< Fitowa 19 >
1 A rana ta farko a cikin watan uku bayan da Isra’ilawa suka bar Masar, a wannan rana, suka iso Hamadar Sinai.
೧ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
2 Bayan da suka tashi daga Refidim, suka shiga Hamadar Sinai, sai Isra’ilawa suka yi sansani a gaban dutsen.
೨ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
3 Sai Musa ya hau kan dutsen don yă sadu da Allah, Ubangiji kuwa ya kira shi daga dutsen ya ce, “Wannan shi ne abin da za ka faɗa wa gidan Yaƙub, da kuma abin da za ka faɗa wa mutanen Isra’ila.
೩ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
4 ‘Ku da kanku kun ga abin da na yi wa Masar, da yadda na ɗauko ku a kan fikafikan gaggafa na kawo ku wurina.
೪‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
5 Yanzu, in kuka yi mini cikakken biyayya, kuka kuma kiyaye yarjejjeniyata, to, za ku zama keɓeɓɓiyar taska a gare ni a cikin dukan al’ummai. Ko da yake duk duniya tawa ce,
೫ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
6 za ku zama firistoci masu tsarki da kuma al’umma keɓaɓɓiya a gare ni.’ Waɗannan su ne kalmomin da za ka faɗa wa Isra’ilawa.”
೬ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
7 Sai Musa ya koma ya aika a kira dukan dattawan mutane, ya bayyana dukan kalmomin da Ubangiji ya umarta, ya faɗa.
೭ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
8 Dukan mutane suka amsa gaba ɗaya suka ce, “Za mu yi duk abin da Ubangiji ya faɗa.” Sai Musa ya mayar wa Ubangiji amsar da mutane suka bayar.
೮ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
9 Ubangiji kuwa ya ce wa Musa, “Ina zuwa wurinka a cikin baƙin hadari, domin mutane su ji ni ina maganar da kai, domin su amince da kai koyaushe.” Sa’an nan Musa ya faɗa wa Ubangiji abin da mutane suka ce.
೯ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
10 Sai Ubangiji ya ce wa Musa, “Tafi wurin mutanen, ka tsarkake su yau da gobe, ka sa su wanke tufafinsu.
೧೦ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
11 Su zama da shiri a rana ta uku, gama a ranar ce Ubangiji zai sauko a kan Dutsen Sinai a idon dukan mutane.
೧೧ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
12 Sai ka yi wa jama’a iyaka kewaye da dutsen, ka kuma faɗa musu cewa, ‘Ku mai da hankali, kada ku hau dutsen ko ku taɓa gefensa. Duk wanda ya taɓa dutsen, lalle za a kashe shi.
೧೨ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
13 Za a jajjefe shi da duwatsu, ko a harbe shi da kibiyoyi, ba hannun da zai taɓa shi. Mutum ko dabbar da ya taɓa, ba za a bar shi da rai ba.’ Lokacin da aka ji muryar ƙaho ne kawai za su iya taru a gindin dutsen.”
೧೩ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.
14 Bayan da Musa ya gangara wurin mutane, ya tsarkake su, sai suka wanke tufafinsu.
೧೪ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
15 Sa’an nan ya ce wa mutane, “Ku shirya kanku domin rana ta uku. Ku ƙame kanku daga yin jima’i.”
೧೫ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.
16 A safiyar rana ta uku, aka yi tsawa, da walƙiyoyi, sai ga girgije mai duhu a bisa dutsen, aka tsananta busar ƙaho, sai dukan jama’ar da suke cikin sansani suka yi rawar jiki.
೧೬ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
17 Sa’an nan Musa ya jagoranci mutane daga sansani domin su sadu da Allah, sai suka tsaya a gefen dutsen.
೧೭ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.
18 Dutsen Sinai kuwa ya tunnuƙe duka da hayaƙi, gama Ubangiji ya sauko a bisan dutsen cikin wuta. Hayaƙin ya hau kamar hayaƙin da yake fitowa daga matoya, duk dutsen ya yi rawa da ƙarfi,
೧೮ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
19 sai karar ƙaho ya yi ta ƙaruwa. Sa’an nan Musa ya yi magana, murya Allah kuwa ta amsa masa.
೧೯ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
20 Ubangiji ya sauko a kan ƙwanƙolin Dutsen Sinai, ya kira Musa zuwa ƙwanƙolin dutsen. Musa kuwa ya haura
೨೦ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
21 sai Ubangiji ya ce masa, “Ka sauka ka faɗa wa jama’a, kada su kuskura su ƙetare layin iyakan nan, garin son zuwa don ganin Ubangiji, gama duk waɗanda suka yi haka za su mutu.
೨೧ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
22 Ko firistocin da za su kusato Ubangiji sai su tsarkake kansu, don kada in hallaka su.”
೨೨ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.
23 Musa ya ce wa Ubangiji, “Mutanen ba za su hau Dutsen Sinai ba, gama kai da kanka ka gargaɗe mu, ‘Ku sa iyaka kewaye da dutsen ku kuma tsarkake shi.’”
೨೩ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
24 Ubangiji ya amsa, “Sauka ka kawo Haruna tare da kai. Amma kada firistoci da mutane su zarce iyakan nan, a kan za su zo wurin Ubangiji, don kada in hallaka su.”
೨೪ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
25 Saboda haka Musa ya sauka wurin mutane ya kuma faɗa musu.
೨೫ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.