< 2 Tarihi 15 >

1 Sai Ruhun Allah ya sauko a kan Azariya ɗan Oded.
ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
2 Ya fita ya je ya sadu da Asa ya kuma faɗa masa, “Ka saurare ni, Asa da kuma dukan Yahuda da Benyamin. Ubangiji yana tare da ku sa’ad da kuke tare da shi. In kuka neme shi, za ku same shi, amma in kuka yashe shi, zai yashe ku.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
3 Tun da daɗewa Isra’ila ba su da Allah na gaskiya, babu firist da zai koyar, kuma babu doka.
ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
4 Amma cikin wahalarsu suka juya ga Ubangiji, Allah na Isra’ila, suka kuma neme shi, suka kuwa same shi.
ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
5 A waɗancan kwanaki akwai hatsari a yin tafiye-tafiye, gama dukan mazaunan ƙasashe suna cikin babbar damuwa.
ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.
6 Wata ƙasa takan murƙushe wata, wani birni kuma yakan murƙushe wani, domin Allah ya wahalshe su da kowace irin damuwa.
ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.
7 Amma game da ku, ku ƙarfafa kada ku fid da zuciya, gama za a ba ku ladan aikinku.”
ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.
8 Sa’ad da Asa ya ji waɗannan kalmomin da annabcin Azariya ɗan Oded annabi ya faɗa, sai ya sami ƙarfi hali. Ya kawar da gumaka masu banƙyama daga dukan ƙasar Yahuda da Benyamin da kuma daga garuruwan da ya ci da yaƙi a ƙasar tudu ta Efraim. Ya gyaggyara bagaden Ubangiji da yake a gaban shirayin haikalin Ubangiji.
ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.
9 Sa’an nan ya tattara dukan Yahuda da Benyamin da kuma mutane daga Efraim, Manasse da Simeyon waɗanda suke zaune a cikinsu, gama jama’a mai girma ta zo wurinsa daga Isra’ila sa’ad da suka ga cewa Ubangiji Allahnsa yana tare da shi.
ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.
10 Suka taru a Urushalima a wata na uku na shekara ta goma sha biyar ta mulkin Asa.
೧೦ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.
11 A lokacin suka miƙa hadaya bijimai ɗari bakwai da tumaki da kuma awaki dubu bakwai ga Ubangiji daga ganimar da suka dawo da ita.
೧೧ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
12 Suka yi alkawari don su nemi Ubangiji Allah na kakanninsu, da dukan zuciyarsu da kuma dukan ransu.
೧೨ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
13 Aka kashe dukan waɗanda ba su nemi Ubangiji, Allah na Isra’ila ba, ko ƙarami ko babba, namiji ko ta mace.
೧೩ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು
14 Suka yi rantsuwa ga Ubangiji da babbar murya, da ihu da garayu da ƙahoni.
೧೪ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.
15 Dukan Yahuda suka yi farin ciki game da rantsuwar domin sun yi rantsuwar gabagadi. Suka nemi Allah da gaske, suka kuma same shi. Saboda haka Ubangiji ya ba su hutu a kowane gefe.
೧೫ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
16 Sarki Asa ya tuɓe mahaifiyar mahaifiyarsa daga matsayinta na mahaifiyar sarauniya, domin ta gina ginshiƙin banƙyama na Ashera. Asa ya rurrushe shi, ya farfasa shi ya kuma ƙone shi a Kwarin Kidron.
೧೬ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
17 Ko da yake bai kawar da masujadan kan tudu daga Isra’ila ba, zuciyar Asa ta cika da bin Ubangiji dukan kwanakinsa.
೧೭ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
18 Ya kawo azurfa da zinariya da kayayyaki a haikalin Allah waɗanda shi da mahaifinsa suka keɓe.
೧೮ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
19 Ba a ƙara yin yaƙi ba sai a shekara ta talatin da biyar ta mulkin Asa.
೧೯ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.

< 2 Tarihi 15 >