< 1 Istwa 9 >
1 Konsa, tout Israël te anrejistre pa zansèt yo; epi men vwala, yo ekri nan Liv Wa A Israël yo. Epi Juda te pote ale an egzil Babylone, akoz enfidelite li yo.
೧ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.
2 Premye moun ki te vin abite ankò nan teritwa sila yo, nan vil pa yo, se te Israël, prèt Levit yo ak sèvitè tanp yo.
೨ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.
3 Kèk nan fis Juda yo, nan fis Benjamin yo ak nan fis a Éphraïm yo avèk Manasée te rete Jérusalem:
೩ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.
4 Uthaï, fis a Ammihud la, fis a Omri a, fis a Imri a, fis a Bani a, soti nan fis Pérets yo, fis a Juda a,
೪ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
5 Soti nan Shilonit yo: Asaja, premye ne a avèk fis li yo.
೫ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು.
6 Soti nan fis Zérach yo: Jeuel, avèk moun fanmi li yo, sis-san-katre-ven-dis nan yo.
೬ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು.
7 Soti nan fis Benjamin yo: Sallu, fis a Meschullam nan, fis a Hodavia a, fis a Assenua a;
೭ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.
8 epi Jibneja, fis a Jerocham nan; Éla, fis a Uzzi a, fis a Micri a; epi Meschullam, fis a Schephathia a, fis a Reuel la, fis a Jibnija a;
೮ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,
9 avèk fanmi pa yo selon zansèt pa yo, nèf-san-senkant-sis. Tout sila yo se te chèf lakay zansèt pa yo selon lakay papa yo.
೯ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.
10 Soti nan prèt yo te: Jedaeja, Jehorjarib, Jakin;
೧೦ಯಾಜಕರಲ್ಲಿ ಯೆದಾಯ, ಯೆಹೋಯಾರೀಬ್, ಯಾಕೀನ್;
11 Azaria, fis a Hilkija a, fis a Meschullam nan, fis a Tsadok la, fis a Merajoth la, fis a Achithub la, chèf lakay Bondye a;
೧೧ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.
12 Addaja, fis a Jerocham nan, fis a Paschur a, fis a Malkija a; Maesaï, fis a Adiel la, fis a Jachzéra a, fis a Meschullam nan, fis a Meschillémith la, fis a Immer a;
೧೨ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.
13 epi fanmi pa yo, chèf lakay zansèt pa yo, mil-sèt-san-swasant, mesye ak gwo kapasite pou lèv lakay Bondye a.
೧೩ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.
14 Nan Levit yo: Schemaeja, fis a Haschub la, fis a Azrikam nan, fis a Haschabia a, fis a Merari yo;
೧೪ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ
15 Bakbakkar, Héresch, Galal, Matthania, fis a Michée a, fis a Zicri a, fis a Asaph la;
೧೫ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.
16 Abdias, fis a Schemaeja a, fis a Galal la, fis a Jeduthun nan ak Bérékia, fis a Asa a, fis a Elkana a, ki te rete nan vil Netofatyen yo.
೧೬ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.
17 Alò, gadyen pòtay yo te Schallum, Akkub, Thalmon, Achiman avèk fanmi pa yo (Schallum, ki te chèf la,
೧೭ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.
18 estasyone jis koulye a nan pòtay wa a nan kote lès la). Sila yo te gadyen pòtay pou kan a fis a Lévi yo.
೧೮ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.
19 Schallum, fis a Koré a, fis a Ébiasaph la, fis a Koré a, avèk fanmi lakay papa li, Koatit yo: responsab pou travay sèvis la, gadyen nan pòtay nan tant yo; epi papa yo te konn sou kan SENYÈ a; li te gadyen a antre a.
೧೯ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.
20 Phinées, fis a Éléazar a, oparavan te konn chèf sou yo; epi SENYÈ a te avèk li.
೨೦ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.
