< Irmiya 50 >
1 Ga maganar Ubangiji da ya yi ta wurin Irmiya annabi game da Babilon da kuma ƙasar Babiloniyawa.
೧ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.
2 “Ka yi shela ka kuma furta a cikin al’ummai, ka tā da tuta ka kuma furta; kada ku ɓoye kome, amma ku ce, ‘Za a ci Babilon da yaƙi; za a kunyata Bel, Marduk ya cika da tsoro. Siffofinta za su sha kunya gumakanta za su cika da tsoro.’
೨“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
3 Al’umma daga arewa za tă fāɗa mata su mai da ƙasar kango. Ba wanda zai zauna a cikinta; mutane da dabbobi za su gudu.
೩ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.
4 “A kwanakin nan, a wannan lokaci,” in ji Ubangiji, “mutanen Isra’ila da mutanen Yahuda gaba ɗaya za su tafi cikin hawaye su nemi Ubangiji Allahnsu.
೪ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
5 Za su tambayi hanyar zuwa Sihiyona su kuma juya fuskokinsu wajenta. Za su zo su haɗa kansu ga Ubangiji a madawwamin alkawari da ba za a manta da shi ba.
೫ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.
6 “Mutanena sun zama ɓatattun tumaki; makiyayansu sun bauɗar da su suka sa suna ta yawo a cikin duwatsu. Sun yi ta yawo a bisa dutse da tudu suka manta wurin hutunsu.
೬ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
7 Duk wanda ya same su ya cinye su; abokan gābansu suka ce, ‘Ba mu da laifi, gama sun yi zunubi wa Ubangiji, wurin kiwonsu na gaske, Ubangiji, abin sa zuciyar kakanninsu.’
೭ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.
8 “Ku gudu daga Babilon; ku bar ƙasar Babiloniyawa, ku zama kamar awakin da suke bi da garke.
೮ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.
9 Gama zan kuta in kuma kawo a kan Babilon haɗinkan manyan al’ummai na arewa. Za su ja dāgār gāba da ita, kuma daga arewa za a ci ta da yaƙi. Kibiyoyinsu za su zama kamar na gwanayen jarumawa waɗanda ba sa dawowa hannu wofi.
೯ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
10 Saboda haka za a washe Babiloniyawa; dukan waɗanda suka washe ta za su ƙoshi,” in ji Ubangiji.
೧೦ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.
11 “Saboda kuna farin ciki kuna kuma murna, ku da kuka washe gādona, domin kuna tsalle kamar karsana mai sussuka hatsi kuna kuma haniniya kamar ingarmu.
೧೧“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
12 Mahaifiyarku za tă sha babbar kunya; ita da ta haife ku za tă sha kunya. Za tă zama mafi ƙanƙanta na al’ummai, jeji, busasshiyar ƙasa, hamada.
೧೨ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
13 Saboda fushin Ubangiji ba za tă zauna a cikinta ba amma za tă zama kufai gaba ɗaya. Duk waɗanda suka wuce Babilon za su ji tsoro su kuma yi tsaki saboda dukan mikinta.
೧೩ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
14 “Ku ja dāgā kewaye da Babilon, dukanku waɗanda kuke jan baka. Ku harbe ta! Kada ku rage kibiyoyi, gama ta yi zunubi ga Ubangiji.
೧೪ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
15 Ku yi kuwwa a kanta a kowane gefe! Ta miƙa wuya, hasumiyarta ta fāɗi, katangarta sun rushe. Da yake wannan sakayya ce ta Ubangiji, ku ɗauki fansa a kanta; yi mata yadda ta yi wa waɗansu.
೧೫ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
16 Ku datse wa Babilon mai shuka, da mai girbi lauje a lokacin girbi. Saboda takobin mai zalunci bari kowa ya koma ga mutanensa, bari kowa ya gudu zuwa ga ƙasarsa.
೧೬ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
17 “Isra’ila garke ne da ya watse da zakoki suka kora. Na farkon da ya cinye shi sarkin Assuriya ne; na ƙarshen da ya ragargaza ƙasusuwansa Nebukadnezzar sarkin Babilon ne.”
೧೭ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
18 Saboda haka ga abin da Ubangiji Maɗaukaki, Allah na Isra’ila, yana cewa, “Zan hukunta sarkin Babilon da ƙasarsa yadda na hukunta sarkin Assuriya.
೧೮ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
19 Amma zan komo da Isra’ila zuwa wurin kiwonsa zai kuwa yi kiwo a Karmel da Bashan; zai ƙosar da marmarinsa a tuddan Efraim da Gileyad.
೧೯ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.
20 A kwanakin nan, da kuma a lokacin nan,” in ji Ubangiji, “za a yi bincike don laifin Isra’ila, amma ba za a samu ba, kuma don zunubin Yahuda, amma ba za a sami wani abu ba, gama zan gafarta wa raguwar da na rage.
೨೦ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
21 “Ku fāɗa wa ƙasar Meratayim da waɗanda suke zama a Fekod. Ku fafara, ku kashe kuma hallaka su sarai,” in ji Ubangiji. “Ku aikata dukan abin da na umarce ku.
೨೧ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
22 Hargowar yaƙi tana a ƙasar, hargowar babbar hallaka!
೨೨ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.
