< 2 Sarakuna 4 >

1 Matar wani daga ƙungiyar annabawa ta yi wa Elisha kuka ta ce, “Mijina, bawanka, ya mutu, ka kuma san yadda ya girmama Ubangiji. Amma ga shi yanzu mai binsa bashi ya zo yă kwashe’ya’yana maza biyu su zama bayinsa.”
ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.
2 Elisha ya amsa mata ya ce, “Me kike so in yi miki? Ki faɗa mini, me kike da shi a gidanki?” Sai ta ce, “Baiwarka ba ta da kome a can, sai ɗan tulun man zaitun.”
ಎಲೀಷನು ಅವಳಿಗೆ, “ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು? ನನಗೆ ತಿಳಿಸು,” ಎಂದನು. ಅವಳು, “ನಿನ್ನ ಸೇವಕಿಗೆ ಒಂದು ಪಾತ್ರೆಯಲ್ಲಿ ಸ್ವಲ್ಪವೇ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ,” ಎಂದಳು.
3 Elisha ya ce, “Ki je wurin dukan maƙwabtanki, ki nemi tulunan da babu kome a ciki. Kada ki nemo kaɗan kawai.
ಆಗ ಅವನು, “ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರಿದಾದ ಪಾತ್ರೆಗಳನ್ನು ಬೇಕಾದಷ್ಟು ಕೇಳಿ ತೆಗೆದುಕೊಂಡು ಬಾ.
4 Sa’an nan ki shiga ciki, ki kulle ƙofar da ke da’ya’yanki kuke ciki. Ku ɗuɗɗura man a dukan tulunan, sa’ad da kowanne ya cika, sai ki ajiye a gefe.”
ನೀನು ಒಳಗೆ ಪ್ರವೇಶಿಸಿ, ನೀನೂ, ನಿನ್ನ ಪುತ್ರರೂ ಬಾಗಿಲು ಮುಚ್ಚಿಕೊಂಡು, ಆ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದು ತುಂಬಿದ್ದನ್ನು ಒಂದು ಕಡೆ ಇಡು,” ಎಂದನು.
5 Ta tashi ta shiga tare da’ya’yanta maza, suka kulle ƙofa.’Ya’yanta suka kawo mata tuluna, ita kuma tana ɗurawa.
ಹೀಗೆ ಅವಳು ಅವನನ್ನು ಬಿಟ್ಟು ಹೋಗಿ, ತಾನೂ, ತನ್ನ ಪುತ್ರರೂ ಬಾಗಿಲು ಮುಚ್ಚಿದರು. ಇವರು ಅವಳ ಬಳಿಗೆ ಪಾತ್ರೆಗಳನ್ನು ತೆಗೆದುಕೊಂಡು ಬಂದರು. ಅವಳು ಎಣ್ಣೆಯನ್ನು ಅವುಗಳಲ್ಲಿ ಹೊಯ್ದಳು.
6 Da dukan tulunan suka cika, sai ta ce wa ɗanta, “Kawo mini wani tulu.” Amma ya amsa ya ce, “Ai, ba saura.” Sa’an nan man ya daina zuba.
ಆ ಪಾತ್ರೆಗಳು ತುಂಬಿದ ತರುವಾಯ ಅವಳು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು. ಮಗನು ಅವಳಿಗೆ, “ಇನ್ನೊಂದು ಪಾತ್ರೆ ಇಲ್ಲ,” ಎಂದನು. ಆಗ ಎಣ್ಣೆಯು ನಿಂತುಹೋಯಿತು.
7 Sai ta tafi ta faɗa wa mutumin Allah. Shi kuwa ya ce mata, “Tafi, ki sayar da man, ki biya bashinki. Ki biya bukatanki da na’ya’yanki da sauran da ya rage.”
ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.
8 Wata rana Elisha ya tafi Shunem. Akwai wata mai arziki a can wadda ta gayyace shi cin abinci. Sai ya zama duk lokacin da yake wucewa, yakan tsaya a can don cin abinci.
ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬಳು ಶ್ರೀಮಂತ ಸ್ತ್ರೀಯು ಇದ್ದಳು. ಅವಳು ಅವನನ್ನು ಊಟ ಮಾಡಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ, ಅಲ್ಲಿ ಊಟ ಮಾಡಲು ಹೋಗುತ್ತಿದ್ದನು.
9 Ta ce wa mijinta, “Na san cewa wannan mutum da kullum yake zuwa nan mai tsarki ne na Allah.
ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.
