< Ezekyèl 30 >
1 Pawòl SENYÈ a te vin kote m ankò e te di:
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
2 “Fis a lòm, pwofetize e di: ‘Konsa pale Senyè BONDYE a, “Rele ‘Anmwey! Elas pou jou a!’
“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘“ಅಯ್ಯೋ ಆ ದಿನ!” ಎಂದು, ಅಳುತ್ತಾ ಹೇಳಿರಿ.
3 Paske jou a pwòch. Menm jou SENYÈ a pwòch. Li va yon jou nwaj, yon tan fènwa pou nasyon yo.
ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.
4 Yon nepe va rive sou Égypte e gwo doulè va rive Ethiopie, lè sila yo touye yo tonbe an Égypte. Yo va retire tout richès li yo e fondasyon li yo va fin demoli nèt.
ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು.
5 “‘“Ethiopie, Puth, Lud, tout Arabie, Cub, ak tout moun peyi ki nan gwoup aliyans yo va tonbe ak yo pa nepe.”
ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.
6 “‘Konsa pale SENYÈ a: “Anverite, sila ki sipòte Égypte yo va tonbe. Ògèy a pouvwa li a va tonbe. Soti nan Migdol jis rive Syène, yo va tonbe pa nepe,” deklare Senyè BONDYE a.
“‘ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಈಜಿಪ್ಟಿನ ಸಹಾಯಕರು ಬೀಳುವರು. ಅದರ ಶಕ್ತಿಯ ಮದವು ಇಳಿದುಹೋಗುವುದು. ಅಲ್ಲಿಯ ಜನರು ಮಿಗ್ದೋಲಿನಿಂದ ಸೆವೇನೆಯ ಗೋಪುರದವರೆಗೆ ಖಡ್ಗದಿಂದ ಹತರಾಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
7 Yo va vin dezole nan mitan peyi ki dezole yo. Konsa, vil li yo va nan mitan vil k ap devaste yo.
ಆಗ ಅವರು ಹಾಳಾಗಿರುವ ದೇಶಗಳೊಳಗೆ ತಾವೂ ಹಾಳಾಗುವರು. ಹಾಳಾದ ಪಟ್ಟಣಗಳ ಮಧ್ಯದಲ್ಲಿ ಅದರ ಪಟ್ಟಣಗಳು ಹಾಳಾಗಿ ಇರುವುವು.
8 Yo va konnen ke Mwen se SENYÈ a, lè M limen dife an Égypte la, e tout sila ki te ede l yo vin kraze nèt.
ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.
9 “‘“Nan jou sa a, mesaje yo va ale soti devan Mwen sou bato pou entimide Ethiopie akoz lenpridans. Gwo doulè va vin sou yo menm jan ak jou Égypte la; paske gade byen, l ap vini!”
“‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.
10 “‘Konsa pale Senyè BONDYE a: “Anplis Mwen va fè gwo foul lame Égypte la vin sispann pa men Nebucadnetsar, wa Babylone nan.
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.
11 Li menm ak pèp li a avè l, pi mechan pami nasyon yo va antre pou detwi peyi a. Yo va rale nepe yo kont Égypte, e plen peyi a ak mò yo.
ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
12 Anplis, Mwen va seche kanal larivyè Nil yo, e vann peyi a pou antre nan men moun mechan yo. Mwen va fè peyi a vin dezole ak tout sa ki ladann pa men etranje yo. Mwen, SENYÈ a, fin pale.”
ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.
13 “‘Konsa pale Senyè Bondye a: “Anplis, Mwen va detwi zidòl yo, e fè imaj yo sispann nan Noph. P ap gen prens ankò nan peyi Égypte. Mwen va mete laperèz nan peyi Égypte.
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.
14 Mwen va fè Pathros vin dezole, mete dife nan Tsoan, e egzekite jijman sou Nò.
ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.
15 Mwen va vide chalè kòlè Mwen sou Sin, sitadèl a Égypte la. Anplis, Mwen va koupe retire nèt gwo foul Nò yo.
ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ ಪೆಲೂಸಿಯಮ್ ಪಟ್ಟಣದ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕಡಿದುಬಿಡುವೆನು.
16 Mwen va mete dife an Égypte. Sin va vin tòde ak gwo doulè. No va kraze an mòso, separe. Noph va gen brèch nèt ak gwo twoub chak jou.
ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.
17 Jenn mesye a On ak Pi Béseth yo va tonbe pa nepe. Y ap antre an kaptivite.
ಓನಿನ ಮತ್ತು ಪಿಬೇಸೆತಿನ ಯೌವನಸ್ಥರು ಖಡ್ಗದಿಂದ ಸಾಯುವರು. ಈ ಪಟ್ಟಣಗಳ ನಿವಾಸಿಗಳು ತಾವಾಗಿಯೇ ಸೆರೆಯಾಗಿ ಹೋಗುವುವು.
18 Nan Tachpanès, jounen an va vin fènwa, lè M kraze jouk an fè Égypte la. Nan lè sa a, ògèy pouvwa li va sispann nan li. Yon nwaj va kouvri li, e fi li yo va antre an kaptivite.
ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.
19 Konsa Mwen va egzekite jijman sou Égypte. Konsa, yo va konnen ke Mwen se SENYÈ a.”’”
ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”
20 Nan onzyèm ane, nan premye mwa, nan setyèm jou nan mwa a, pawòl SENYÈ a te vin kote mwen. Li te di:
ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,
21 “Fis a lòm, Mwen te kase bra Farawon an, wa Égypte la. Gade byen, li pa t velope ak pansman pou l ta geri, ni ak bandaj pou l ta ka vin gen fòs pou kenbe nepe.
“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.
22 Konsa, pale Senyè BONDYE a: ‘Gade byen, Mwen kont Farawon, wa Égypte la, e Mwen va kase bra li, ni sa ki gen fòs la ni sa ki kase deja a. Epi Mwen va fè nepe a tonbe kite men li.
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.
23 Mwen va gaye Ejipsyen yo pami nasyon yo e dispèse yo pami peyi yo.
ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
24 Paske Mwen va ranfòse men a wa Babylone nan, e mete nepe Mwen nan men l. Men Mwen va kase bra a Farawon, pou li ka vin plenyen nan gòj devan wa Babylone nan, ak plent a yon nonm ki blese jis a lamò.
ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.
25 Konsa, Mwen va ranfòse bra a wa Babylone nan, men bra a Farawon yo va tonbe. Nan lè sa a, yo va konnen ke Mwen se SENYÈ a, lè M mete nepe M nan men a wa Babylone nan, e lè li lonje li kont peyi Égypte la.
ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.
26 Lè Mwen gaye Ejipsyen yo pami nasyon yo, e dispèse yo pami peyi yo, alò, yo va konnen ke Mwen se SENYÈ a.’”
ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”