< Esta 2 >
1 Daga baya sa’ad da fushin Sarki Zerzes ya huce, sai ya tuna da Bashti da abin da ta yi, da kuma dokar da ya bayar game da ita.
೧ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು.
2 Sai masu hidimar sarki na musamman, suka kawo shawara cewa, “Bari a nemi, kyawawan budurwai saboda sarki.
೨ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು.
3 Bari sarki yă naɗa komishinoni a kowane yanki na masarautarsa, domin su kawo dukan waɗannan kyawawan’yan mata cikin harabar mazaunin masarautar a Shusha. Bari a sa su a hannun Hegai, bābān sarki, wanda yake lura da mata, bari kuma a yi musu kulawa ta musamman.
೩ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.
4 Sa’an nan bari yarinyar da ta gamshi sarki, tă zama sarauniya a maimakon Bashti.” Wannan shawara ta gamshi sarki, ya kuwa yi na’am da ita.
೪ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.
5 To, a cikin mazaunin masarauta a Shusha, akwai wani mutumin Yahuda, daga Kabilar Benyamin mai suna Mordekai, ɗan Yayir, ɗan Shimeyi, ɗan Kish,
೫ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.
6 wanda Nebukadnezzar sarkin Babilon ya ɗauka tare’yan zaman bauta cikin waɗanda ya ɗauko daga Urushalima, tare da Yekoniya, sarkin Yahuda.
೬ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಇವನೂ ಒಬ್ಬನು.
7 Mordekai yana da wata’yar kawunsa mai suna Hadassa, wanda ya yi reno, ba ta da mahaifi ko mahaifiya. Ita ce yarinyar da aka santa da suna Esta. Kyakkyawa ce ƙwarai. Mordekai dai ya ɗauke ta tamƙar’yarsa sa’ad da mahaifinta da mahaifiyarta suka mutu.
೭ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.
8 Da aka yi shelar umarni da dokar sarki, sai aka kawo’yan mata masu yawa a mazaunin masarauta a Shusha, aka kuma sa su ƙarƙashin kulawar Hegai. Aka kawo Esta ma zuwa fadar sarki, aka danƙa ta wa Hegai, wanda yake lura da mata.
೮ಅರಸನ ನಿರ್ಣಯವೂ, ಆಜ್ಞೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
9 Yarinyar ta gamshe shi, ta kuma sami tagomashinsa. Nan da nan ya tanada mata, ya ba ta man shafawa da abinci na musamman. Ya ba ta bayi mata bakwai da aka zaɓa daga fadar sarki. Ya kuma kai ta tare da bayinta zuwa wuri mafi kyau na gidan matan kulle.
೯ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
10 Esta ba tă bayyana asalin al’ummarta da na iyalinta ba, domin Mordekai ya hana yin haka.
೧೦ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.
11 Kowace rana Mordekai yana kai da komowa kusa da harabar filin gidan matan kulle, domin ya san yadda Esta take, da kuma abin da yake faruwa da ita.
೧೧ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.
12 Kafin a kai kowace yarinya wurin Sarki Zerzes, sai ta gama watanni goma sha biyu cif ana yin mata kwalliyar da aka tsara, akan ɗauki watanni shida ana shafa mata man mur, a ɗauki watanni shida kuma ana shafa mata man ƙanshi da kayan shafe-shafe.
೧೨ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.
13 A kuma koya mata yadda za tă tafi wurin sarki. Aka ba ta duk abin da take so ta riƙe daga gidan matan kulle zuwa fadar sarki.
೧೩ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು.
14 Da yamma za tă tafi can, da safe kuma ta dawo wani ɓangaren gidan matan kullen da yake a ƙarƙashin kulawar Sha’ashgaz, bābā na sarki, wanda yake lura da ƙwarƙwarai. Ba ta dawowa wurin sarki sai in ta gamshe shi, sai ya kuma kira ta da suna.
೧೪ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ.
15 Sa’ad da lokaci ya yi da Esta (yarinyar da Mordekai ya ɗauka tamƙar’yarsa,’yar kawunsa Abihayil) za tă shiga wurin sarki, ba tă nemi a ba ta kome ba in ban da abin da Hegai, bābān sarki mai lura da gidan matan kulle, ya ba da shawara. Esta kuwa ta sami tagomashin kowa da ya ganta.
೧೫ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
16 Aka kai Esta wurin Sarki Zerzes a mazaunin sarauta a wata na goma, watan Tebet, a shekara ta bakwai ta mulkinsa.
೧೬ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.
17 To, sarki ya so Esta fiye da duk sauran matan, ta kuma sami tagomashinsa da kuma yardarsa fiye da duk sauran budurwai. Saboda haka ya sa rawanin sarauta a kanta, ya kuma mai da ita sarauniya a maimakon Bashti.
೧೭ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.
18 Sarki kuwa ya yi ƙasaitacciyar liyafa, liyafar Esta, wa dukan hakimansa da shugabannin masarautarsa. Ya yi shelar hutu ko’ina a larduna, ya kuma raba kyautai a yalwace irin na sarauta.
೧೮ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.
19 Sa’ad da aka tara budurwai karo na biyu, Mordekai kuwa yana zama a bakin ƙofar sarki.
೧೯ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
20 Amma Esta ta ɓoye asalin iyalinta da na al’ummarta yadda Mordekai ya ce ta yi, gama ta ci gaba da bin umarnan Mordekai yadda take yi sa’ad da yake renonta.
೨೦ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.
21 Sa’ad da Mordekai yake zaune a bakin ƙofar sarki, sai Bigtana da Teresh, biyu daga cikin hafsoshin sarki masu gadin ƙofar shiga, suka yi fushi, suka kuma ƙulla su kashe sarki Zerzes.
೨೧ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.
22 Mordekai kuwa ya sami labarin makircin, ya kuma faɗa wa Sarauniya Esta, wadda ta faɗa wa sarki, ta kuma nuna masa cewa Mordekai ne ya ji.
೨೨ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.
23 Sa’ad da aka bincika labarin aka kuma iske gaskiya ne, sai aka rataye hafsoshin nan biyu a wurin rataye mai laifi. Aka rubuta dukan wannan a cikin littafin tarihi a gaban sarki.
೨೩ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.