< Jenèz 12 >
1 Alò, SENYÈ a te di a Abram: “Sòti nan peyi ou ak fanmi ou yo, ak lakay papa ou, pou ale vè yon peyi ke Mwen va montre nou.
೧ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.
2 Mwen va fè ou vin yon gran nasyon. Mwen va beni ou, e fè non ou vin gran. Ou va yon benediksyon.
೨ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
3 Mwen va beni sila yo ki beni ou, e sila ki modi ou yo, Mwen va modi yo. Konsa, nan ou, tout fanmi sou latè yo va beni.”
೩ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
4 Alò, Abram te sòti jan SENYÈ a te pale l la. Lot te ale avè l. Abram te gen laj swasann-kenz ane lè li te kite Haran.
೪ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
5 Abram te pran Saraï madanm li avèk Lot, neve li, ak tout zafè yo ke yo te ranmase avèk moun ke yo te vin genyen nan Haran, e yo te pati pou peyi Canaan an. Konsa yo te rive Canaan.
೫ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.
6 Abram te pase nan peyi a jis rive Sichem, nan chenn Moré yo. Alò nan tan sa a, Kanaaneyen yo te nan peyi a.
೬ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.
7 SENYÈ a te parèt a Abram. Li te di: “A desandan ou yo, Mwen va bay peyi sila a.” Alò, li te bati yon lotèl nan plas kote SENYÈ a te parèt a li a.
೭ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
8 Alò, li te kontinye depi la nan mòn nan, nan lès Béthel. Li te monte tant li, avèk Béthel nan lwès, ak Aï nan lès. La li te bati yon lotèl a SENYÈ a, e li te rele non a SENYÈ a.
೮ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.
9 Abram te vwayaje toujou vè Negev.
೯ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.
10 Alò te gen yon gwo grangou nan peyi a, ki fè Abram desann an Égypte pou pase yon tan, akoz gwo grangou a te tèlman di nan peyi a.
೧೦ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
11 Li te rive ke lè li te rive toupre Égypte, li te di a Saraï, madanm li: “Gade, mwen konnen ke ou se yon fanm ki tèlman bèl!
೧೧ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;
12 Lè Ejipsyen yo wè ou, yo va di: ‘Sa se madanm li.’ Konsa, yo va touye mwen, men yo va kite ou viv.
೧೨ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.
13 Souple, di ke se sè mwen ou ye, pou sa ale byen pou mwen, e pou mwen kapab viv akoz ou menm.”
೧೩ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.
14 Li te vin rive ke lè Abram te antre Égypte, ke Ejipsyen yo te wè ke fanm nan te byen bèl.
೧೪ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.
15 Ofisyèl Farawon yo te wè li e te pote lwanj li bay Farawon. Konsa, yo te pran fanm nan fè l antre lakay Farawon an.
೧೫ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.
16 Pou sa li te trete Abram byen pou koz li. Li te bay li mouton avèk bèf kabwa avèk bourik, ak sèvitè, ni mal ni femèl, ak femèl bourik avèk chamo.
೧೬ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.
17 Men SENYÈ a te frape Farawon avèk gwo malè yo akoz Saraï, madanm Abram nan.
೧೭ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.
18 Epi Farawon te rele Abram. Li te di li: “Kisa ou fè m la a? Poukisa ou pa t di mwen ke li te madanm ou?
೧೮ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?
19 Poukisa ou te di: Li se sè m, pou m te pran l kòm madanm mwen? Alò, men madanm ou, pran l ale.”
೧೯ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,
20 Farawon te kòmande mesye pa l yo konsènan li, epi yo te akonpanye l ale, avèk madanm li, ak tout bagay ki te pou li yo.
೨೦ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.