< Irmiya 30 >
1 Ga maganar da ta zo wa Irmiya daga Ubangiji.
೧ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
2 “Ga abin da Ubangiji, Allah na Isra’ila, yana cewa, ‘Ka rubuta a cikin littafi dukan maganganun da na yi maka.
೨“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.
3 Kwanaki suna zuwa,’ in ji Ubangiji, ‘sa’ad da zan komo da mutanena Isra’ila da Yahuda daga bauta in kuma maido da su ga ƙasar da na ba wa kakanninsu mallaka,’ in ji Ubangiji.”
೩ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.
4 Ga kalmomin Ubangiji da ya yi game da Isra’ila da Yahuda,
೪ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,
5 “Ga abin da Ubangiji yana cewa, “‘Ana jin kukan tsoro, razana, ba salama ba.
೫“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;
6 Ku tambaya ku ji. Namiji zai iya haifi’ya’ya? To, me ya sa kuke ganin kowane mai ƙarfi da hannuwansa a kwankwaso kamar mace mai naƙuda, kowace fuska ta koma fari?
೬ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?
7 Kaito, gama wannan rana za tă zama mai girma! Babu kamar ta. Zai zama lokacin wahala wa Yaƙub, amma za a cece shi daga cikinta.
೭ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”
8 “‘A wannan rana,’ in ji Ubangiji Maɗaukaki, ‘Zan karya karkiya daga wuyansu zan kuma cire musu kangi; baƙi ba za su ƙara bautar da su ba.
೮ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
9 A maimakon haka, za su bauta wa Ubangiji Allahnsu Dawuda sarkinsu kuwa, wanda na tayar musu.
೯ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
10 “‘Saboda haka kada ka ji tsoro, ya Yaƙub bawana; kada ka karai, ya Isra’ila,’ in ji Ubangiji. ‘Tabbatacce zan cece ka daga wuri mai nesa, zuriyarka daga ƙasar zaman bautansu. Yaƙub zai sami salama da zaman lafiya, kuma ba wanda zai sa ya ji tsoro.
೧೦ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
11 Ina tare da kai zan kuma cece ka,’ in ji Ubangiji. ‘Ko da yake na hallakar da dukan al’umma gaba ɗaya a inda na warwatsa ku, ba zan hallaka ku gaba ɗaya ba. Zan hore ku amma da adalci kaɗai; ba zan ƙyale ku ku tafi gaba ɗaya ba hukunci ba.’
೧೧ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”
12 “Ga abin da Ubangiji yana cewa, “‘Mikinku marar warkewa ne, raunin da kuka ji ya sha ƙarfin warkarwa.
೧೨ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
13 Babu wanda zai yi roƙo saboda damuwarku, ba magani domin mikinku babu warkarwa dominku.
೧೩ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.
14 Dukan abokanku sun manta da ku; ba su ƙara kulawa da ku. Na buge ku kamar yadda abokin gāba zai yi na kuma hukunta ku yadda mai mugunta zai yi, domin laifinku da girma yake zunubanku kuma da yawa suke.
೧೪ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
15 Me ya sa kuke kuka a kan mikinku, wahalarku da ba ta da magani? Domin laifinku da girma yake da kuma zunubanku masu yawa na yi muku waɗannan abubuwa.
೧೫ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.
16 “‘Amma duk wanda ya cinye ku za a cinye shi; dukan abokan gābanku za su tafi zaman bauta. Waɗanda suka washe ku su ma za a washe su; dukan waɗanda suka mai da ku ganima su ma zan mai da su ganima.
೧೬ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”
17 Amma zan mayar muku da lafiya in kuma warkar da mikinku,’ in ji Ubangiji, ‘domin ana ce da ku yasassu, Sihiyona wadda ba wanda ya kula da ita.’
೧೭ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
18 “Ga abin da Ubangiji yana cewa, “‘Zan mayar da wadatar tentin Yaƙub in kuma ji tausayin wuraren zamansa; za a sāke gina birnin a kufansa, fadar kuwa za tă tsaya a wurin da ya dace da ita.
೧೮ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
19 Daga gare su waƙoƙi za su fito na godiya da kuma sowa ta farin ciki. Zan riɓaɓɓanya su, ba za su kuwa ragu ba; zan kawo musu ɗaukaka, ba kuwa za a ƙasƙanta su ba.
೧೯ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.
20 ’Ya’yansu za su kasance kamar a kwanakin dā jama’arsu kuma za su kahu a gabana; zan hukunta duk wanda ya zalunce su.
೨೦ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.
21 Shugabansu zai zama ɗaya daga cikinsu; mai mulkinsu zai taso daga cikinsu. Zan kawo shi kusa zai kuma zo kusa da ni, gama wane ne zai miƙa kansa don yă yi kusa da ni?’ In ji Ubangiji.
೨೧ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”
22 ‘Saboda haka za ku zama mutanena, ni kuwa in zama Allahnku.’”
೨೨ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
23 Ga shi, hadarin Ubangiji zai fasu cikin hasala, iskar guguwa mai hurawa a kan kawunan mugaye.
೨೩ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
24 Fushi mai zafi na Ubangiji ba zai kawu ba sai ya cika manufofin zuciyarsa gaba ɗaya. A kwanaki masu zuwa za ku gane wannan.
೨೪ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.