< Resansman 16 >
1 Alò, Koré, fis a Jitsehar, ansanm avèk Dathan ak Abiram, fis a Éliab avèk On, fis a Péleth, fis a Ruben yo, te pran desizyon. Yo te pran moun avèk yo,
ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು
2 epi yo te vin souleve devan Moïse. Ansanm avèk kèk nan fis Israël yo, de-san-senkant nan chèf kongregasyon an, mesye ki te byen rekonèt, ki te chwazi pa asanble a,
ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು.
3 yo te reyini ansanm kont Moïse avèk Aaron. Yo te di yo: “Nou te ale ase lwen, paske tout kongregasyon an sen, yo tout, e SENYÈ a nan mitan yo! Konsa, poukisa nou egzalte tèt nou pi wo pase asanble SENYÈ a?”
ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.
4 Lè Moïse te tande sa, li te tonbe sou figi li.
ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು,
5 Li te pale avèk Koré ak tout konpanyen li yo. Li te di: “Demen maten, SENYÈ a va montre kilès ki apatyen ak Li e kilès ki sen, epi Li va fè moun sa a vin touprè Li. Menm sila ke Li chwazi a, Li va mennen li toupre Li menm.
ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:
6 Fè sa: Fè Koré ak tout konpanyen li pran asanswa a pou kont nou.
ಕೋರಹನೂ, ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು,
7 Konsa, mete dife ladann, e poze lansan sou yo nan prezans a SENYÈ a, demen. Moun nan ke SENYÈ a chwazi a, va sila ki sen an. Nou gen tan ale ase lwen, fis a Levi yo!”
ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು.
8 Moïse te di a Koré: “Tande koulye a fis a Levi yo!
ಮೋಶೆಯು ಕೋರಹನಿಗೆ, “ಲೇವಿಯ ಪುತ್ರರೇ, ಈಗ ಕೇಳಿರಿ.
9 Èske li pa sifi pou nou ke Bondye Israël la te separe nou soti nan tout rès kongregasyon Israël la, pou mennen nou touprè a Li menm? Pou fè sèvis tabènak SENYÈ a, e pou vin kanpe devan kongregasyon an pou sèvi yo?
ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?
10 E ke li te mennen nou touprè, tout frè ou yo Koré, fis a Levi yo avèk ou? Epi èske w ap chache pozisyon prèt la tou?
ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
11 Pou sa, ou menm avèk tout konpanyen ou yo vin rasanble ansanm kont SENYÈ a! Men pou Aaron, kilès li ye pou nou vin plenyen kont li?”
ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.
12 Konsa, Moïse te voye yon lòd bay Dathan avèk Abiram, fis a Éliab yo, men yo te di: “Nou p ap monte.”
ಆಗ ಮೋಶೆ ಎಲೀಯಾಬನ ಪುತ್ರರಾದ ದಾತಾನನನ್ನೂ, ಅಬೀರಾಮನನ್ನೂ ಕರೆಯಕಳುಹಿಸಿದನು. ಆದರೆ ಅವರು, “ನಾವು ಬರುವುದಿಲ್ಲ.
13 Èske sa pa ase ke ou te mennen nou sòti nan yon peyi ki koule avèk lèt ak siwo myèl pou fè nou vin mouri nan dezè a, men ou ta, osi, vin chèf sou nou?
ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?
14 Vrèman, ou pa t mennen nou nan yon peyi ki koule avèk lèt ak siwo myèl, ni ou pa t bannou yon eritaj tèren, avèk chan rezen. Èske ou ta pete zye a mesye sa yo? Nou p ap monte?
ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.
15 Alò Moïse te vin byen fache. Li te di a SENYÈ a: “Pa aksepte ofrann pa yo! Mwen pa t pran menm yon bourik nan men yo, ni mwen pa t fè mal a okenn nan yo.”
ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.
16 Moïse te di a Koré: “Ou menm avèk tout konpanyen ou yo, parèt devan SENYÈ a demen; ni ou menm, yo menm ansanm avèk Aaron.
ಮೋಶೆಯು ಕೋರಹನಿಗೆ, “ನೀನೂ, ನಿನ್ನ ಸಮೂಹವೆಲ್ಲವೂ ಯೆಹೋವ ದೇವರ ಎದುರಿನಲ್ಲಿ ಇರಬೇಕು. ನೀನೂ, ಅವರೂ, ಆರೋನನೂ ನಾಳೆ ಬಂದು,
17 Chak nan nou pran veso dife li, mete lansan sou li, e chak nan nou pote veso lansan an devan SENYÈ a, de-san-senkant veso dife; osi ou menm avèk Aaron va chak pote veso dife pa li a.”
