< Ezayi 11 >
1 Yon boujon va vòltije soti nan chouk Jessé a e yon branch ki sòti nan rasin li, va bay anpil fwi.
೧ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
2 Lespri SENYÈ a va poze sou Li, lespri a sajès ak bon konprann, lespri a konsèy ak pwisans lan, lespri a konesans ak lakrent SENYÈ a.
೨ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
3 Li va pran plezi nan lakrent SENYÈ a. Li p ap jije selon sa ke zye l wè, ni fè yon desizyon pa sa ke zòrèy li tande;
೩ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.
4 men ak ladwati, Li va jije malere yo, e pran desizyon ak jistis pou aflije sou latè yo. Li va frape tè a ak baton bouch Li, e avèk souf lèv Li yo, Li va detwi mechan yo.
೪ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
5 Anplis, ladwati va sentiwon an ki antoure ren Li e fidelite va sentiwon ki pase nan senti Li a.
೫ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.
6 Lou a va demere ak jèn mouton an, leyopa va kouche ak jèn kabrit la, jèn bèf la ak jèn lyon an ansanm ak bèf gra a; epi yon tigason va mennen yo.
೬ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
7 Anplis, vach la ak lous la va manje zèb nan patiraj la; pitit pa yo va kouche ansanm e lyon an va manje zèb tankou bèf la.
೭ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.
8 Pitit k ap tete, va jwe bò twou koulèv anpwazone a, e pitit sevre a va mete men l sou kav vipè a.
೮ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.
9 Yo p ap donmaje ni detwi nan tout mòn sen Mwen an, paske latè va ranpli ak konesans SENYÈ a, tankou dlo kouvri lanmè a.
೯ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
10 Nan jou sa a, nasyon yo va retounen vè rasin a Jessé a, ki va kanpe tankou yon sinyal pou pèp la. Epi plas repo Li a va ranpli ak laglwa.
೧೦ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
11 Li va vin rive nan jou sa a ke SENYÈ a va ranmase yon dezyèm fwa ak men Li, retay a pèp Li a ki rete soti Assyrie Égypte, Pathros, Cush, Élam Schinear, ak Hamath ak devan lil lanmè yo.
೧೧ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
12 Li va leve yon drapo pou nasyon yo, rasanble egzile Israël yo, e Li va rasanble dispèse Juda ki soti nan kat kwen latè yo.
೧೨ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
13 Jalouzi Éphraïm nan va fini, e sila ki twouble Juda va koupe retire nèt. Éphraïm p ap jalou a Juda e Juda p ap twouble Éphraïm.
೧೩ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
14 Yo va desann sou pant Filisten yo vè lwès. Ansanm yo va piyaje fis a lès yo. Yo va posede Edom ak Moab e fis a Ammon yo va vin soumèt a yo menm.
೧೪ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
15 Konsa, SENYÈ a va detwi lang lanmè Égypte la nèt. Li va pase men L sou rivyè a ak van cho a, e Li va frape divize l an sèt flèv pou fè moun kapab travèse li pye sèk.
೧೫ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
16 Va gen yon gran chemen k ap sòti depi Assyrie pou retay a pèp Li, menm jan ki te genyen pou Israël nan jou ke yo te monte kite peyi Egypte la.
೧೬ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.