< 2 Wa 22 >
1 Josias te gen laj uitan lè l te vin wa a e li te renye tranteyen ane Jérusalem. Non manman li te Jedida, fi Adaja a nan Botskath.
೧ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
2 Li te fè sa ki bon nan zye SENYÈ a e li te mache nan tout chemen a zansèt papa li a, David, ni li pa t vire akote ni adwat, ni agoch.
೨ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
3 Alò, nan di-zuityèm ane Wa Josias la, wa a te voye Schaphan, fis a Atsalia a, fis a Meschullam nan, skrib la, lakay SENYÈ a. Li te di:
೩ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,
4 “Monte kote Hilkija, wo prèt la, pou li kapab kontwole lajan ki antre lakay SENYÈ a, lajan ke gadyen pòtay yo te ranmase soti nan pèp la.
೪“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
5 Kite yo livre li nan men a ouvriye k ap dirije lakay SENYÈ a e kite yo bay li a ouvriye ki lakay SENYÈ a pou repare donmaj nan kay la;
೫ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
6 pou chapant yo, konstriktè yo avèk mason yo e pou achte gwo bwa avèk wòch taye pou fè reparasyon kay la.
೬ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,
7 Sèlman, nou p ap fè kontabilite pou lajan ki livre nan men yo, paske yo aji an bòn fwa.”
೭ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.
8 Alò, Hilkija, wo prèt la, te di a Schaphan, skrib la: “Mwen te twouve liv lalwa a lakay SENYÈ a.” Konsa, Hilkija te bay liv la a Schaphan ki te li li.
೮ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
9 Schaphan, skrib la, te rive kote wa a. Li te pote pawòl la kote wa a, e li te di: “Sèvitè ou yo te vide lajan ki te twouve nan kay la e yo te livre li nan men a ouvriye k ap dirije lakay SENYÈ a.”
೯ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
10 Anplis, Schaphan, skrib la, te pale wa a e te di: “Hilkija, prèt la, te ban mwen yon liv.” Epi Schaphan te li li nan prezans a wa a.
೧೦ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
11 Lè wa a te tande pawòl a liv lalwa a, li te chire rad li.
೧೧ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
12 Epi wa a te kòmande Hilkija, prèt la, Achikam fis a Schaphanb la, Acbor, fis a Michée a, a Schaphan, skrib la e a Asaja, sèvitè wa a:
೧೨ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
13 “Ale mande a SENYÈ a pou mwen avèk pèp la ak tout Juda selon pawòl a liv sa a ki te twouve a. Paske gran se kòlè SENYÈ a ki brile kont nou, akoz zansèt papa nou yo pa t koute pawòl a liv sa a, pou fè selon tout sa ki ekri konsènan nou.”
೧೩“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
14 Pou sa, Hilkija, prèt la, Achikam, Acbor, Schaphan e Asaja te ale kote Hulda, pwofetès la, madanm a Schallum nan, fis a Thikva a, fis a Harhas la, ki te an chaj vètman yo. (Alò, li te rete Jérusalem nan Katye Second lan). Yo te pale avèk li.
೧೪ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
15 Li te di yo: “Konsa pale SENYÈ a, Bondye Israël la: ‘Pale nonm ki te voye ou kote mwen an,
೧೫ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.
16 Konsa pale SENYÈ a: “Gade byen, Mwen va pote malè sou plas sa a ak sou sila ki rete ladann yo, menm tout pawòl a liv sa a ke wa Juda te di yo.
೧೬ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
17 Akoz yo te abandone Mwen e te brile lansan a lòt dye yo pou yo ta kab pwovoke Mwen a lakòlè avèk tout zèv men pa yo; pou sa, gran lakòlè Mwen va brile kont plas sa a, e li p ap etenn.”’
೧೭ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
18 Men pou wa Juda a, ki te voye ou pou mande a SENYÈ a, konsa ou va pale ak li: “Konsa pale SENYÈ a, Bondye Israël la, ‘selon pawòl ke ou te tande yo:
೧೮ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
19 Akoz kè ou te vin mou e ou te imilye ou devan SENYÈ a lè ou te tande sa Mwen te pale kont plas sa a ak kont sila ki rete ladann yo, pou yo ta devni yon dezolasyon ak yon malediksyon, epi akoz ou te chire rad ou e te kriye devan Mwen, anverite, Mwen te tande ou,’ deklare SENYÈ a.
೧೯‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’
20 Pou sa, byen gade, Mwen va ranmase ou a zansèt pa ou yo e ou va ranmase rive nan tonm pa ou a anpè. Zye ou p ap wè tout mal ke Mwen va mennen sou plas sa a.” Konsa, yo te mennen pote pawòl la bay wa a.
೨೦ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.