21 Zacharie, fis a Meschélémia a, te gadyen pòtay a antre tant asanble a.
೨೧ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು.
22 Total nan sila ki te chwazi kon gadyen pòtay nan pòt yo te de-san-douz. Sila yo te anrejistre pa zansèt pa yo nan vil pa yo, ki te chwazi pa David avèk Samuel, konseye a, nan pozisyon konfyans sila a.
೨೨ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.
23 Konsa, yo menm avèk fis pa yo te responsab pòtay lakay SENYÈ a, lakay tant lan, kon gadyen.
೨೩ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.
24 Gadyen pòtay yo te sou toule kat kote yo, nan lès, lwès, nan nò ak nan sid.
೨೪ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.
25 Manm fanmi pa yo nan lavil pa yo te dwe antre chak sèt jou soti de tanzantan pou yo ta kapab avèk yo;
೨೫ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.
26 paske kat chèf gadyen pòtay ki te Levit yo, te nan yon pozisyon konfyans lan e te sou chanm yo ak sou trezò lakay Bondye a.
೨೬ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.
27 Yo te pase nwit lan nan landwa lakay Bondye a, akoz yo te responsab veye nwit lan; epi yo te responsab ouvri li maten pa maten.
೨೭ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.
28 Alò, kèk nan yo te an chaj zouti sèvis yo; paske yo te kontwole yo lè yo te mennen yo antre ak lè yo te sòti.
೨೮ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.
29 Anplis, kèk nan yo te chwazi mèb ak tout zouti sanktiyè a, sou farin fen an, diven an, lwil la ak lansan an avèk epis yo.
೨೯ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
30 Kèk nan fis a prèt yo te prepare melanj epis yo.
೩೦ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.
31 Matthithia, youn nan Levit yo, premye ne a Schallum nan, Koatit la, te responsab bay yo sa ki te kwit nan kivèt yo.
೩೧ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.
32 Epi kèk nan fanmi a fis Koatit yo te sou pen konsakre a pou prepare li pou chak Saba.
೩೨ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.
33 Alò, sila yo se te chantè yo a Levit yo, ki te rete nan chanm tanp yo, pwiske yo te angaje nan travay pa yo lajounen kon lannwit.
೩೩ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
34 Sila yo te chèf a lakay zansèt yo pami Levit yo selon jenerasyon pa yo, mesye dirijan ki te rete Jérusalem yo.
೩೪ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
35 Jeïel, papa a Gabaon an te rete Gabaon e madanm li te rele Maacah,
೩೫ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
36 epi premye ne li a te Abdon ak Tsur, Kis, Baal, Ner, Nadab,
೩೬ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,
37 Guedor, Achjo, Zacharie ak Mikoth.
೩೭ಗೆದೋರ್, ಅಹ್ಯೋ, ಜೆಕರ್ಯ ಮತ್ತು ಮಿಕ್ಲೋತ್.
38 Mikloth te fè Schimeam. Epi yo menm tou te rete avèk fanmi pa yo Jérusalem anfas fanmi pa yo.
೩೮ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.
39 Ner te vin papa a Kish, Kish te vin papa a Saül. Saül te vin papa a Jonathan, Malki-Schua, Abinadab ak Eschbaal.
೩೯ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.
40 Fis a Jonathan an: Merib-Baal. Merib-Baal te vin papa a Michée.
೪೦ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.
41 Fis a Michée yo: Pithon, Mélec ak Thachréa.
೪೧ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ.
42 Achaz te fè Jaera; Jaera te fè Alémeth, Azmaveth ak Zimri; Zimri te fè Motsa; Motsa te fè Binea.
೪೨ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
43 Motsa te vin papa a Rephaja; Éleasa, fis li a; Arsel, fis li a.
೪೩ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.
44 Atsel te fè sis fis; men non yo: Azrikam, Bocru, Ismaël, Schearia, Abidias avèk Hanan. Sila yo se te fis a Atsel yo.
೪೪ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.