< Jij 2 >

1 Alò, zanj SENYÈ a te monte soti Guilgal a Bokim. Li te di: “Mwen te mennen nou sòti an Égypte, e Mwen te mennen nou antre nan peyi ke M te sèmante a zansèt nou yo. Epi Mwen te di: ‘Mwen p ap janm kraze akò Mwen avèk nou.
ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,
2 Konsa, pou nou menm, nou p ap fè okenn akò avèk pèp peyi sila yo. Nou va chire lotèl pa yo.’ Men nou pa t obeyi Mwen. Kisa sa ye ke nou fè la a?
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
3 Pou sa, Mwen te di anplis, ‘Mwen p ap pouse yo sòti devan nou, men yo va devni tankou zepin akote nou e dye pa yo va vin yon pèlen pou nou.’”
‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
4 Lè zanj SENYÈ a te pale pawòl sa yo a tout fis Israël yo, pèp la te leve vwa pa yo pou te kriye.
ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.
5 Pou sa, yo te bay plas sa non Bokim, epi la, yo te fè sakrifis bay SENYÈ a.
ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.
6 Lè Josué te fin fè pèp la ale, fis Israël yo te ale yo chak nan pwòp eritaj pa yo pou posede teren an.
ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.
7 Pèp la te sèvi Josué pandan tout jou a Josué yo e tout jou a ansyen ki te sèvi Josué yo, ki te wè tout gran zèv SENYÈ a te fè pou Israël yo.
ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.
8 Epi Josué, fis a Nun nan, Sèvitè SENYÈ a, te mouri nan laj san-dis ane.
ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು.
9 Yo te antere li nan teritwa eritaj pa li, nan Thimnath-Hérès nan peyi ti kolin Éphraïm yo, vè nò a Mòn Gaasch.
ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.
10 Tout jenerasyon sila a, osi, te vin ranmase vè zansèt pa yo. Konsa, te vin leve yon lòt jenerasyon apre yo ki pa t rekonèt SENYÈ a, ni nonplis zèv ke Li te fè pou Israël yo.
೧೦ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
11 Alò, fis Israël yo te fè mal nan zye SENYÈ a, e yo te sèvi Baal yo.
೧೧ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
12 Yo te abandone SENYÈ a, Bondye a zansèt pa yo a, ki te mennen yo sòti nan peyi Égypte la pou te swiv lòt dye yo, soti nan dye a pèp ki te antoure yo. Yo te bese yo ba devan yo. Konsa, yo te pwovoke SENYÈ a a lakòlè.
೧೨ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
13 Yo te abandone SENYÈ a pou te sèvi Baal avèk Astarté yo.
೧೩ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.
14 Lakòlè SENYÈ a te brile kont Israël. Li te livre yo nan men a piyajè ki te piyaje yo. Li te vann yo antre nan men a lènmi ki te antoure yo pou yo pa t kab kanpe ankò devan lènmi yo.
೧೪ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
15 Nenpòt kote ke yo te ale, men SENYÈ a te kont yo pou mal, jan SENYÈ a te pale yo a, jan Li te sèmante a yo a. Konsa, vrèman yo te vin gen gwo pwoblem.
೧೫ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.
16 Alò, SENYÈ a te fè leve jij ki te livre yo soti nan men a sila ki t ap piyaje yo.
೧೬ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.
17 Malgre sa, yo pa t koute jij yo, paske yo te fè pwostitiye dèyè lòt dye yo, e te bese yo ba anvè yo. Yo te vire akote byen vit soti nan chemen an nan sila zansèt yo te mache ak obeyisans lòd a SENYÈ yo. Yo pa t fè tankou yo.
೧೭ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.
18 Lè SENYÈ a te kon fè leve yon jij pou yo, SENYÈ a te avèk jij la, e te delivre pèp la nan men lènmi yo pandan tout jou yo a jij la. Konsa, SENYÈ a te vin gen pitye pou yo akoz sila ki te oprime ak aflije yo.
೧೮ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
19 Men li te kòn rive ke nan lè jij la vin mouri, yo ta vire tounen pou aji pi konwonpi pase zansèt yo. Yo te swiv lòt dye yo pou sèvi yo, e bese ba devan yo. Yo pa t janm abandone zèv sila yo, ni chemen tèt mato yo.
೧೯ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.
20 Konsa, lakòlè SENYÈ a te brile kont Israël. Li te di: “Akoz nasyon sa a te transgrese akò ke Mwen te kòmande zansèt yo, e pa t koute vwa M,
೨೦ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
21 Mwen menm tou, Mwen va sispann chase devan yo, okenn nan nasyon ke Josué te kite la lè l te mouri yo,
೨೧ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.
22 pou pase Israël a leprèv pa yo menm, pou wè si yo va kenbe chemen a SENYÈ a pou mache ladann jan zansèt pa yo te fè a oswa non.”
೨೨ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.
23 Konsa SENYÈ a te pèmèt ke nasyon sa yo rete pami yo, e pa t pouse yo sòti vit. Li pa t livre yo nan men Josué.
೨೩ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.

< Jij 2 >