10 Bari mu yi ɗan ɗaki a rufin gida mu kuma sa masa gado da tebur da kujera da kuma fitila. Saboda a duk lokacin da ya zo wurinmu, sai yă sauka a can.”
ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು.
11 Wata rana da Elisha ya zo, sai ya haura ɗakinsa ya kwanta.
ಒಂದು ದಿವಸ ಎಲೀಷನು ಅಲ್ಲಿಗೆ ಬಂದು, ಆ ಕೊಠಡಿಯಲ್ಲಿ ಪ್ರವೇಶಿಸಿ ಮಲಗಿದನು.
12 Ya ce wa bawansa Gehazi, “Kira mutuniyar Shunam nan.” Sai ya kira ta, ta zo ta tsaya a gabansa.
ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.
13 Elisha ya ce masa, “Ka ce mata, ‘Kin yi duk wannan ɗawainiya saboda mu. Yanzu, me kike so a yi miki? Kina so mu yi magana a madadinki wa sarki ko babban hafsan mayaƙa?’” Sai ta ce, “A’a, ina da dukan abin da nake bukata a cikin jama’ata.”
ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.
14 Sai Elisha ya tambayi Gehazi ya ce, “Me za mu yi mata?” Sai ya amsa ya ce, “Ba ta da ɗa, ga shi kuma mijinta ya tsufa.”
ಎಲೀಷನು ಗೇಹಜಿಗೆ, “ಅವಳಿಗೋಸ್ಕರ ಮಾಡಬೇಕಾದದ್ದೇನು?” ಎಂದನು. ಅದಕ್ಕೆ ಗೇಹಜಿಯು, “ಅವಳಿಗೆ ಮಕ್ಕಳಿಲ್ಲ. ಅವಳ ಗಂಡನು ವೃದ್ಧನಾಗಿದ್ದಾನೆ,” ಎಂದನು.
15 Sai Elisha ya ce, “Ka kira ta.” Sai ya kira ta, ta zo ta tsaya a bakin ƙofa.
ಪ್ರವಾದಿಯು, “ಅವಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದಾಗ ಅವಳು ಬಾಗಿಲಲ್ಲೇ ನಿಂತಳು.
16 Elisha ya ce mata, “War haka baɗi, za ki riƙe ɗa na kanki.” Sai ta ce masa, “A’a, ranka yă daɗe, mutumin Allah, kada ka ruɗi baiwarka!”
ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.
17 Amma matan ta yi ciki, a shekara ta biye kuwa a daidai lokacin, sai ta haifi ɗa kamar yadda Elisha ya faɗa mata.
ಆದರೆ, ಆ ಸ್ತ್ರೀಯು ಗರ್ಭಧರಿಸಿ, ಎಲೀಷನು ಹೇಳಿದ ಪ್ರಕಾರ ಮುಂದಿನ ವರ್ಷದ ಅದೇ ಸಮಯದಲ್ಲಿ ಮಗನನ್ನು ಹೆತ್ತಳು.
18 Yaron ya yi girma, wata rana sai ya tafi wurin mahaifinsa, wanda yake tare da masu girbi.
ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
19 Ba zato sai ya ce wa mahaifinsa, “Wayyo! Kaina yana mini ciwo! Kaina yana mini ciwo!” Sai mahaifinsa ya ce wa bawansa, “Kai shi wurin mahaifiyarsa.”
ಆಗ ಅವನು ತನ್ನ ತಂದೆಗೆ, “ನನ್ನ ತಲೆ, ನನ್ನ ತಲೆ,” ಎಂದನು. ತಂದೆಯು ತನ್ನ ಸೇವಕನಿಗೆ, “ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು,” ಎಂದನು.
20 Bayan bawan ya ɗaga shi ya kai wurin mahaifiyarsa, sai yaron ya zauna a cinyarta har tsakar rana, sa’an nan ya mutu.
ಸೇವಕನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದವರೆಗೂ ಅವಳ ತೊಡೆಯ ಮೇಲೆ ಇದ್ದು ಅನಂತರ ಮರಣಹೊಂದಿದನು.
21 Sai ta haura ta shimfiɗa shi a gadon mutumin Allah, ta rufe ƙofar, ta fita.
ಆಗ ಅವಳು ಏರಿಹೋಗಿ, ಅವನನ್ನು ದೇವರ ಮನುಷ್ಯನ ಮಂಚದ ಮೇಲೆ ಮಲಗಿಸಿ ಬಾಗಿಲು ಮುಚ್ಚಿದಳು.