ಒಬ್ಬೊಬ್ಬನು ತನ್ನ ತನ್ನ ಧೂಪ ಪಾತ್ರೆಯನ್ನು ತೆಗೆದುಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ, ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ಧೂಪ ಪಾತ್ರೆಗಳಾದ ನಿಮ್ಮ ಧೂಪ ಪಾತ್ರೆಗಳನ್ನು ಯೆಹೋವ ದೇವರ ಎದುರಿಗೆ ತನ್ನಿರಿ. ನೀನೂ, ಆರೋನನೂ, ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತೆಗೆದುಕೊಂಡು ಬನ್ನಿರಿ,” ಎಂದನು.
18 Konsa, yo chak te pran pwòp veso dife a e te mete dife ladann. Yo te mete lansan sou li, epi yo te kanpe nan pòtay tant asanble a, avèk Moïse ak Aaron.
ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
19 Konsa, Koré te rasanble tout kongregasyon anfas yo a nan pòtay a tant asanble a. Epi glwa a SENYÈ a te vin parèt a tout kongregasyon an.
ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.
20 SENYÈ a te pale avèk Moïse ak Aaron, e te di:
ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,
21 “Separe nou nan mitan kongregasyon sila a, pou Mwen kapab manje yo koulye a.”
“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.
22 Men yo te tonbe sou figi yo e te di: “O Bondye, Bondye a lespri de tout chè a, èske Ou va an kòlè avèk tout kongregasyon an lè yon sèl moun fè peche?”
ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.
23 SENYÈ a te pale avèk Moïse e te di:
ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
24 “Pale avèk kongregasyon an e di: ‘Sòti nan andwa tant Koré yo, Dathan avèk Abiram!’”
“ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು.
25 Alò, Moïse te leve ale vè Dathan ak Abiram, avèk ansyen a Israël ki t ap swiv li yo.
ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
26 Li te pale avèk kongregasyon an. Li te di: “Kite tant a moun mechan sa yo, e pa touche anyen ki pou yo, sinon, nou va vin pote ale ak tout peche yo.”
ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.
27 Konsa, yo te soti nan tant a Koré yo, Dathan ak Abiram de tout kote. Dathan ak Abiram te vin kanpe nan pòtay tant pa yo a, ansanm avèk madanm yo, e fis yo, ansanm ak timoun yo.
ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು.
28 Moïse te di: “Selon sa, nou va konnen ke SENYÈ a te voye mwen pou fè tout zèv sa yo; paske sa se pa nan tèt mwen y ap soti.
ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.
29 Si mesye sila yo mouri yon mò natirèl, oswa si yo soufri desten a tout moun nòmal, alò SENYÈ a pa t voye mwen.
ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ, ಇಲ್ಲವೆ ಎಲ್ಲಾ ಮನುಷ್ಯರ ಶಿಕ್ಷೆ ಇವರಿಗೂ ಪ್ರಾಪ್ತವಾದರೆ ಯೆಹೋವ ದೇವರು ನನ್ನನ್ನು ಕಳುಹಿಸಲಿಲ್ಲ.
30 Men si SENYÈ a fè vin parèt yon bagay tounèf, tè a vin ouvri bouch li pou vale yo nèt avèk tout sa ki pou yo, e yo desann tou vivan kote mò yo ye a, alò, konsa, nou va konprann ke mesye sila yo te meprize SENYÈ a.” (Sheol )
ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು. (Sheol )
31 Pandan li te fin pale tout pawòl sa yo, tè ki te anba yo a te fann e li te ouvri.
ಅವನು ಹೇಳ ಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ, ಅವರ ಕೆಳಗಿರುವ ನೆಲವು ಸೀಳಿ
32 Konsa, latè te louvri bouch li e te vale yo nèt avèk moun lakay yo, ak tout mesye ki te apatyen a Koré avèk tout byen yo.
ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.