23 Dubi yadda aka karya aka kuma ragargaza gudumar dukan duniya! Dubi yadda Babilon ta zama kufai a cikin al’ummai!
೨೩ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
24 Na sa miki tarko, Babilon, kika kuwa kamu kafin ki sani; aka same ki aka kuma kama ki domin kin tayar wa Ubangiji.
೨೪ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.
25 Ubangiji ya buɗe taskar makamansa ya fitar da makaman fushinsa, gama Maɗaukaki Ubangiji Mai Iko Duka yana da aikin da zai yi a ƙasar Babiloniyawa.
೨೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
26 Ku zo ku yi gāba da ita daga nesa. Ku buɗe rumbunanta; ku jibga ta kamar tsibin hatsi. Ku hallaka ta sarai kada ku bar mata raguwa.
೨೬ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
27 Ku kashe dukan’yan bijimanta bari su gangara zuwa mayanka! Kaitonsu! Gama ranansu ta zo, lokaci ya yi da za a hukunta su.
೨೭ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
28 Ku saurari masu gudun hijira da masu neman mafaka daga Babilon suna furtawa a Sihiyona yadda Ubangiji Allahnmu ya ɗauki fansa, fansa domin haikalinsa.
೨೮ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
29 “Ku kira’yan baka a kan Babilon, dukan waɗanda suke jan baka. Ku yi sansani kewaye da ita duka; kada ku bar wani ya tsira. Ku sāka mata don ayyukanta; ku yi mata yadda ta yi. Gama ta tayar wa Ubangiji, Mai Tsarkin nan na Isra’ila.
೨೯ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
30 Saboda haka, samarinta za su fāɗi a tituna; za a kawar da dukan sojojinta a wannan rana,” in ji Ubangiji.
೩೦ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ” ಎಂಬುದೇ.
31 “Ga shi, ina gāba da ke, ya ke mai girman kai,” in ji Ubangiji, Ubangiji Maɗaukaki, “gama ranarki ta zo, lokacin da za a hukunta ki.
೩೧ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
32 Mai ɗaga kai za tă yi tuntuɓe ta kuma fāɗi kuma ba wanda zai taimake ta tă tashi; zan hura wuta a garuruwanta da za tă cinye duk waɗanda suke kewaye da ita.”
೩೨ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”
33 Ga abin da Ubangiji Maɗaukaki yana cewa, “An danne mutanen Isra’ila, haka ma mutanen Yahuda. Dukan waɗanda suka kama su suna riƙe su kankan, suna kin barinsu su tafi.
೩೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
34 Duk da haka Mai Fansarsu yana da ƙarfi; Ubangiji Maɗaukaki ne sunansa. Zai kāre muradunsu gabagadi don yă kawo hutu ga ƙasarsu, amma rashin hutu ga waɗanda suke zaune a Babilon.
೩೪ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”
35 “Akwai takobi a kan Babiloniyawa!” In ji Ubangiji “a kan waɗanda suke zama a Babilon da kuma a kan fadawanta da masu hikimarta!
೩೫ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
36 Akwai takobi a kan annabawan ƙaryanta! Za su zama wawaye. Akwai takobi a kan jarumawanta! Za su cika da tsoro.
೩೬ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.
37 Akwai takobi a kan dawakanta da kekunan yaƙinta da kuma dukan baƙin da suke cikin mayaƙanta! Za su zama mata. Akwai takobi a kan dukiyarta! Za a washe su.
೩೭ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
38 Fări a kan ruwanta! Za su bushe ƙaf. Gama ƙasa ce ta gumaka, gumakan da za su haukace da tsoro.
೩೮ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
39 “Saboda haka halittun hamada da kuraye za su zauna a can, a can kuma mujiya za tă zauna. Ba za a ƙara zauna ko a yi zama a cikinta ba daga tsara zuwa tsara.
೩೯ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
40 Yadda Allah ya tumɓuke Sodom da Gomorra tare da maƙwabtan garuruwansu,” in ji Ubangiji “haka ma ba wanda zai zauna a can; ba wani da zai zauna a cikinta.
೪೦ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
41 “Duba! Ga sojoji suna zuwa daga arewa; babbar al’umma da sarakuna masu yawa suna tahowa daga iyakokin duniya.
೪೧ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
42 Suna riƙe da baka da māshi; mugaye ne marasa tausayi. Amonsu ya yi kamar rurin teku yayinda suke hawan dawakansu; suna zuwa kamar mutane a dāgār yaƙi don su fāɗa miki, ya Diyar Babilon.
೪೨ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.
43 Sarkin Babilon ya ji rahotanni game da su, hannunsa kuma ya yi laƙwas. Wahala ta kama shi, zafi kamar na mace mai naƙuda.
೪೩ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
44 Kamar zaki mai haurawa daga kurmin Urdun zuwa wurin kiwo mai dausayi, zan fafare Babilon daga ƙasan nan da nan. Wane ne zaɓaɓɓen da zan naɗa domin wannan? Wane ne kamar ni da zai kalubalance ni? Kuma wanda makiyayi zai iya tsaya gāba da ni?”
೪೪ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
45 Saboda haka, ku ji abin da Ubangiji ya shirya a kan Babilon, abin da ya nufa gāba da ƙasar Babiloniyawa. Za a kwashe ƙananan garkensu a tafi; zai hallaka wurin kiwonsu sarai saboda su.
೪೫ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
46 Da jin an ci Babilon da yaƙi sai duniya ta girgiza; za a ji kukanta cikin al’ummai.
೪೬ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.