< Maimaitawar Shari’a 5 >

1 Musa ya tattara dukan Isra’ila ya ce, Ku ji, ya Isra’ila, ƙa’idodi da dokokin da na furta a kunnuwanku a yau. Ku koye su, ku kuma tabbata kun bi su.
ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
2 Ubangiji Allahnmu ya yi alkawari da mu a Horeb.
ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
3 Ba da kakanninmu ba ne Ubangiji ya yi wannan alkawari, amma da mu ne, da dukanmu waɗanda muke da rai a yau.
ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.
4 Ubangiji ya yi magana fuska da fuska da ku daga wuta a kan dutse.
ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.
5 (A wannan lokaci na tsaya tsakanin Ubangiji da ku, don in furta muku maganar Ubangiji, domin kun ji tsoron wutar, ba ku kuwa hau dutsen ba.) Ya ce,
ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,
6 “Ni ne Ubangiji Allahnka, wanda ya fitar da ku daga Masar, daga ƙasar bauta.
“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
7 “Ba za ka kasance da waɗansu alloli a gabana ba.
ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
8 Ba za ka yi wa kanka gunki, ko wata siffar abin da take a sama a bisa, ko siffar abin da yake a duniya a ƙasa, ko siffar abin da yake a cikin ruwa a ƙarƙashin ƙasa ba.
“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
9 Ba za ka rusuna musu, ko ka yi musu sujada ba. Gama Ni, Ubangiji Allahnka, Allah ne mai kishi, nakan hukunta’ya’ya saboda zunuban iyaye har tsara ta uku da ta huɗu na waɗanda suka ƙi ni.
ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.
10 Amma nakan nuna ƙauna ga dubban tsararraki na waɗanda suke ƙaunata, suke kuma kiyaye dokokina.
೧೦ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.
11 Ba za ka yi amfani da sunan Ubangiji Allahnka a banza ba, gama Ubangiji zai ba wa duk mai yin amfani da sunansa a banza laifi.
೧೧“ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
12 Ka kiyaye ranar Asabbaci ta wurin kiyaye ta da tsarki, yadda Ubangiji Allahnka ya umarce ka.
೧೨“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.
13 Kwanaki shida za ka yi aiki, ka kuma yi dukan aikinka,
೧೩ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
14 amma rana ta bakwai, Asabbaci ne ga Ubangiji Allahnka. A kanta ba za ka yi wani aiki ba, ko kai, ko ɗanka, ko’yarka, ko bawanka, ko baiwarka, ko saniyarka, ko jakinka, ko wani daga dabbobinka, ko baƙo a ƙofofinka, don bayinka maza da mata su ma su huta, kamar ka.
೧೪ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
15 Ka tuna fa, dā kai bawa ne a ƙasar Masar amma Ubangiji Allahnka ya fitar da kai daga can da iko da kuma ƙarfi. Saboda haka Ubangiji Allahnka ya umarce ka ka kiyaye ranar Asabbaci.
೧೫ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.
16 Ka ba da girma ga mahaifinka da mahaifiyarka, yadda Ubangiji Allahnka ya umarce ka, don ka yi tsawon rai, ka kuma sami zaman lafiya a ƙasar da Ubangiji Allahnka yake ba ka.
೧೬“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
17 Kada ka yi kisankai.
೧೭“ನರಹತ್ಯ ಮಾಡಬಾರದು.
18 Kada ka yi zina.
೧೮“ವ್ಯಭಿಚಾರ ಮಾಡಬಾರದು.
19 Kada ka yi sata.
೧೯“ಕದಿಯಬಾರದು.
20 Kada ka ba da shaidar ƙarya a kan maƙwabcinka.
೨೦“ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು.
21 Kada ka yi ƙyashin matar maƙwabcinka. Kada kuma ka yi sha’awar gidan maƙwabcinka, ko gonarsa, ko bayinsa maza da mata, ko saniyarka, ko jakinsa, ko dai wani abin da yake na maƙwabtanka.”
೨೧“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
22 Waɗannan su ne dokokin da Ubangiji ya furta da babbar murya ga taronku gaba ɗaya, a can dutse ta tsakiyar wuta, girgije da kuma baƙin duhu; bai kuma ƙara kome ba. Sa’an nan ya rubuta su a kan alluna biyu na dutse, ya kuma ba ni su.
೨೨ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
23 Sa’ad da kuka ji muryar daga duhu, yayinda dutsen yana cin wuta, dukan manyan kabilanku da dattawanku suka zo wurina.
೨೩ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,
24 Kuka kuma ce, “Ubangiji Allahnmu ya nuna mana ɗaukakarsa da zatinsa, mun kuma ji muryarsa a tsakiyar wutar. A yau mun ga cewa mutum zai iya rayu idan ma Allah ya yi magana da shi.
೨೪“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.
25 Amma yanzu, don me za mu mutu? Wannan wuta mai girma za tă cinye mu, za mu kuwa mutu in muka ci gaba da jin muryar Ubangiji Allahnmu.
೨೫ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.
26 Gama wanda ɗan adam ne ya taɓa jin muryar Allah mai rai yana magana daga wuta, kamar yadda muka ji, ya kuma tsira?
೨೬ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?
27 Kai, ka matsa kusa, ka saurara ga dukan abin da Ubangiji Allahnmu ya faɗa. Sa’an nan ka faɗa mana dukan abin da Ubangiji Allahnmu ya faɗa maka. Za mu saurara, mu kuma yi biyayya.”
೨೭ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.
28 Ubangiji ya ji ku, sa’ad da kuka yi magana da ni, sai Ubangiji ya ce mini, “Na ji abin da wannan mutane suka faɗa maka. Abin da suka faɗa daidai ne.
೨೮ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.
29 Kash, da a ce zukatansu za su zama masu tsorona, su kuma kiyaye dukan dokokina kullum mana, saboda kome yă zama da lafiya gare su, da kuma’ya’yansu har abada!
೨೯ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
30 “Je, ka faɗa musu su koma tentunansu.
೩೦“‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ’ ಎಂದು ಅವರಿಗೆ ಆಜ್ಞಾಪಿಸು.
31 Kai kuwa ka tsaya a nan tare da ni saboda in ba ka umarnai, ƙa’idodi da kuma dokoki duka, da za ka koya musu don su bi a ƙasar da nake ba su, su mallaka.”
೩೧ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
32 Sai ku yi hankali don ku yi abin da Ubangiji Allahnku ya umarce ku; kada ku juya dama ko hagu.
೩೨ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
33 Ku yi tafiya cikin dukan hanyar da Ubangiji Allahnku ya umarce ku, saboda ku zauna, ku yi nasara, ku kuma yi tsawon rai a ƙasar da za ku mallaka.
೩೩ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.

< Maimaitawar Shari’a 5 >