33 Konsa, yo menm avèk tout sa ki te pou yo, te desann vivan nan sejou mò yo. Tè a te vin fèmen sou yo, e yo te peri nan mitan asanble a. (Sheol )
ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. (Sheol )
34 Tout Israël ki te antoure yo te sove ale pandan yo t ap rele, paske yo te di: “Tè a kapab vin vale nou nèt!”
ಆಗ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಓಡಿಹೋದರು, ಏಕೆಂದರೆ ಅವರು, “ಭೂಮಿಯು ನಮ್ಮನ್ನು ಸಹ ನುಂಗಿಬಿಟ್ಟೀತು,” ಎಂದು ಹೆದರಿದರು.
35 Dife te sòti nan SENYÈ a pou brile de san senkant mesye ki te ofri lansan yo.
ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
36 SENYÈ a te pale avèk Moïse. Li te di:
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
37 “Di a Éléazar, fis a Aaron an, prèt la, ke li va ranmase veso lansan yo nan mitan dife a, paske yo sen. Epi nou va gaye sann dife k ap brile lwen kan an, paske yo sen.
“ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು.
38 Epi menm selon veso lansan a mesye sa yo ki te peche e te peye ak lavi yo, kite yo fin bat yo byen plat pou sèvi yo pou kouvri lotèl la, pwiske yo te prezante yo devan SENYÈ a. Yo sen. Konsa, yo va sèvi kòm yon sign a fis Israël yo.”
ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು.
39 Éléazar, prèt la, te pran veso lansan ki te fèt an bwonz ke mesye ki te brile yo te ofri, epi yo te bat yo pou fè yo plat pou kouvri lotèl la,
ಆಗ ಯಾಜಕನಾದ ಎಲಿಯಾಜರನು ಯೆಹೋವ ದೇವರು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ಸುಟ್ಟು ಹೋದವರು ಅರ್ಪಿಸಿದ ಕಂಚಿನ ಧೂಪದ ಪಾತ್ರೆಗಳನ್ನು ತೆಗೆದುಕೊಂಡು, ಬಲಿಪೀಠವನ್ನು ಮುಚ್ಚುವುದಕ್ಕಾಗಿ ಅವುಗಳನ್ನು ಅಗಲವಾದ ತಗಡುಗಳನ್ನಾಗಿ ಮಾಡಿದನು.
40 kòm yon sonj komemoratif a fis Israël yo pou pèsòn ki pa nan ras Aaron pa ta dwe pwoche pou brile lansan devan SENYÈ a; jis pou li pa devni tankou Koré ak konpanyen li yo—jis jan ke SENYÈ a te pale a li pa Moïse la.
ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.
41 Men nan pwochen jou a, tout kongregasyon fis Israël yo te bougonnen kont Moïse avèk Aaron. Yo te di: “Se nou ki touye pèp SENYÈ a.”
ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.
42 Lè kongregasyon an te reyini ansanm kont Moïse avèk Aaron, yo te gade vè tant asanble a, e vwala, nwaj la te kouvri li e glwa SENYÈ a te parèt.
ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.
43 Alò, Moïse avèk Aaron te vini devan tant asanble a.
ಮೋಶೆಯೂ ಆರೋನನೂ ದೇವದರ್ಶನ ಗುಡಾರದ ಮುಂದೆ ಬಂದರು.
44 Konsa, SENYÈ a te pale a Moïse. Li te di:
ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
45 “Mete ou lwen kongregasyon sila a, pou Mwen kapab detwi yo kounye a menm.” Yo te tonbe sou figi yo.
“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.
46 Moïse te di a Aaron: “Pran veso lansan an, mete dife lotèl la ladann. Mete lansan an sou li e pote li vit bay kongregasyon an pou fè ekspiyasyon pou yo. Paske lakòlè gen tan sòti nan SENYÈ a. Gwo epidemi an kòmanse!”
ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.
47 Alò Aaron te pran li jan Moïse te pale a. Li te kouri nan mitan asanble a, paske, gade byen, gwo epidemi an te kòmanse pami pèp la. Konsa li te mete lansan an pou fè ekspiyasyon pou pèp la.
ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
48 Li te kanpe antre mò yo ak moun vivan, e gwo epidemi an te rete.
ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡದ್ದರಿಂದ ವ್ಯಾಧಿಯು ಶಮನವಾಯಿತು.
49 Men sila ki te mouri nan gwo epidemi yo te katòz-mil-sèt-san, anplis sila ki te mouri akoz Koré yo.
ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು.
50 Alò, Aaron te retounen vè Moïse nan pòtay tant asanble a, paske gwo epidemi an te vin rete.
ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು.