< Estè 6 >
1 Pandan nwit lan, wa a pa t kab dòmi. Pou sa, li te pase lòd pou mennen liv achiv kwonik yo pou yo te li li devan wa a.
೧ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.
2 Li te twouve ekri ladann sa ke Mardochée te rapòte konsènan Bigthan avèk Théresch la, de nan enik wa ki te gadyen pòtay yo, ki te chache pou mete men yo sou wa Assuérus la.
೨ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರೂ ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈ ಮುಖಾಂತರ ಬಯಲಿಗೆ ಬಂದ ಸಂಗತಿಯೂ ಅದರಲ್ಲಿ ಬರೆಯಲಾಗಿತ್ತು.
3 Wa a te mande: “Ki distenksyon oswa onè yo te bay a Mardochée pou sèvis sa a?” Sèvitè a wa yo te di: “Anyen pa t fèt pou li.”
೩ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.
4 Pou sa, wa a te di: “Kilès ki nan lakou a?” Alò, Haman te fenk antre nan lakou deyò a palè wa a pou l ta kab pale avèk wa a konsènan afè pann Mardochée sou etaj ki te bati pou li a.
೪ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.
5 Sèvitè a wa a te di li: “Men gade byen, Haman kanpe nan lakou a.” Epi wa a te di li: “Kite li antre.”
೫ಆಗ ರಾಜಸೇವಕರು, “ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ” ಎಂದು ಬಿನ್ನವಿಸಿದರು. ಆಗ ಅರಸನು, “ಅವನು ಒಳಗೆ ಬರಲಿ” ಅಂದನು.
6 Pou sa, Haman te antre anndan e wa a te di li: “Kisa ki ta dwe fèt pou nonm nanke wa a dezire onore a?” Epi Haman te di nan tèt li: “Se kilès wa a ta vle onore plis ke mwen menm nan?”
೬ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.
7 Epi Haman te di a wa a: “Pou nonm ke wa a vle onore a,
೭ಅದಕ್ಕೆ ಹಾಮಾನನು, “ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವುದಕ್ಕೆ ಇಷ್ಟವುಳ್ಳವನಾಗಿರುವನು” ಅಂದುಕೊಂಡನು.
8 kite yo mennen yon vètman wayal ke wa a te konn mete, avèk cheval ke wa a te konn monte e sou tèt a sila, yon kouwòn wa a te fin mete.
೮ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.
9 Epi, konsa, kite vètman avèk cheval la remèt a youn nan chèf a wa ki pi onore a e kite yo abiye moun ke wa a vle onore a, mennen li sou do cheval la toupatou nan plas lavil la e pwoklame devan li, ‘Se konsa pou l ta fèt a moun nan ke wa a vle onore a.’”
೯ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು.
10 Epi wa a te di a Haman: “Byen vit pran vètman avèk cheval la kon ou te pale a e fè sa pou Mardochée, Jwif la, ki chita nan pòtay wa a. Pa manke nan anyen a tout sa ke ou te pale yo.”
೧೦ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.
11 Konsa, Haman te pran vètman an avèk cheval la, te abiye Mardochée, te mennen li sou cheval la nan tout plas lavil la, e te fè pwoklamasyon devan l, “Se konsa li va fèt pou nonm ke wa a vle onore a.”
೧೧ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.
12 Konsa, Mardochée te retounen nan pòtay a wa a, men Haman te kouri byen vit pou rive lakay li avèk kri doulè, ak tèt li kouvri.
೧೨ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.
13 Haman te rakonte a Zéresch, madanm li avèk tout zanmi li yo tout sa ki te rive li yo. Epi mesye saj yo avèk Zéresch, madanm li an, te di li: “Si Mardochée, devan sila ou kòmanse tonbe a, sòti nan Jwif yo, anverite, ou p ap genyen sou li, men anverite, ou va tonbe devan li.”
೧೩ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.
14 Pandan yo t ap toujou pale avèk li, enik a wa yo te rive e byen prese, yo te mennen Haman nan bankè ke Esther te prepare a.
೧೪ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು.