< 2 Tarihi 21 >
1 Yehoshafat ya huta tare da kakanninsa, aka kuma binne shi tare da su a Birnin Dawuda. Sai Yehoram ɗansa ya gāje shi a matsayin sarki.
೧ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.
2 ’Yan’uwan Yehoram,’ya’yan Yehoshafat maza su ne, Azariya, Yehiyel, Zakariya, Azariyahu, Mika’ilu da Shefatiya. Dukan waɗannan su ne’ya’yan Yehoshafat sarkin Isra’ila maza.
೨ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.
3 Mahaifinsu ya ba su kyautai masu yawa na azurfa da zinariya da kayayyaki masu daraja, tare da birane masu katanga a Yahuda, amma ya ba da mulki ga Yehoram domin shi ne ɗan farinsa.
೩ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
4 Sa’ad da Yehoram ya kafa kansa sosai a bisa mulkin mahaifinsa, sai ya kashe dukan’yan’uwansa da takobi tare da waɗansu sarakunan Isra’ila.
೪ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
5 Yehoram yana da shekara talatin da biyu sa’ad da ya zama sarki, ya kuma yi mulki a Urushalima shekara takwas.
೫ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
6 Ya yi tafiya a hanyoyin sarakunan Isra’ila, kamar yadda gidan Ahab ta yi, gama ya auri’yar Ahab. Ya aikata mugayen ayyuka a idon Ubangiji.
೬ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
7 Duk da haka, domin alkawarin da Ubangiji ya yi wa Dawuda, Ubangiji bai so yă hallaka gidan Dawuda ba. Ubangiji ya riga ya yi alkawari zai ci gaba da riƙe fitila domin Dawuda da zuriyarsa har abada.
೭ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
8 A zamanin Yehoram, Edom ya tayar wa Yahuda ya kuma naɗa sarkinsa.
೮ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.
9 Saboda haka Yehoram ya tafi can tare da shugabannin sojojinsa da kuma dukan keken yaƙinsa. Mutanen Edom suka kewaye shi da shugabannin keken yaƙinsa, amma ya tashi ya fatattaki su da dare.
೯ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.
10 Har yă zuwa yau Edom na tawaye a kan Yahuda. Libna ya yi tawaye a lokaci guda, domin Yehoram ya yashe Ubangiji Allah na kakanninsa.
೧೦ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.
11 Ya gina masujadan kan tudu a tuddan Yahuda, ya kuma sa mutanen Urushalima suka yi karuwanci, ya sa Yahuda suka kauce.
೧೧ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.
12 Yehoram ya sami wasiƙa daga Iliya annabi, wadda ta ce, “Ga abin da Ubangiji Allah na kakanka Dawuda ya ce, ‘Ba ka yi tafiya a hanyoyin mahaifinka Yehoshafat ko Asa sarkin Yahuda ba.
೧೨ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
13 Amma ka yi tafiya a hanyoyin sarakunan Isra’ila, ka sa Yahuda ya kauce, ka kuma sa mutanen Urushalima suka yi karuwanci, kamar yadda gidan Ahab ta yi. Ka kuma kashe’yan’uwanka, membobi gidan mahaifinka, mutanen da suka fi ka kirki.
೧೩ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.
14 Saboda haka a yanzu Ubangiji yana shirin ya bugi mutanenka,’ya’yanka maza, matanka da kuma kome da yake naka, da bugu mai ƙarfi.
೧೪ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.
15 Kai kuma za ka kamu da ciwon hanji wanda zai yi ta cinka kowace rana sai har hanjinka sun fito.’”
೧೫ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.
16 Ubangiji ya sa Filistiyawa da Larabawa waɗanda suke zama kusa da Kushawa su yi gāba da Yehoram
೧೬ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.
17 Suka yaƙi Yahuda, suka kai masa hari, suka kwashe dukan abubuwa masu kyau da suka samu a fadan sarki, tare da’ya’yansa maza da kuma matansa. Ba wanda aka bari, sai dai Ahaziya autansa.
೧೭ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.
18 Bayan dukan wannan, sai Ubangiji ya sa wa Yehoram cuta marar warkarwa ta ciki.
೧೮ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು.
19 Cikin lokaci, a ƙarshen shekara ta biyu, sai hanjin cikinsa suka fito saboda cutar, ya kuma mutu cikin tsananin zafi. Mutanensa suka hura wuta don girmama shi, kamar yadda suka yi wa kakanninsa.
೧೯ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.
20 Yehoram yana da shekara talatin da biyu sa’ad da ya zama sarki, ya kuma yi mulki a Urushalima shekara takwas. Ya mutu, ba ma wanda ya kula, aka kuma binne shi a Birnin Dawuda, amma ba a makabartan sarakuna ba.
೨೦ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.