< Sòm 98 >
1 Yon Sòm O chante a SENYÈ a yon chan tounèf, paske Li te fè anpil bèl mèvèy. Men dwat Li ak bra sen Li yo te vin genyen viktwa pou Li.
೧ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.
2 SENYÈ a te fè sali Li rekonèt. Li te devwale ladwati Li pou tout nasyon yo wè.
೨ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
3 Li te sonje lanmou dous Li a avèk fidelite Li pou lakay Israël.
೩ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
4 Rele fò ak jwa a SENYÈ a, tout latè! Eklate ak chanson, wi chante lwanj Li yo!
೪ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
5 Chante lwanj a SENYÈ a avèk ap, avèk ap ak vwa melodi a.
೫ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.
6 Avèk twonpèt ak son a kòn. Rele fò devan Wa a, SENYÈ a.
೬ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.
7 Kite lanmè a fè gwo bri ak tout sa ki ladann, Lemonn ak tout sa ki rete ladann yo.
೭ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
8 Kite larivyè yo bat men yo. Kite mòn yo chante ansanm ak jwa
೮ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.
9 devan SENYÈ a, paske l ap vini pou jije latè. Li va jije lemonn ak ladwati Li E pèp yo avèk jistis.
೯ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.