< Jeremi 44 >

1 Pawòl ki te rive kote Jérémie pou tout Jwif ki te rete nan peyi Égypte yo, sila ki te rete nan Migdol yo, Tachpanès Noph ak nan peyi a Pathros yo. Li te di:
ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
2 “Konsa pale SENYÈ dèzame yo, Bondye Israël la: ‘Nou menm, nou te wè tout malè ke M te mennen sou Jérusalem ak tout vil Juda yo. Gade byen, nan jou sa a, yo fin kraze nèt e pèsòn pa rete nan yo,
“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.
3 akoz mechanste ke yo te fè pou pwovoke M a lakòlè, akoz yo te kontinye brile sakrifis pou sèvi lòt dye ke yo pa t konnen, ni yo, ni nou menm, ni zansèt nou yo.
ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
4 Malgre sa, Mwen te voye bannou tout sèvitè mwen yo, pwofèt yo, ankò e ankò e Mwen te di: “Ah, pa fè bagay abominab sila ke m menm rayi a.”
ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
5 Men yo pa t koute, ni panche zòrèy yo pou kite mechanste yo, pou yo pa brile sakrifis a lòt dye yo.
ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.
6 Akoz sa, kòlè Mwen ak mekontantman Mwen te vide e te brile nan vil Juda yo ak nan ri a Jérusalem yo, jiskaske yo vin detwi nèt e vin yon dezolasyon jis rive jodi a.’
ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.
7 “Alò, konsa pale SENYÈ a, Bondye Israël la: ‘Poukisa n ap fè gwo mal sa a nou menm, pou nou ta koupe retire nèt de nou menm, gason, fanm, pitit, ak tibebe, pou kite tèt nou san retay.
ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.
8 Epi pwovoke M a lakòlè avèk zèv men nou, brile sakrifis a lòt dye nan peyi Égypte yo, kote nou ap antre pou rezide, pou nou kab vin koupe retire nèt e devni yon madichon ak yon repwòch pami tout nasyon sou latè yo?
ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.
9 Èske nou fin bliye mechanste a papa zansèt nou yo, mechanste a wa a Juda yo, mechanste a madanm yo, pwòp mechanste pa nou, mechanste a madanm pa nou yo, ke yo te komèt nan peyi Juda a ak nan ri Jérusalem yo.
ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?
10 Men yo pa t repanti, menm jis rive jodi a, ni yo pa t gen lakrent, ni mache nan lalwa Mwen, ni règleman ke M te mete devan nou yo ak devan papa zansèt nou yo.’
೧೦ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
11 “Pou sa, konsa pale SENYÈ dèzame yo, Bondye Israël la: ‘Gade byen, Mwen ap fikse fas Mwen kont nou pou malè, menm pou koupe retire tout Juda.
೧೧“ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
12 Epi Mwen va retire retay Juda ki te fikse panse yo sou antre nan peyi Égypte pou abite la, e yo va tout twouve move desten pa yo. La, nan peyi Égypte, yo va tonbe pa nepe e rankontre desten yo nan gwo grangou. Yo va devni yon madichon, yon objè degoutan, yon anatèm ak yon repwòch.
೧೨ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.
13 Epi Mwen va pini sila ki rete an peyi Égypte, kon mwen te pini Jérusalem, ak nepe a, ak grangou, ak bèt ki ravaje chan e ak epidemi.
೧೩ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.
14 Konsa, p ap gen moun ki chape, ni ki retounen nan retay Juda ki te antre nan peyi Égypte pou rezide la ak entansyon pou retounen nan peyi Juda, kote yo gen anvi retounen viv la. Paske okenn moun p ap retounen sof ke kèk grenn ki chape.’”
೧೪ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.
15 Epi tout sila ki te konnen ke madanm yo t ap brile sakrifis a lòt dye yo, ansanm ak tout fanm ki te kanpe la yo, yon gwo asanble, menm ak tout moun ki te rete Pathros nan peyi Égypte la, te reponn a Jérémie. Yo te di:
೧೫“ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,
16 “Pou mesaj ke ou te pale nou nan non SENYÈ a, nou p ap koute ou!
೧೬“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.
17 Men pito, nou va akonpli tout pawòl ki te sòti nan bouch pa nou, lè n ap brile sakrifis a rèn syèl la, e vide bwason devan l, menm jan ke nou menm, ak papa zansèt nou yo, wa nou yo, ak prèt nou yo te konn fè nan vil Juda yo ak nan ri a Jérusalem yo. Paske nan lè sa a, nou te gen kont manje, nou te byen alèz e nou pa t konn soufri malè.
೧೭ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
18 Men depi lè nou te sispann brile sakrifis a rèn syèl la ak vide bwason devan l, nou te vin manke tout bagay, e nou te vin anile pa nepe ak gwo grangou.”
೧೮ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.
19 Fanm yo te pale: “Lè nou t ap brile sakrifis a rèn syèl la, e nou t ap vide ofrann bwason a li menm, èske se te san mari nou ke nou te fè pou li gato sakrifis nan imaj li e te vide ofrann bwason a li menm?”
೧೯ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.
20 Epi Jérémie te di a tout pèp la, a mesye yo ak fanm yo—menm a tout pèp ki t ap reponn li konsa yo—e li te di:
೨೦ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ,
21 Pou sakrifis lafimen ke nou te brile nan vil a Juda yo ak ri a Jérusalem yo, nou menm ak papa zansèt nou yo, wa nou yo, ak prens nou yo e pèp peyi a, èske SENYÈ a pa t sonje yo, e èske tout sa pa t antre nan panse Li?
೨೧“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
22 Konsa, SENYÈ a pa t ka sipòte sa akoz mechanste a zak nou yo, akoz zak abominab ke nou te komèt yo. Se pou sa, peyi nou an fin detwi nèt, yon objè degoutan ak yon madichon, san pèsòn pou rete ladann, jan li ye jodi a.
೨೨ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
23 Akoz nou te brile sakrifis yo, nou te peche kont SENYÈ a e pa t obeyi vwa SENYÈ a, ni mache nan lalwa Li, règleman Li yo, ak temwayaj Li yo; akoz sa, gran malè sa a vin tonbe sou nou, jan li ye jodi a.
೨೩ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.
24 Konsa, Jérémie te di a tout pèp la, ansanm ak tout fanm yo: “Tande pawòl SENYÈ a, tout Juda ki rete nan peyi Égypte la,
೨೪ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.
25 Konsa pale SENYÈ dèzame yo, Bondye Israël la, konsa: ‘Pou nou menm ak madanm nou, nou te pale ak bouch nou, nou te akonpli sa ak men nou, e nou te di: “Anverite, nou va akonpli ve ke nou te fè yo, pou nou brile sakrifis a rèn syèl la, e vide bwason nou yo a li menm.” “‘Ale fè l, pou akonpli ve nou yo; e byen si, akonpli ve nou yo!’
೨೫ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
26 “Sepandan, tande pawòl SENYÈ a, tout moun Juda ki rete nan peyi Égypte la: ‘Gade byen, Mwen te sèmante pa gran non Mwen,’ SENYÈ a di: ‘Pinga non Mwen janm nome ankò nan bouch a okenn moun Juda nan tout peyi Égypte la, pou ta di: “Jan Senyè BONDYE a viv la.”
೨೬ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
27 Gade byen, M ap veye sou yo pou malè yo, e pa pou byen yo. Tout mesye Juda ki nan peyi Égypte yo, va rankontre lafen pa yo ak nepe e ak gwo grangou jiskaske yo fin disparèt nèt.
೨೭ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.
28 Sila ki chape anba nepe yo va retounen sòti nan peyi Égypte pou rive Juda p ap gen anpil menm. Nan lè sa a, retay Juda ki te ale nan peyi Égypte pou rezide yo, va konnen pawòl a kilès k ap kanpe, si se pa M nan, oswa pa yo a’.
೨೮ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.
29 “‘Sa va sèvi kon sign pou nou’, SENYÈ a di: ‘ke Mwen va pini nou nan plas sa a, pou nou ka konnen ke pawòl Mwen va, anverite, kanpe kont nou pou malè nou.’
೨೯ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
30 Konsa pale SENYÈ a: ‘Gade byen, Mwen va livre Farawon Hophra, wa Égypte la, nan men lènmi li yo; nan men a sila k ap chache lavi li, menm jan ke m te livre Sédécias, wa Juda a, nan men Nebucadnetsar, wa Babylone nan, ki te ènmi li e ki t ap chache lavi li.’”
೩೦ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.

< Jeremi 44 >