< Mai Hadishi 1 >
1 Kalmomin Malami, ɗan Dawuda, Sarki a Urushalima.
೧ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.
2 “Ba amfani! Ba amfani!” In ji Malami. “Gaba ɗaya ba amfani! Kome ba shi da amfani!”
೨ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.
3 Wace riba ce mutum yake samu daga wahalar da yake fama a duniya?
೩ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?
4 Zamanai sukan zo zamanai su wuce, amma duniya tana nan har abada.
೪ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.
5 Rana takan fito rana ta kuma fāɗi, ta kuma gaggauta zuwa inda takan fito.
೫ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.
6 Iska takan hura zuwa kudu ta kuma juya zuwa arewa; tă yi ta kewayewa, tă yi ta koma inda take fitowa.
೬ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
7 Dukan rafuffuka sukan gangara zuwa teku, duk da haka teku ba ya cika. Daga inda rafuffukan suke fitowa, a can suke komawa kuma.
೭ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
8 Dukan abubuwa suna kawo gajiya, gaban magana. Ido ba ya gaji da gani, haka ma kunne yă ƙoshi da ji.
೮ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.
9 Abin da ya taɓa kasancewa, zai sāke kasance, abin da aka yi za a sāke yi kuma; babu wani abu sabo a duniya.
೯ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
10 Akwai wani abin da za a ce, “Duba! Ga wani abu sabo”? Abin yana nan, tun dā can, ya kasance kafin lokacinmu.
೧೦‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
11 Ba a tunawa da mutanen dā, haka su ma da ba a haifa ba tukuna waɗanda za su biyo bayansu ba za a tuna da su ba.
೧೧ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”
12 Ni, Malami, sarki ne bisa Isra’ila a Urushalima.
೧೨ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.
13 Na dauri aniyata in gwada don in bincika ta wurin hikima dukan abin da ake yi a duniya. Kaya mai nauyi ne Allah ya ɗora a kan mutane!
೧೩ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
14 Na ga dukan abubuwan da ake yi a duniya, dukansu ba su da amfani, naushin iska ne kawai.
೧೪ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.
15 Abin da yake tanƙwararre ba zai miƙu ba; ba za a kuma iya ƙidaya abin da ba shi ba.
೧೫ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!
16 Na yi tunani a raina na ce, “Duba, na yi girma, na kuma ƙaru da hikima fiye da duk wanda ya taɓa mulki a bisa Urushalima kafin ni; na ɗanɗana hikima mai yawa da kuma ilimi.”
೧೬ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.
17 Sa’an nan na ɗaura aniyata ga fahimtar hikima, in kuma san bambanci tsakanin hauka da wauta, amma na koyi cewa wannan ma, naushin iska ne kawai.
೧೭ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.
18 Gama yawan hikima yakan kawo yawan baƙin ciki; yawan sani, yawan ɓacin rai.
೧೮ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.