22 Ta kira mijinta ta ce, “Ina roƙonka ka aika mini da ɗaya daga cikin bayi da kuma jaka, don in yi sauri in je wurin mutumin Allah in dawo.”
ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು.
23 Sai ya ce, “Me zai kai ki wurinsa, ai, yau ba Sabon Wata ba ne ko ranar Asabbaci?” Sai ta ce, “Ba kome.”
ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.
24 Sai ta sa wa jakar sirdi ta ce wa bawanta, “Yi ta kora mini jakar, kada ka sassauta, sai na faɗa maka.”
ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ, “ನಡೆಸಿಕೊಂಡು ಹೋಗು. ನಾನು ನಿನಗೆ ಹೇಳುವವರೆಗೂ, ನನಗೋಸ್ಕರ ಸವಾರಿಯನ್ನು ನಿಧಾನಗೊಳಿಸಬೇಡ,” ಎಂದು ಹೇಳಿ,
25 Ta haka ta kama hanya ta tafi wurin mutumin Allah a Dutsen Karmel. Da ya hange ta daga nesa, sai mutumin Allah ya ce wa bawansa Gehazi, “Duba! Ga mutuniyar Shunam nan can!
ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.
26 Ka yi gudu ka tarye ta ka tambaye ta, ‘Lafiyarki? Mijinki yana nan lafiya? Yaronki yana nan lafiya?’” Ta amsa ta ce, “Kome lafiya yake.”
ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’” ಎಂದನು. ಅವಳು, “ಕ್ಷೇಮ” ಎಂದಳು.
27 Da ta isa wurin mutumin Allah a dutsen, sai ta kama ƙafafunsa. Sai Gehazi ya zo don yă ture ta, amma mutumin Allah ya ce, “Ka bar ta! Tana cikin baƙin ciki ƙwarai, amma Ubangiji ya ɓoye mini, bai kuma faɗa mini me ya sa ba.”
ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.
28 Sai ta tambaya shi ta ce, “Na roƙe ka ɗa ne, ranka yă daɗe? Ba na ce maka, ‘Kada ka sa in fara bege ba’?”
ಆಗ ಅವಳು, “ನಾನು ನನ್ನ ಒಡೆಯನಿಂದ ಪುತ್ರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡವೆಂದು ನಾನು ಹೇಳಲಿಲ್ಲವೋ?” ಎಂದಳು.
29 Elisha ya ce wa Gehazi, “Ka yi ɗamara, ka ɗauki sandana ka ruga a guje. Idan ka sadu da wani, kada ka gaishe shi, idan kuma wani ya gaishe ka, kada ka amsa. Ka shimfiɗa sandana a fuskar yaron.”
ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.
30 Amma mahaifiyar yaron ta ce, “Muddin Ubangiji yana raye, kai kuma kana a raye, ba zan bar ka ba.” Saboda haka ya tashi ya bi ta.
ಆದರೆ ಹುಡುಗನ ತಾಯಿಯು, “ಯೆಹೋವ ದೇವರ ಜೀವದಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದಳು. ಆಗ ಅವನೆದ್ದು ಅವಳ ಹಿಂದೆ ಹೋದನು.
31 Gehazi ya yi gaba, ya shimfiɗa sandan a fuskar yaron, amma babu motsi, babu alamar rai. Saboda haka Gehazi ya koma ya taryi Elisha, ya faɗa masa, “Yaron bai tashi ba.”
ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.
32 Da Elisha ya isa gidan, sai ga gawar yaron kwance a kan gadonsa.
ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.
33 Sai ya shiga, ya rufe ƙofa, daga shi sai yaron, ya kuma yi addu’a ga Ubangiji.
ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು.
34 Sa’an nan ya hau gadon yă kwanta a bisa yaron, ya miƙe a kansa, baki da baki, ido da ido, hannu da hannu. Yayinda ya miƙe kansa a kan yaron, sai jikin yaron ya ɗau ɗumi.
ಅವನು ಮಗುವಿನ ಮೇಲೆ ಮಲಗಿಕೊಂಡು, ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ, ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ, ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನ ಮೇಲೆ ಬೋರಲು ಬಿದ್ದುದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
35 Elisha ya tashi, ya yi ta kai komo a cikin ɗakin. Sa’an nan ya sāke koma kan gadon yă miƙe a kan yaron, sai yaron ya yi atishawa sau bakwai, ya kuma buɗe idanunsa.
ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು.
36 Elisha ya kira Gehazi ya ce, “Kirawo mutuniyar Shunam.” Ya kuwa kira ta. Sa’ad da ta zo, sai Elisha ya ce mata, “Ɗauki ɗanki.”
ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು.
37 Sai ta shiga, ta fāɗi a ƙafafunsa ta rusuna har ƙasa. Sa’an nan ta ɗauki ɗanta ta fita.
ಆಗ ಅವಳು ಬಂದು, ಅವನ ಪಾದಗಳ ಮೇಲೆ ಬಿದ್ದು, ನೆಲಕ್ಕೆ ಬಗ್ಗಿ ತನ್ನ ಮಗನನ್ನು ಎತ್ತಿಕೊಂಡು ಹೊರಟು ಹೋದಳು.
38 Sai Elisha ya koma Gilgal, a can kuwa ana yunwa a yankin. Yayinda ƙungiyar annabawa suke tattaunawa da shi, sai ya ce wa Gehazi bawansa, “Ka sa babban tukunya a wuta, ka yi wa mutanen nan fate.”
ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.
39 Ɗaya daga cikin mutanen ya shiga gona don neman ganyaye, ya kuwa sami kabewar jeji. Ya tsinko’ya’yanta cike da shafin rigarsa. Da ya dawo, sai ya yayyanka su ya zuba a cikin tukunyar faten, ko da yake ba wanda ya san ko mene ne.
ಅವರಲ್ಲಿ ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ, ಅಡವಿಯ ಬಳ್ಳಿಯನ್ನು ಕಂಡು, ಅಡವಿಯ ಕಾಯಿಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು, ಅವುಗಳನ್ನು ಕೊಯ್ದು ಗಡಿಗೆಯಲ್ಲಿ ಹಾಕಿದನು. ಅವು ಏನೆಂದು ಯಾರಿಗೂ ತಿಳಿದಿರಲಿಲ್ಲ.
40 Sai aka zuba wa mutanen faten, amma da suka fara ci, sai suka yi ihu suna cewa, “Ya mutumin Allah, akwai dafi a cikin tukunyan nan!” Suka kuwa kāsa ci.
ಜನರಿಗೆ ಅದನ್ನು ತಿನ್ನುವುದಕ್ಕೆ ಬಡಿಸಿದರು. ಅವರು ಆಹಾರವನ್ನು ತಿನ್ನುತ್ತಿರುವಾಗ, “ದೇವರ ಮನುಷ್ಯನೇ, ಗಡಿಗೆಯಲ್ಲಿ ಮರಣ,” ಎಂದು ಕೂಗಿದರು. ಅವರು ಅದರಲ್ಲಿದ್ದದ್ದನ್ನು ತಿನ್ನಲಾರದೆ ಹೋದರು.
41 Elisha ya ce, “Samo mini ɗan gari.” Aka kawo masa ya kuma sa a cikin tukunyan ya ce, “Raba wa mutanen su ci.” Ya kasance kuwa babu wani abin damuwa a tukunyar.
ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು.
42 Sai ga wani mutum ya zo daga Ba’al-Shalisha, ya kawo wa Elisha dunƙulen burodi guda ashirin na sha’ir da aka gasa daga nunan fari na hatsi, tare da kawunan sababbin hatsi. Sai Elisha ya ce, “Ka ba mutanen su ci.”
ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.
43 Sai bawansa ya ce, “Yaya zan raba wa mutane ɗari wannan?” Amma Elisha ya amsa ya ce, “Ka raba wa mutane su ci, gama haka Ubangiji ya ce, ‘Za su ci har su bar saura.’”
ಅವನ ಸೇವಕನು, “ಇದನ್ನು ನೂರು ಮಂದಿಗೆ ಬಡಿಸುವುದು ಹೇಗೆ?” ಎಂದನು. “‘ತಿನ್ನಲು ಜನರಿಗೆ ನೀಡು, ಅವರು ತಿಂದು ಅನಂತರ ಉಳಿಯುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಎಲೀಷನು ಉತ್ತರಕೊಟ್ಟನು.
44 Sa’an nan ya ajiye a gabansu, suka kuwa ci har suka bar saura, bisa ga maganar Ubangiji.
ಹಾಗೆಯೇ ಸೇವಕನು ಬಡಿಸಿದನು. ಯೆಹೋವ ದೇವರು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಯಿತು.

< 2 Sarakuna 4 >