< Ayuba 2 >

1 Wata rana kuma mala’iku suka sāke kawo kansu gaban Ubangiji, sai Shaiɗan shi ma ya zo tare da su yă nuna kansa a gabansa.
ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.
2 Sai Ubangiji ya ce wa Shaiɗan, “Daga ina ka fito?” Shaiɗan ya amsa wa Ubangiji ya ce, “Daga yawo a duniya ina kai da kawowa a cikinta.”
ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.
3 Sai Ubangiji ya ce wa Shaiɗan, “Ko ka ga bawana Ayuba? A cikin duniya babu wani kamar sa; shi marar laifi ne, adali kuma, mutum ne mai tsoron Allah ba ruwansa da mugunta. Kuma har yanzu bai fasa zama mai aminci ba duk da wahalar da ka sa na bari ka ba shi ba tare da wani dalili ba.”
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
4 Shaiɗan ya amsa ya ce, “Fata don fata! Mutum zai iya rabuwa da duk abin da yake da shi domin ransa.
ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.
5 Ka ɗan taɓa lafiyar jikinsa ka gani ba shakka zai la’anta ka kana ji kana gani.”
ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.
6 Ubangiji ya ce wa Shaiɗan, “To, shi ke nan, duk abin da yake da shi yana hannunka, amma kada ka taɓa shi, shi kansa.”
ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.
7 Sai Shaiɗan ya bar Ubangiji, ya je ya sa wa Ayuba ƙuraje masu zafi a jikinsa daga tafin ƙafafunsa har zuwa kansa.
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
8 Sai Ayuba ya ɗauki kaskon tukunya yana ta sosa ƙurajen da shi, yayinda yake zaune cikin toka.
ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.
9 Matarsa ta ce masa, “Har yanzu kana nan da amincinka? Ka la’anta Allah ka mutu!”
ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
10 Ya amsa ya ce, “Kina magana kamar wawiya. Alheri kaɗai za mu dinga samu daga Allah ban da wahala?” A cikin wannan duka Ayuba bai yi zunubi ba cikin maganarsa.
೧೦ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
11 Lokacin da abokan Ayuba su uku wato, Elifaz mutumin Teman, Bildad mutumin Shuwa, da Zofar mutumin Na’ama suka ji wahalar da ta auka wa Ayuba, sai suka shirya suka bar gidajensu suka je don su ta’azantar da shi.
೧೧ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.
12 Sa’ad da suka gan shi daga nesa, da ƙyar suka gane shi; sai suka fara kuka da ƙarfi, suka yayyaga tufafinsu suka zuba toka a kawunansu,
೧೨ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
13 sai suka zauna da shi a ƙasa har kwana bakwai. Ba wanda ya ce masa kome, don sun ga tsananin wahalar da yake ciki.
೧೩ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.

< Ayuba 2 >