< 2 Istwa 23 >
1 Alò, nan setyèm ane, Jehojada te ranfòse tèt li, e te pran chèf a dè santèn yo: Azaria, fis a Obed la, Maaséja, fis a Adaja a ak Élischaphath, fis a Zicri a. Yo te antre nan yon akò avèk li.
೧ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.
2 Yo te ale toupatou nan Juda pou te rasanble Levit soti nan tout vil Juda yo ak chèf lakay zansèt Israël yo, e yo te vini Jérusalem.
೨ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.
3 Konsa, tout asanble a te fè yon akò avèk wa a nan kay Bondye a. Epi Jehojada te di yo: “Gade byen, fis a wa a oblije renye, jan SENYÈ a te pale pa fis a David yo.
೩ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.
4 Sa se bagay ke nou oblije fè: yon tyè nan nou, nan prèt avèk Levit ki antre nan Saba yo, va sèvi kòm gadyen pòtay;
೪ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
5 yon tyè va kote lakay wa a, e yon tyè kote Pòtay Fondasyon an. Tout pèp la va nan lakou lakay SENYÈ a.
೫ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.
6 Men pa kite pèsòn antre lakay SENYÈ a, sof ke prèt avèk Levit k ap fè sèvis yo. Yo kab antre, paske yo sen, men tout pèp la va kenbe règleman a SENYÈ a.
೬ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.
7 Levit yo va antoure wa a, chak mesye avèk zam yo nan men yo. Nenpòt moun ki antre nan kay la, fòk li mouri. Rete avèk wa a lè l antre ak lè l sòti.”
೭ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು.
8 Konsa, Levit yo avèk tout Juda te fè selon tout sa ke Jehojada, prèt la, te kòmande yo a. Yo chak te pran mesye pa yo ki te gen pou antre anndan nan Saba a, avèk sila ki t ap sòti nan Saba yo, paske Jehojada, prèt la, pa t lage okenn nan divizyon sòlda yo.
೮ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.
9 Jehojada, prèt la, te bay a chèf dè santèn yo lans avèk gwo boukliye defans, ki te konn pou Wa David, ki te lakay Bondye a.
೯ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
10 Li te estasyone tout pèp la, chak mesye yo avèk zam yo nan men yo, sòti nan kote dwat kay la jis rive nan kote goch kay la, toupre lotèl la, toupre kay la, antoure wa a nèt.
೧೦ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.
11 Epi yo te mennen fè parèt fis a wa a, yo te mete kouwòn nan sou li. Konsa, yo te ba li temwayaj pou te fè l wa. Jehojada avèk fis li yo te onksyone li, e yo te di ansanm: “Viv wa a!”
೧೧ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.
12 Lè Athalie te tande bwi a pèp la ki t ap kouri ak bay lwanj a wa a, li te antre lakay SENYÈ a kote pèp la.
೧೨ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.
13 Li te gade e vwala, wa a te kanpe akote pilye li nan antre a, e chèf yo avèk mesye twonpèt yo te akote wa a. Epi tout pèp peyi a te rejwi. Yo te soufle twonpèt yo e chantè avèk enstriman yo pou dirije lwanj lan. Athalie te chire rad li, e te di: “Trayizon! Trayizon!”
೧೩ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.
14 Jehojada, prèt la te mennen fè sòti chèf a dè santèn ki te chwazi sou lame yo. Li te di yo: “Mennen li deyò antre ranje yo, epi nenpòt moun ki swiv li, mete li a lanmò avèk nepe.” Paske prèt la te di: “Pa kite li mouri lakay SENYÈ a.”
೧೪ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
15 Konsa, yo te sezi li e lè li te rive kote antre Pòtay Cheval la, lakay wa a, yo te mete li a lanmò la.
೧೫ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.
16 Epi Jehojada te fè yon akò antre li menm avèk tout pèp la, e avèk wa a, pou yo ta pèp a SENYÈ a.
೧೬ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.
17 Konsa, tout pèp la te ale kote kay Baal la. Yo te chire, kase an mòso lotèl li yo, avèk imaj li yo, e yo te touye Matthan, prèt Baal la devan lotèl yo.
೧೭ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.
18 Anplis, Jehojada te mete ofisye lakay SENYÈ yo anba otorite prèt Levit yo, ke David te apwente sou lakay SENYÈ a, pou ofri ofrann brile a SENYÈ, jan sa ekri nan lalwa Moïse la—-avèk anpil rejwisans ak chante selon lòd a David la.
೧೮ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
19 Li te estasyone gadyen pòtay yo lakay SENYÈ a, pou pèsòn pa t kab antre, si pou nenpòt rezon li pa t pwòp.
೧೯ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
20 Li te pran chèf a dè santèn yo, moun enpòtan yo, moun ki te gouvène pèp la, tout pèp peyi a, e yo te mennen wa a desann soti lakay SENYÈ a pou te antre pa wo pòtay la pou antre lakay wa a. Konsa, yo te mete wa a sou twòn wayal la.
೨೦ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
21 Tout pèp peyi a te rejwi e vil la te vin kalm. Paske yo te mete Athalie a lanmò avèk nepe.
೨೧ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.