, Jekamia, Hoschama ak Nedabia.
೧೮ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.
19 Fis a Pedaja yo: Zorobabel avèk Schimeï. Fis a Zorobabel yo: Meschullam avèk Hanania; epi Schelomith, sè pa yo;
೧೯ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.
20 avèk Haschuba, Ohel, Bérékia, Hasadia, Juschab-Hésed, senk.
೨೦ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.
21 Fis a Hanaja yo: Pelathia avèk Ésaïe; fis a Rephaja yo, fis a Arnan yo, fis a Abdias yo, fis a Schecania yo.
೨೧ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.
22 Desandan a Schecania yo se te Schemaeja ak fis a Schemaeja yo, Hattusch, Jigueal, Bariach, Nearia ak Schaphath, sis.
೨೨ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
23 Fis a Nearia yo: Eljoénaï, Ézéchias ak Azrikam, twa.
೨೩ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
24 Fis a Eljoénaï yo: Hodavia, Éliaschib, Pelaja, Akkub, Jochanan, Delaja ak Anani, sèt.
೨೪ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.